ಸರ್ಕಾರಿ ಶಾಲಾ ಪ್ರಾರಂಭೋತ್ಸವ : ಶಾಸಕ ಕೆ .ಹರೀಶ್ ಗೌಡರು ವಿದ್ಯಾರ್ಥಿಗಳಿಗೆ ಶುಭ ಹಾರೈಕೆ.

ಬೇಸಿಗೆ ರಜೆ ಕಳೆದು ಇಂದಿನಿಂದ ಸರ್ಕಾರಿ ಶಾಲೆಗಳು ಪ್ರಾರಂಭವಾಗಿದ್ದು ಮೊದಲ ದಿನವೇ ಹರ್ಷದಿಂದ ಶಾಲೆಯತ್ತ ಹೆಜ್ಜೆ ಹಾಕಿರುವ ವಿದ್ಯಾರ್ಥಿಗಳನ್ನು ಶಾಸಕ ಕೆ .ಹರೀಶ್ ಗೌಡರು ಸ್ವಾಗತಿಸಿದರು.

ಚಾಮರಾಜ ಕ್ಷೇತ್ರದ ಕುಂಬಾರಕೊಪ್ಪಲಿನ ಸರ್ಕಾರಿ ಶಾಲೆ ಹಾಗು ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಮಹಾರಾಣಿ ಶಾಲೆಯಲ್ಲಿ 2025-2026 ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶೈಕ್ಷಣಿಕ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು, ಸಿಹಿ, ಪಠ್ಯಪುಸ್ತಕ ಹಾಗು ಸಮವಸ್ತ್ರವನ್ನು ಸಾಂಕೇತಿಕವಾಗಿ ನೀಡಿ ಮಕ್ಕಳನ್ನು ಸ್ವಾಗತಿಸಿ ಮಾತನಾಡಿದ ಅವರು

ವಿದ್ಯಾರ್ಥಿಗಳಲ್ಲಿ ಜ್ಞಾನದ ಬೆಳಕು ಹೆಚ್ಚಾಗಲಿ ಶಿಕ್ಷಣವೇ ಶಕ್ತಿ, ಶಿಕ್ಷಣ ಕಲಿತ ವ್ಯಕ್ತಿ ತನ್ನ ಜೀವನವನ್ನು ಉತ್ತಮವಾಗಿ ನಿರ್ವಹಿಸಿ, ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡುವರು, ಶಾಲೆಗಳು ಶಿಕ್ಷಣ ನೀಡುವ ಕೇಂದ್ರಗಳಾಗಿದ್ದು, ಅರ್ಹ ವಯಸ್ಸಿನ ಮಕ್ಕಳನ್ನು ಶಾಲೆಗೆ ಸೇರಿಸಿ, ನಿಯಮಿತವಾಗಿ ಶಾಲೆಗೆ ಕಳುಹಿಸಬೇಕು ಎಂದು ಹೇಳಿದರು ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಸಮವಸ್ತ್ರ, ಉಚಿತ ಪಠ್ಯಪುಸ್ತಕ, ಶು-ಸಾಕ್ಸು, ಬಿಸಿಯೂಟ ನೀಡಲಾಗುತ್ತಿದ್ದು ಇದರ ಪ್ರಯೋಜನ ಪಡೆಯಬೇಕೆಂದರು, ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲೂ ಉನ್ನತ ಸ್ಥಾನಗಳನ್ನು ಅಲಂಕರಿಸಿ ದೇಶಕ್ಕೆ ತುಂಬಾ ಕೊಡುಗೆ ನೀಡಿದ್ದಾರೆ ಎಂದರು ,

ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರೇವಣ್ಣ ಅವರ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತ ಪಡಿಸಿ ಕ್ಷೇತ್ರದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಯಾವುದೇ ಕುಂದು ಕೊರತೆಗಳಿದ್ದರೆ ತಕ್ಷಣ ಬಗೆಹರಿಸಿಕೊಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!