ಒಟ್ಟೊಟ್ಟಿಗೆ ನೆರವೇರಿತು ಹಿಂದೂ ಮತ್ತು ಮುಸ್ಲಿಮರ ಸಾಮೂಹಿಕ ವಿವಾಹ; ಗದಗದಲ್ಲಿ ಕೋಮು ಸೌಹಾರ್ದತೆ ಸಂದೇಶ

ಗದಗದಲ್ಲಿ ನಡೆದ ಅಪರೂಪದ ಹಿಂದೂ-ಮುಸ್ಲಿಂ ಸಾಮೂಹಿಕ ವಿವಾಹ ಮಹೋತ್ಸದಲ್ಲಿ ಒಟ್ಟು 36 ಜೋಡಿಗಳು ಹೊಸ ಜೀವನಕ್ಕೆ ಕಾಲಿಟ್ಟಿವೆ. ಬೆಟಗೇರಿ ಅಂಜುಮನ್ ಕಮಿಟಿಯಿಂದ ಆಯೋಜಿಸಲ್ಪಟ್ಟ ಈ ವಿಶೇಷ ಕಾರ್ಯಕ್ರಮ ರಾಜ್ಯಾದ್ಯಂತ ಕೋಮು ಸೌಹಾರ್ದತೆಯ ಸಂದೇಶ ಸಾರಿದೆ. ಪುಟ್ಟರಾಜ್ ಗವಾಯಿಗಳ ಅನುಗ್ರಹದಲ್ಲಿ ನಡೆದ ಈ ಮದುವೆಯು ಬಡವರಿಗೆ ಆರ್ಥಿಕ ಹೊರೆ ತಪ್ಪಿಸುವ ಉದ್ದೇಶ ಹೊಂದಿತ್ತು.
ನಾಡಿನೆಲ್ಲೆಡೆ ಕೋಮು ದಳ್ಳುರಿ ಹೊತ್ತಿ ಉರಿಯುತ್ತಿದೆ. ಜಾತಿ ಜಾತಿಗಳ ಕಲಹ ಶುರುವಾಗಿದೆ. ಆದರೆ ಇತ್ತ ನಡೆದಾಡುವ ದೇವರ ನಾಡಿನಲ್ಲಿ ಹಿಂದೂ-ಮುಸ್ಲಿಂ ಭಾಯಿ ಭಾಯಿ ಬದುಕು ಸಾಗಿಸುತ್ತಿದ್ದಾರೆ. ಲಿಂಗೈಕ್ಯ ಪಂಡಿತ ಪುಟ್ಟರಾಜ್ ಗವಾಯಿಗಳ ನಡೆದಾಡಿದ ನೆಲದಲ್ಲಿ ಹಿಂದೂ-ಮುಸ್ಲಿಂ ಬಾಂಧವರ ಸಾಮೂಹಿಕ ವಿವಾವ ಮಹೋತ್ಸವ ಅದ್ಧೂರಿಯಾಗಿ ನಡೆದದ್ದು, 36 ನವದಂಪತಿಗಳು ಹೊಸ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಿಂಗೈಕ್ಯ ಪಂಡಿತ ಪುಟ್ಟರಾಜ್ ಗವಾಯಿಗಳು ನಡೆದಾಡಿದ ನೆಲ, ಸಂಗೀತ ಬೀಡು ಗದಗ ನಗರ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದೆ. ಅಂಜುಮನ್ ಶಾಲೆ‌ ಆವರಣದಲ್ಲಿ ಹಿಂದೂ, ಮುಸ್ಲಿಂ ಜೋಡಿಗಳ ಸಾಮೂಹಿಕ ವಿವಾಹ ಮಹೋತ್ಸವ ಬಹಳ ಅದ್ಧೂರಿಯಾಗಿ ನಡೆದಿದೆ. ಬೆಟಗೇರಿ‌ ಅಂಜುಮನ್ ಕಮಿಟಿ ವತಿಯಿಂದ ಸಾಮೂಹಿಕ ವಿವಾಹ ಮಹೋತ್ಸವ ಆಯೋಜನೆ ಮಾಡಲಾಗಿತ್ತು. ಈ ಸಾಮೂಹಿಕ ಮದುವೆ ಕಾರ್ಯಕ್ರಮದಲ್ಲಿ 36 ಜೋಡಿಗಳು ಹೊಸ ದಾಂಪತ್ಯ ಜೀವನಕ್ಕೆ ಕಾಲಿಟ್ಟಿವೆ. 26 ಹಿಂದೂ‌ ಜೋಡಿಗಳು, 10 ಮುಸ್ಲಿಂ ಜೋಡಿಗಳು ಹಸೆಮಣೆ ಏರಿದ್ದಾರೆ. ಆ ಮೂಲಕ ನಾಡಿಗೆ ಕೋಮು ಸೌಹಾರ್ದತೆ ಸಂದೇಶ ಸಾರಿದ್ದಾರೆ.

ಈ ವೇಳೆ ಮಾತನಾಡಿದ ಪುಟ್ಟರಾಜ್ ಗವಾಯಿಗಳ ಮಠದ ಪೀಠಾಧಿಪತಿ ಕಲ್ಲಯ್ಯಜ್ಜನವರು, ಇಂದಿನ ದುಬಾರಿ ಜಗತ್ತಿನಲ್ಲಿ ಮದುವೆಗೆ ಲಕ್ಷಾಂತರ ರೂ ಖರ್ಚು ಮಾಡಲಾಗುತ್ತಿದೆ. ಬಡವರಿಗೆ ಮದುವೆ ಮಾಡುವುದಂದರೆ ಕಷ್ಟದ ಕೆಲಸ. ಆದರೆ ಬೆಟಗೇರಿ ಅಂಜುಮನ್ ಕಮಿಟಿ ಸರ್ವಧರ್ಮಗಳ ಸಾಮೂಹಿಕ ವಿವಾಹ ಮಹೋತ್ಸವ ಹಮ್ಮಿಕೊಂಡಿದ್ದು ಖುಷಿಯ ವಿಚಾರ ಎಂದಿದ್ದಾರೆ.
ಬೆಟಗೇರಿ ಅಂಜುಮನ್ ಕಮಿಟಿಯಿಂದ ನವ ಜೋಡಿಗಳಿಗೆ ತಾಳಿ, ಕಾಲುಂಗರ, ಬಟ್ಟೆಗಳು ವಿತರಣೆ ಮಾಡಲಾಗಿದೆ. ಕಮಿಟಿ ಅಧ್ಯಕ್ಷ ಪೀರಸಾಬ್ ಕೌತಾಳ ದಂಪತಿ ನವಜೋಡಿಗಳಿಗೆ ತಾಳಿ, ಕಾಲುಂಗರ ನೀಡಿದರು. ಮದುವೆಗೆ ಅಗಮಿಸಿದ 6-7 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. 10 ಮುಸ್ಲಿಂ ಜೋಡಿಗಳಿಗೆ ಅವರ ಸಂಪ್ರದಾಯದಂತೆ ಮತ್ತು 26 ಹಿಂದೂ ಜೋಡಿಗಳಿಗೆ ಹಿಂದೂ ಸಂಪ್ರದಾಯದಂತೆ ಮದುವೆ ಮಾಡಲಾಗಿದೆ. ಪುಟ್ಟರಾಜ್ ಗವಾಯಿಗಳ‌ ಮಠದ ಪೀಠಾಧಿಪತಿ ಕಲ್ಲಯ್ಯಜ್ಜನವರು ಹಾಗೂ ಮುಸ್ಲಿಂ ಧರ್ಮಗುರುಗಳ ಸಾನಿಧ್ಯದಲ್ಲಿ ಹಿಂದೂ-ಮುಸ್ಲಿಂ ಸಾಮೂಹಿಕ ವಿವಾಹ ಮಹೋತ್ಸವ ನಡೆಯಿತು.
ಧರ್ಮಗಳ ಮಧ್ಯೆ ನಡೆಯುವ ಗಲಾಟೆ, ಗದ್ದಲಗಳ ಮಧ್ಯೆ ಪುಟ್ಟರಾಜ್ ಗವಾಯಿಗಳು ನಡೆದಾಡಿದ ನೆಲ ಗದಗ ನಗರದಲ್ಲಿ ನಡೆದ ಹಿಂದೂ-ಮುಸ್ಲಿಂ ಸಾಮೂಹಿಕ ವಿವಾಹ ಮಹೋತ್ಸವ ದೇಶದಲ್ಲೆಡೆ ಕೋಮು ಸೌಹಾರ್ದತೆ ಸಂದೇಶ ಸಾರಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!