ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗೂಡ್ ನ್ಯೂಸ್ – ವಾರದಲ್ಲಿ 5 ದಿನ ರಾಗಿ ಮಾಲ್ಟ್ ವಿತರಣೆ.

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಈಗಾಗಲೇ ನಡೆಯುತ್ತಿರುವ ರಾಗಿ ಮಾಲ್ಟ್ ವಿತರಣಾ ಯೋಜನೆಯನ್ನು ಮುಂದುವರಿಸಿ, ವಾರದಲ್ಲಿ 3 ದಿನಗಳ ಬದಲು 5 ದಿನಗಳವರೆಗೆ ವಿಸ್ತರಿಸುವ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್ ಅವರು ಈ ವಿಷಯದ ಕುರಿತು ಮಾಹಿತಿ ನೀಡಿದರು.

ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್, ಮುದ್ದೇನಹಳ್ಳಿ (ಚಿಕ್ಕಬಳ್ಳಾಪುರ) ವತಿಯಿಂದ ಈಗಾಗಲೇ ತರಗತಿ 1 ರಿಂದ 10ರ ವರೆಗೆ ಬಿಸಿ ಹಾಲಿನಲ್ಲಿ ಮಿಶ್ರಣ ಮಾಡಿದ “ಸಾಯಿ ಶ್ಯೂರ್” ರಾಗಿ ಹೆಲ್ತ್ ಮಿಕ್ಸ್ ಪೌಡರ್ ವಿತರಣೆ ನಡೆಯುತ್ತಿದೆ. ಈಗಿನಿಂದ ಈ ಸೇವೆ ವಾರದಲ್ಲಿ ಐದು ದಿನ ಲಭ್ಯವಾಗಲಿದೆ.

ಸಚಿವ ಸಂಪುಟದಿಂದ ಇನ್ನಷ್ಟು ಪ್ರಮುಖ ತೀರ್ಮಾನಗಳು:

ರೈತರು ಮತ್ತು ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳನ್ನು ವಾಪಸ್ ಪಡೆಯಲು ನಿರ್ಧಾರ.

ಮೆಟ್ರೋ ಎಲಿವೇಟೆಡ್ ಕಾರಿಡಾರ್ (ಹಂತ-3) ಗೆ ಅನುಮೋದನೆ:
ಜೆಪಿನಗರ 4ನೇ ಹಂತದಿಂದ ಹೆಬ್ಬಾಳ, ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ
ಒಟ್ಟು ಉದ್ದ: 37.121 ಕಿ.ಮೀ.
ಡಬಲ್ ಡೆಕ್ಕರ್ ಮೆಟ್ರೋ ನಿರ್ಮಾಣಕ್ಕೆ ಅನುಮೋದನೆ

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕದಲ್ಲಿ ಬದಲಾವಣೆ:
ಮಾರುಕಟ್ಟೆ ಶುಲ್ಕ: 41 ಪೈಸೆಯಿಂದ 42 ಪೈಸೆಗೆ
ವಹಿವಾಟು ವೆಚ್ಚ: 0.01 ಪೈಸೆ ಹೆಚ್ಚಳ

ಆಶಾ ಕಿರಣ ಯೋಜನೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೊಳ್ಳಲಿದೆ.
ಉಚಿತ ಕಣ್ಣಿನ ತಪಾಸಣೆ ಮತ್ತು ಅಂಧತ್ವ ನಿವಾರಣಾ ಕಾರ್ಯಕ್ರಮ
₹52.85 ಕೋಟಿ ಅನುದಾನ

ಹೊಸ ಮೆಡಿಕಲ್ ಕಾಲೇಜು ಸ್ಥಾಪನೆ – ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ರಾಯಸಂದ್ರ ಗ್ರಾಮದಲ್ಲಿ

25 ಎಕರೆ ಜಮೀನು ಖರೀದಿಗೆ ₹65 ಕೋಟಿ ಮೊತ್ತಕ್ಕೆ ಕರ್ನಾಟಕ ಗೃಹ ಮಂಡಳಿಯಿಂದ ಅನುಮೋದನೆ

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!