ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ. ಹವಾಮಾನ ಇಲಾಖೆ ಎಚ್ಚರಿಕೆ !

ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತೆ ಆರಂಭವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ಈ ನಡುವೆ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆಯನ್ನು ನೀಡಿದ್ದು, ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಸೂಚಿಸಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿಯು, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇರುವುದರಿಂದ ಈ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ನದಿಗಳು ಉಕ್ಕಿ ಹರಿಯುವ ಸಾಧ್ಯತೆ ಇರುವ ಕಾರಣದಿಂದ ನದಿಪಾತ್ರ ಪ್ರದೇಶದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಇಲಾಖೆ ಸೂಚಿಸಿದೆ.

ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯ ತೀವ್ರತೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಗದಗ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಬೆಂಗಳೂರು ನಗರದಲ್ಲಿ ಆಗಸ್ಟ್ 21ರ ವರೆಗೆ ಹಗುರ ಮಳೆಯ ಮುನ್ಸೂಚನೆ ನೀಡಲಾಗಿದೆ.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್