ಅಧಿಕಾರಿಗಳ ಮಟ್ಟದಲ್ಲಿ ಕಮೀಷನ್ ದಂಧೆ ನಡೆದಿರುವುದಾಗಿ ಗುತ್ತಿಗೆ ಸಂಘದವರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಸಹ ಅಪರಾಧ. ಈ ರೀತಿಯ ಕೃತ್ಯದಲ್ಲಿ ಯಾರು ತೊಡಗಬಾರದು. ತಾನು ಇದುವರೆವಿಗೂ ಹಣಬಿಡುಗಡೆ ಮಾಡಲು ಯಾರಿಂದಲೂ ದುಡ್ಡು ಪಡೆದಿಲ್ಲವೆಂದರು.ಡಿಕೆ ಶಿವಕುಮಾರ್ ಅವರು ಇದೇ ಅವಧಿಯಲ್ಲಿ ಮುಖ್ಯಮಂತ್ರಿಗಳಾಗುವ ಸಾಧ್ಯತೆ ಬಗ್ಗೆ ವೀರಪ್ಪ ಮೊಯಿಲಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದರು.
ಉಭಯಸದನಗಳ ಕಾರ್ಯಕಲಾಪಗಳ ಸಲಹಾ ಸಮಿತಿಗಳ ಜಂಟಿ ಸಭೆ ನಡೆಸಲಾಗಿದೆ. ಸರ್ವಪಕ್ಷಗಳ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ನಂತರ, ನಾನು ಉತ್ತರ ನೀಡಲಿದ್ದೇನೆ. ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಮಾರ್ಚ್ 19ರವರೆಗೆ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿದ್ದು, ಮಾರ್ಚ್ 19 ರಂದು ವಿಧಾನಸಭೆಯಲ್ಲಿ ಹಾಗೂ 20 ರಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವುದಾಗಿ ತಿಳಿಸಿದರು.





