ಚಿನ್ನದ ಬೆಲೆಯಲ್ಲಿ ಇಳಿಕೆಯಾದರೆ, ಬೆಳ್ಳಿ ಬೆಲೆಯಲ್ಲಿ ಐದು ರೂ ಹೆಚ್ಚಳ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 12,865 ರೂ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 14,035 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 235 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 240 ರೂ ಇದೆ.
ಚಿನ್ನದ ಬೆಲೆಯ ಸತತ ಇಳಿಕೆ ಮುಂದುವರಿಯುತ್ತಿದೆ. ಆಭರಣ ಪ್ರಿಯ ಮಹಿಳೆಯರ ಆನಂದಕ್ಕೆ ಪಾರವೇ ಇಲ್ಲದಂತಾಗಿದೆ. ಚಿನ್ನದ ಬೆಲೆ ಗಗನಕ್ಕೇರಿದ್ದಾಗ ಆತಂಕದಲ್ಲಿ ಚಿನ್ನ ಖರೀದಿ ಬಿಟ್ಟಿರದ ಮಹಿಳೆಯರು ಈಗ ಬಂಗಾರದ ಬೆಲೆ ಸತತವಾಗಿ ಇಳಿಯುತ್ತಿರುವುದರಿಂದ ಚಿನ್ನದಂಗಡಿಗಳಿಗೆ ಲಗ್ಗೆ ಇಡುತ್ತಿದ್ದಾರೆ. ಮಂಗಳವಾರ ಚಿನ್ನದ ಬೆಲೆ ಒಂದೇ ದಿನ 270 ರೂ ಕಡಿಮೆ ಆಗಿದೆ. ಬೆಂಗಳೂರಿನಲ್ಲಿ ಆಭರಣ ಚಿನ್ನದ ಬೆಲೆ 12,865 ರೂ ಮುಟ್ಟಿದೆ. ಇದೇ ವೇಳೆ, ಬೆಳ್ಳಿ ಬೆಲೆಯಲ್ಲಿ ಐದು ರೂ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,28,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,40,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,28,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 24ಕ್ಕೆ)
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,035 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,865 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,526 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,035 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,865 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
ಬೆಂಗಳೂರು: 12,865 ರೂ
ಚೆನ್ನೈ: 13,000 ರೂ
ಮುಂಬೈ: 12,865 ರೂ
ದೆಹಲಿ: 12,880 ರೂ
ಕೋಲ್ಕತಾ: 12,865 ರೂ
ಕೇರಳ: 12,865 ರೂ
ಅಹ್ಮದಾಬಾದ್: 12,870 ರೂ
ಜೈಪುರ್: 12,880 ರೂ
ಲಕ್ನೋ: 12,880 ರೂ
ಭುವನೇಶ್ವರ್: 12,865 ರೂ





