ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ : ಕುಮಾರಸ್ವಾಮಿ

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಆಗಿರೋ ಘಟನೆ ನಾಗಮಂಗಲದಲ್ಲಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಅನ್ಯಕೋಮಿನ ಯುವಕರಿಂದ ಈ ಕೃತ್ಯ ಎಸಗಲಾಗಿದೆ ಎನ್ನಲಾಗಿದೆ.

ಈ ಘಟನೆಯ ಬಗ್ಗೆ ಮಂಡ್ಯ ಸಂಸದ, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ.

ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ.

@INCKarnataka ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ.

ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ; ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ ’ ಎಂದು ಹೆಚ್‌.ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!