ಹಣಕಾಸಿನ ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ : ಸಿಎಂ ಸಿದ್ದರಾಮಯ್ಯ

ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನವಿಲ್ಲದಿದ್ದರೂ, ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು, ಕಾಮಗಾರಿ ಪ್ರಾರಂಭಿಸಿದ ಕಾರಣದಿಂದಾಗಿ ಬಾಕಿ ಬಿಲ್ಲುಗಳು ಹೆಚ್ಚಿವೆ. ಇದಕ್ಕೆ ನಮ್ಮ ಸರ್ಕಾರ ಹೊಣೆಯಾಗಲು ಸಾಧ್ಯವೇ ಎಂದು ಮರುಪ್ರಶ್ನಿಸಿದರು.

ಅಧಿಕಾರಿಗಳ ಮಟ್ಟದಲ್ಲಿ ಕಮೀಷನ್ ದಂಧೆ ನಡೆದಿರುವುದಾಗಿ ಗುತ್ತಿಗೆ ಸಂಘದವರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಸಹ ಅಪರಾಧ. ಈ ರೀತಿಯ ಕೃತ್ಯದಲ್ಲಿ ಯಾರು ತೊಡಗಬಾರದು. ತಾನು ಇದುವರೆವಿಗೂ ಹಣಬಿಡುಗಡೆ ಮಾಡಲು ಯಾರಿಂದಲೂ ದುಡ್ಡು ಪಡೆದಿಲ್ಲವೆಂದರು.ಡಿಕೆ ಶಿವಕುಮಾರ್ ಅವರು ಇದೇ ಅವಧಿಯಲ್ಲಿ ಮುಖ್ಯಮಂತ್ರಿಗಳಾಗುವ ಸಾಧ್ಯತೆ ಬಗ್ಗೆ ವೀರಪ್ಪ ಮೊಯಿಲಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದರು.

ಉಭಯಸದನಗಳ ಕಾರ್ಯಕಲಾಪಗಳ ಸಲಹಾ ಸಮಿತಿಗಳ ಜಂಟಿ ಸಭೆ ನಡೆಸಲಾಗಿದೆ. ಸರ್ವಪಕ್ಷಗಳ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ನಂತರ, ನಾನು ಉತ್ತರ ನೀಡಲಿದ್ದೇನೆ. ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಮಾರ್ಚ್ 19ರವರೆಗೆ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿದ್ದು, ಮಾರ್ಚ್ 19 ರಂದು ವಿಧಾನಸಭೆಯಲ್ಲಿ ಹಾಗೂ 20 ರಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವುದಾಗಿ ತಿಳಿಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!