ಇಮ್ರಾನ್ ತಾಹಿರ್‌ಗೆ ಎರಡೇ ಬಾರಿ ಹ್ಯಾಟ್ರಿಕ್ ಮಿಸ್: ಶ್ರೇಷ್ಠ ಬೌಲಿಂಗ್ಗೂ ಯಶಸ್ವಿ ಅಂತ್ಯವಿಲ್ಲ.

ಕೆರಿಬಿಯನ್ ಪ್ರೀಮಿಯರ್ ಲೀಗ್‌ನ 17ನೇ ಪಂದ್ಯದಲ್ಲಿ ಟ್ರಿನ್‌ಬಾಗೋ ನೈಟ್ ರೈಡರ್ಸ್ ತಂಡ ಗಯಾನಾ ಅಮೆಝಾನ್ ವಾರಿಯರ್ಸ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದ ಟ್ರಿನ್‌ಬಾಗೋ ನೈಟ್ ರೈಡರ್ಸ್ ನಾಯಕ ನಿಕೋಲಸ್ ಪೂರನ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದು, ಗಯಾನಾ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿತು.

ಲಕ್ಷ್ಯ ಬೆನ್ನತ್ತಿದ ಟ್ರಿನ್‌ಬಾಗೋ ಪರ ಅಲೆಕ್ಸ್ ಹೇಲ್ಸ್ 74 ರನ್ ಹಾಗೂ ಕಾಲಿನ್ ಮನ್ರೋ 52 ರನ್ ಬಾರಿಸಿ ತಂಡವನ್ನು ಸುಲಭ ಗೆಲುವಿನತ್ತ ನಡಿಸಿದರು. ಇವರ ಆರ್ಭಟದ ನಡುವೆಯೂ ಗಯಾನಾ ನಾಯಕ ಇಮ್ರಾನ್ ತಾಹಿರ್ ತಮ್ಮ ಗಮನಸೆಳೆಯುವ ಬೌಲಿಂಗ್ ಮೂಲಕ ಮೆರೆದರು.

10ನೇ ಓವರ್‌ನಲ್ಲಿ ತಾಹಿರ್ ಮೊದಲಿಗೆ ಮನ್ರೋನನ್ನು ಔಟ್ ಮಾಡಿದ್ದು, ಮುಂದಿನ ಎಸೆತದಲ್ಲಿ ಪೂರನ್‌ಗೆ ಡಕ್ ನೀಡಿದರು. ಹ್ಯಾಟ್ರಿಕ್‌ಗಾಗಿ ಬೃಹತ್ ಅವಕಾಶ ಸಿಕ್ಕರೂ, 5ನೇ ಎಸೆತದಲ್ಲಿ ಅದು ಕೈತಪ್ಪಿತು. ಆದರೆ ಓವರ್‌ನ ಕೊನೆಯ ಎಸೆತದಲ್ಲಿ ಕೀಸ್ ಕಾರ್ಟಿಯನ್ನು ಬೌಲ್ಡ್ ಮಾಡಿದರು.

ಇದೇ ರೀತಿಯಲ್ಲಿ ತಮ್ಮ ಅಂತಿಮ spell‌ನ ಆರಂಭದಲ್ಲಿ ಅಲೆಕ್ಸ್ ಹೇಲ್ಸ್‌ನ ಕೀ ವಿಕೆಟ್ ಕಬಳಿಸಿದ ತಾಹಿರ್, ತಮ್ಮ ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ ಮತ್ತೆ ವಿಕೆಟ್ ಪಡೆದರು. ಈ ಮೂಲಕ ಮುಂದಿನ ಓವರ್‌ನ ಮೊದಲ ಎಸೆತದಲ್ಲಿ ಮತ್ತೆ ಹ್ಯಾಟ್ರಿಕ್ ಅವಕಾಶ ಸಿಕ್ಕರೂ, ಈ ಬಾರಿಗೆ ಕೂಡ ಯಶಸ್ಸು ಸಿಕ್ಕಿಲ್ಲ.

ಆದರೂ, ತಾಹಿರ್ 4 ಓವರ್‌ಗಳಲ್ಲಿ ಕೇವಲ 27 ರನ್ ನೀಡಿ 4 ಪ್ರಮುಖ ವಿಕೆಟ್ ಕಬಳಿಸಿದರು. ಆದರೆ ಅವರ ಶ್ರೇಷ್ಠ ಪ್ರಯತ್ನದ ನಡುವೆಯೂ, ಟ್ರಿನ್‌ಬಾಗೋ ನೈಟ್ ರೈಡರ್ಸ್ ತಂಡ 17.2 ಓವರ್‌ಗಳಲ್ಲಿ ಗುರಿ ತಲುಪಿ ಗೆಲುವು ಸಾಧಿಸಿತು.

Related Posts

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹ ಇಡೀ ವಿಶ್ವದ ಗಮನ ಸೆಳೆದಿದೆ. ಇವರಿಬ್ಬರ ರಾಜತಾಂತ್ರಿಕ ಒಡನಾಟವು ಭಾರತ ಮತ್ತು ಇಟಲಿ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಜಿ7…

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

You Missed

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!