ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ ಮೂಲ ಆದಾಯ (ಯುನಿವರ್ಸಲ್ ಬೇಸಿಕ್ ಇನ್‌ಕಮ್) ಪರಿಕಲ್ಪನೆಯನ್ನು ಅತಿದೊಡ್ಡ ಪ್ರಮಾಣದಲ್ಲಿ ಸಾಕಾರಗೊಳಿಸುತ್ತಿರುವ ರಾಜ್ಯ ಕರ್ನಾಟಕ ಎಂಬುದು ಹೆಮ್ಮೆಯ ವಿಷಯವಾಗಿದೆ.ಈ ಯೋಜನೆಗಳು ಮುಂದುವರಿಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಲ್ಲಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕರ್ನಾಟಕ ಸರ್ಕಾರ, ಬೃಹತ್ ಬೆಂಗಳೂರು ಮಹಾನಗರಪಾಲಿಕೆ,ಬೆಂಗಳೂರು ನಗರ ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಲಾಗಿದ್ದ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ,ಗೌರವ ರಕ್ಷೆ ಸ್ವೀಕರಿಸಿ ಅವರು ಮಾತನಾಡಿದರು

ಗೃಹಲಕ್ಷ್ಮಿ,ಶಕ್ತಿ,ಗೃಹಜ್ಯೋತಿ,ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿಯುತ್ತಿರುವವರಿಗೆ ರಾಜ್ಯದಲ್ಲಿ ಆರ್ಥಿಕ ಪ್ರಗತಿ ಪ್ರಗತಿ ಸಾಧಿಸಿ ತೋರಿಸುವ ಮೂಲಕ ನಾವು ಉತ್ತರ ನೀಡಲಿದ್ದೇವೆ.ಹೊಸ ಅವಿಷ್ಕಾರಗಳನ್ನು ನಡೆಸಿ ಅವು ಫಲಾನುಭವಿಗಳಿಗೆ ಇನ್ನಷ್ಟು ಹೆಚ್ಚು ನೆರವಾಗುವ ರೀತಿಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಉದ್ಯುಕ್ತವಾಗಿದೆ ಎಂದರು.

ಶಕ್ತಿ ಯೋಜನೆಯಡಿ ಮಹಿಳೆಯರು 270 ಕೋಟಿ ಟ್ರಿಪ್ ಉಚಿತ ಪ್ರಯಾಣ ಸೌಲಭ್ಯ ಪಡೆದಿದ್ದಾರೆ. ಮಹಿಳೆಯರು 6541 ಕೋಟಿ ರೂ.ಗಳಷ್ಟು ಪ್ರಯಾಣ ವೆಚ್ಚ ಉಳಿತಾಯ ಮಾಡಿದ್ದಾರೆ. ಅನ್ನ ಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರದ ಅಸಹಕಾರದಿಂದಾಗಿ ಅಕ್ಕಿಯ ಬದಲಿಗೆ ನಗದು ವರ್ಗಾವಣೆ ಮಾಡಲಾಗುತ್ತಿದೆ. ನಮ್ಮ ಸರ್ಕಾರದ ಜನಕಲ್ಯಾಣ ಯೋಜನೆಗಳು ಐದು ಗ್ಯಾರಂಟಿಗಳಿಗಷ್ಟೇ ಸೀಮಿತವಾಗಿಲ್ಲ,ದುರ್ಬಲ ವರ್ಗದವರಿಗೆ ಸಾಮಾಜಿಕ ಭದ್ರತೆ ನೀಡುವ ವಿವಿಧ ಯೋಜನೆಗಳಡಿ 13,027 ಕೋಟಿ ರೂ.ವೆಚ್ಚ ಮಾಡಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!