ಧಾರಾಕಾರ ಮಳೆಯಿಂದ ಮೂರು ಜಿಲ್ಲೆಗಳಲ್ಲಿ ಇಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ..!

ಇಡೀ ದಿನ ಮಳೆ ಸಾಧ್ಯತೆ; ನಾಳೆ ಬೆಂಗಳೂರು ನಗರದಾದ್ಯಂತ ಶಾಲೆಗಳಿಗೆ ರಜೆ ಘೋಷಣೆ
ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮುಂಜಾಗ್ರತೆ ಕ್ರಮವಾಗಿ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನಿರಂತರವಾಗಿ ಕೊಡಗು ಜಿಲ್ಲೆಯುಲ್ಲಿ ಸುರಿಯುತ್ತಿರುವ ಭಾರೀ ಮಳೆ‌ಯ ಹಿನ್ನೆಲೆಯಲ್ಲಿ ಇಂದು ಕೊಡಗಿನ ಶಾಲೆ, ಅಂಗನವಾಡಿ ಮತ್ತು ಕಾಲೇಜುಗಳಿಗೆ ರಜೆ‌ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಇನ್ನು, ಬೀದರ್ ಜಿಲ್ಲೆಯಾದ್ಯಂತ ನಿರಂತರ ಮಳೆ, ನೆರೆ ಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ ಹಿನ್ನೆಲೆಯಲ್ಲಿ ರಜೆ ಘೋಷಿಸಿ ಮಾಡಲಾಗಿದೆ. ಕಳೆದ 3 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವ್ಯಾಪಕ ಮಳೆ ಹಿನ್ನೆಲೆ ಜಿಲ್ಲಾಡಳಿತ ಮುಂಜಾಗೃತಾ ಕ್ರಮವಾಗಿ ರಜೆ ಘೋಷಣೆ ಮಾಡಿದೆ.

ಇತ್ತ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಜಿಲ್ಲೆಯ 3 ತಾಲೂಕುಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಮಳೆ‌ ಹೆಚ್ಚಿರುವ ಹಿನ್ನೆಲೆಯಲ್ಲಿ ಮುಂಜಾಗೃತೆ ವಹಿಸುವಂತೆ ಹವಾಮಾನ ಸೂಚನೆ ನೀಡಿದೆ.

ವಿ

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್