ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಸಭ್ಯ ಕಮೆಂಟ್ ಪ್ರಕರಣ: 2 ನೋಟಿಸ್​​ಗೂ ಉತ್ತರ ನೀಡದ ವಿಜಯಲಕ್ಷ್ಮಿ

ವಿಜಯಲಕ್ಷ್ಮಿ ದರ್ಶನ್ ಅವರಿಗೆ ಅಶ್ಲೀಲ, ಅಸಭ್ಯ ಕಮೆಂಟ್ ಬಂದಿದೆ ಎಂದು ದೂರು ನೀಡಲಾಗಿತ್ತು. ಆದರೆ ಅದಕ್ಕೆ ಸಂಬಂಧಿಸಿದ ನೋಟಿಸ್​​ಗಳಿಗೆ ವಿಜಯಲಕ್ಷ್ಮಿ ಅವರು ಯಾವುದೇ ಉತ್ತರ ನೀಡುತ್ತಿಲ್ಲ. ಈಗಾಗಲೇ ಎರಡು ನೋಟಿಸ್ ಕಳಿಸಿರುವ ಪೊಲೀಸರು ಮೂರನೇ ನೋಟಿಸ್ ಕಳಿಸಲು ಮುಂದಾಗಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿಗೆ ಕೆಡಿಗೇಡಿಗಳು ಅಸಭ್ಯ ಕಮೆಂಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭ ಆಗಿತ್ತು. ಅಶ್ಲೀಲ ಕಮೆಂಟ್​​ಗಳಿಗೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ವಿಜಯಲಕ್ಷ್ಮಿ ಅವರಿಗೆ ಪೊಲೀಸರು ಎರಡು ಬಾರಿ ನೋಟಿಸ್ ಕಳಿಸಿದ್ದಾರೆ. ಆದರೆ ಈ ಎರಡೂ ನೋಟಿಸ್​​ಗಳಿಗೆ ಅವರು ಉತ್ತರ ನೀಡಿಲ್ಲ! ಘಟನೆ ಬಗ್ಗೆ ಹೇಳಿಕೆ ದಾಖಲಿಸಿಕೊಳ್ಳಲು ಚೆನ್ನಮ್ಮನಕರೆ ಅಚ್ಚುಕಟ್ಟು ಪೊಲೀಸರಿಂದ ನೋಟಿಸ್ ಕಳಿಸಲಾಗಿದೆ. ಪೊಲೀಸರ ನೋಟಿಸ್​​ಗಳಿಗೆ ವಿಜಯಲಕ್ಷ್ಮಿ ಅವರು ಕ್ಯಾರೇ ಎನ್ನುತ್ತಿಲ್ಲ.
ವಿಜಯಲಕ್ಷ್ಮಿ ದರ್ಶನ್ ಬಗ್ಗೆ ಕೆಟ್ಟ ಕಮೆಂಟ್​​ಗಳು ಬಂದಿವೆ ಎಂದು ಮಹಿಳಾ ಆಯೋಗಕ್ಕೆ ದೂರು ನೀಡಲಾಗಿತ್ತು. ಹಾಗಾಗಿ ಮಹಿಳಾ ಆಯೋಗದಿಂದ ಸುಮೋಟೊ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಲಾಗಿತ್ತು. ಎರಡು ನೋಟಿಸ್​​ಗಳಿಗೂ ವಿಜಯಲಕ್ಷ್ಮಿ ಅವರಿಂದ ಯಾವುದೇ ಉತ್ತರ ಬಾರದ ಹಿನ್ನೆಲೆಯಲ್ಲಿ ಈಗ ಮೂರನೇ ನೋಟಿಸ್ ನೀಡಲು ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರ ಸಿದ್ಧತೆ ಮಾಡಿಕೊಂಡಿದ್ದಾರೆ.

ಒಂದು ವೇಳೆ, ಮೂರನೇ ನೋಟಿಸ್​ಗೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದಾದರೆ ಪೊಲೀಸರು ಈ ಪ್ರಕರಣವನ್ನು ಮುಕ್ತಾಯ ಮಾಡಲಿದ್ದಾರೆ. ನ್ಯಾಯಾಲಯಕ್ಕೆ ಸಿ ರಿಪೋರ್ಟ್ ಸಲ್ಲಿಕೆ ಮಾಡಲಿದ್ದಾರೆ. ಮುಂದಿನ ತನಿಖೆಗೆ ಯಾವುದೇ ಮಾಹಿತಿ ಅಥವಾ ಲೀಡ್ ಸಿಗುತ್ತಿಲ್ಲ ಎಂದು ಸಿ ರಿಪೋರ್ಟ್ ಸಲ್ಲಿಕೆ ಮಾಡಲಾಗುತ್ತದೆ. ಈಗಲಾದರೂ ವಿಜಯಲಕ್ಷ್ಮಿ ಅವರು ನೋಟಿಸ್​​ಗೆ ಪ್ರತಿಕ್ರಿಯಿಸುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕು.

ಕಳೆದ ಎರಡು ವರ್ಷಗಳ ಹಿಂದಿನ ಕಾಮೆಂಟ್​​ಗೆ ಇತ್ತೀಚೆಗೆ ದೂರು ನೀಡಲಾಯಿತು. 6 ಟ್ವಿಟರ್ ಖಾತೆಗಳು ಕೂಡ ಎರಡು ವರ್ಷಗಳ ಹಿಂದೆಯೇ ಡಿಲೀಟ್ ಆಗಿವೆ. ಕಳೆದ ಎರಡು ವರ್ಷಗಳಿಂದ ಆರು ಟ್ಟಿಟರ್ ಅಕೌಂಟ್​​ಗಳಿಂದ ಯಾವುದೇ ಮೆಸೇಜ್​​ಗಳು ವಿನಿಮಯ ಆಗಿಲ್ಲ. ಈ ಎಲ್ಲ ಮಾಹಿತಿಯನ್ನು ಕಲೆ ಹಾಕಿರುವ ಸಿಕೆ ಅಚ್ಚುಕಟ್ಟು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ಅರೆಸ್ಟ್ ಆದಾಗಿನಿಂದ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಟ್ಟಿಗರು ಪರ-ವಿರೋಧ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಭರದಲ್ಲಿ ಕೆಲವರು ಅಸಭ್ಯ, ಅಶ್ಲೀಲ ಪದ ಬಳಕೆ ಮಾಡುತ್ತಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು