HoneyTrap ಕೇಸ್‌ನ ಟೀಸರ್‌ನಲ್ಲಿ ಬೇರೆಯದ್ದೇ ಕೆಲಸ ಆಗುತ್ತಿದೆ – ನಿಖಿಲ್ ಕುಮಾರಸ್ವಾಮಿ ಆರೋಪ.

ಬೆಂಗಳೂರು: ಸಚಿವರ ಹನಿಟ್ರ್ಯಾಪ್ ಕೇಸ್ನ ಟೀಸರ್ನಲ್ಲಿ ಒಂದು ತೋರಿಸಿ, ಸಿನಿಮಾವನ್ನು ಬೇರೆಯದ್ದೇ ರೀತಿಯಲ್ಲಿ ತೋರಿಸುವ ಕೆಲಸ ಆಗುತ್ತಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಹನಿಟ್ರ್ಯಾಪ್ ಕೇಸ್ ಸಂಬಂಧ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಸಚಿವರೇ ಸದನದ ಒಳಗೆ ಹನಿಟ್ರ್ಯಾಪ್ ಬಗ್ಗೆ ಆರೋಪ ಮಾಡಿದ್ದರು. ಈಗ ಅವರ ಮಗ ಕೊಲೆ ಕೇಸ್ ಬಗ್ಗೆ ಆರೋಪ ಮಾಡಿದ್ದಾರೆ. ಇದೆಲ್ಲವನ್ನೂ ರಾಜ್ಯದ ಜನರಿಗೆ ಬಿಡುತ್ತೇನೆ. ಮೊದಲು ಸಿನಿಮಾ ಟೀಸರ್ ತೋರಿಸಿದರು. ಆದರೆ ಒಳಗೆ ಸಿನಿಮಾ ಬೇರೆಯೇ ಆಗಿದೆ. ಅದೇನು ಅಂತ ಅವರಿಗೆ ಬಿಡುತ್ತೇನೆ. ಹನಿಟ್ರ್ಯಾಪ್ ಪ್ರಜಾಪ್ರಭುತ್ವಕ್ಕೆ ಮಾರಕ. ವಿಧಾನಸೌಧದಲ್ಲಿ ಹನಿಟ್ರ್ಯಾಪ್ ಬಗ್ಗೆ ಪ್ರಸ್ತಾಪ ಆಗುವುದು ಅತ್ಯಂತ ಮಾರಕವಾದ ವಿಚಾರ. ಯಾವುದೋ ಸ್ಥಾನದ ಮೇಲೆ ಅಪೇಕ್ಷೆ ಇಟ್ಟವರು ಹೀಗೆ ಅಡ್ಡದಾರಿ ಹಿಡಿದಿದ್ದಾರೆ. ವಾಮಮಾರ್ಗದಲ್ಲಿ ತೇಜೋವಧೆ ಮಾಡೋದು ಸರಿಯಲ್ಲ. ಇದು ಸಮಾಜಕ್ಕೆ ಮಾರಕ ಎಂದು ತಿಳಿಸಿದರು.

ಹನಿಟ್ರ್ಯಾಪ್ ಯಾರು ಮಾಡಿದ್ದಾರೆ ಎಂದು ಸರ್ಕಾರ ನಡೆಸುತ್ತಿರುವವರು ಹೇಳಬೇಕು. ಪಾರದರ್ಶಕವಾಗಿ ತನಿಖೆ ಮಾಡಿ ಸರ್ಕಾರ ಹನಿಟ್ರ್ಯಾಪ್ ಬಗ್ಗೆ ಜನರ ಮುಂದೆ ಇಡಲಿ. ಪ್ರಭಾವಿ ಸಚಿವರಿಗೆ ಹನಿಟ್ರ್ಯಾಪ್ ಆಗಿದೆ. ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಅವರೇ ಸರ್ಕಾರ ನಡೆಸುತ್ತಿದ್ದಾರೆ. ಅವರೇ ತನಿಖೆ ಮಾಡಿ ಸತ್ಯಾಸತ್ಯಾತೆ ಹೊರಗೆ ಇಡಲಿ ಎಂದು ಆಗ್ರಹಿಸಿದರು.

ಹನಿಟ್ರ್ಯಾಪ್ ಕೇಸ್ನ ತನಿಖೆ ನಿಧಾನವಾಗುತ್ತಿದೆ. ಸರ್ಕಾರ 2 ವರ್ಷಗಳಲ್ಲಿ ವಿರೋಧ ಪಕ್ಷದವರನ್ನ ಮುಗಿಸಲು ಯಾವ ಮಟ್ಟಕ್ಕೆ ಬೇಕಾದರೂ ಇಳಿದು ಕೆಲಸ ಮಾಡಿದೆ. ಆದರೆ ಹನಿಟ್ರ್ಯಾಪ್ ಕೇಸ್ನಲ್ಲಿ ಯಾಕೆ ತನಿಖೆ ನಿಧಾನವಾಗುತ್ತಿದೆ. ಸಿಟಿ ರವಿ (CT Ravi) ಕೇಸ್ನಲ್ಲಿ ಅಷ್ಟೊಂದು ಆಸಕ್ತಿವಹಿಸಿ ಏನೇನೋ ಮಾಡಿದರು. ಅವರೇನು ಭಯೋತ್ಪಾದಕರಾ? ಅಷ್ಟೊಂದು ಹೈಡ್ರಾಮಾ ಮಾಡೋಕೆ? ಆದರೆ ಹಾಗೆ ಎಂಎಲ್ಸಿ (MLC) ಒಬ್ಬರನ್ನ ನಡೆಸಿಕೊಂಡಿದ್ದು ಸರಿಯಲ್ಲ. ವಿಪಕ್ಷಗಳನ್ನು ಹಾಗೇ ನಡೆಸಿಕೊಳ್ಳುವವರು, ಸಚಿವರ ಮೇಲೆ ಆರೋಪ ಮಾಡಿದರೆ ಯಾಕೆ ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!