ವರುಣದಲ್ಲೂ ಅಂತಾರಾಷ್ಟ್ರೀಯ ವಸತಿ ಶಾಲೆ – ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮಾತ್ರ ಅವಕಾಶ….!

ವರುಣದಲ್ಲೂ ಅಂತಾರಾಷ್ಟ್ರೀಯ ವಸತಿ ಶಾಲೆ – ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮಾತ್ರ ಅವಕಾಶ….!

: ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆ ನಾನಾ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿರುವ ರಾಜ್ಯ ಸರಕಾರ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಅಂತಾರಾಷ್ಟ್ರೀಯ ವಸತಿ ಶಾಲೆ ತೆರೆಯಲು ನಿರ್ಧರಿಸಿದೆ.

ಸಿಎಂ ತವರು ಜಿಲ್ಲೆ ಸೇರಿದಂತೆ ಎರಡು ಜಿಲ್ಲೆಗಳಲ್ಲಿ ಅಂತಾ ರಾಷ್ಟ್ರೀಯ ವಸತಿ ಶಾಲೆಯನ್ನು ಆರಂಭಿಸಲು ಕಾರ್ಮಿಕ ಇಲಾಖೆ ಯೋಜನೆ ರೂಪಿಸಿದ್ದು, ಇದು ಯಶಸ್ವಿಯಾಗುತ್ತಿದ್ದಂತೆ ಉಳಿದ ಎಲ್ಲ ಜಿಲ್ಲೆಗಳಲ್ಲಿಯೂ ವಸತಿ ಶಾಲೆಯನ್ನು ತೆರೆಯಲು ಕ್ರಮ ವಹಿಸಲಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಈ ವಸತಿ ಶಾಲೆ ಯೋಜನೆಯ ರೂವಾರಿಯಾಗಿದ್ದು, ತಾವು ಉಸ್ತುವಾರಿ ಸಚಿವರಾಗಿ ಪ್ರತಿನಿಧಿಸುವ ಧಾರವಾಡ ಜಿಲ್ಲೆಯಲ್ಲಿ ಪ್ರಾಯೋಗಿ ಕವಾಗಿ ಈ ಶಾಲೆಯನ್ನು ತೆರೆಯಲು ನಿರ್ಧರಿಸಿದ್ದರು. ಬಳಿಕ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಮನವಿ ಮೇರೆಗೆ…
[2:14 pm, 1/9/2025] Harshi: ಮೈಸೂರು ತಾಲ್ಲೂಕಿನ ವರುಣ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ವಸತಿ ಶಾಲೆ ಆರಂಭವಾಗುತ್ತಿದೆ.
ಈ ಶಾಲೆಯು ಕಟ್ಟಡ ಕಾರ್ಮಿಕರ ಮಕ್ಕಳಿಗೇ ಮೀಸಲಾಗಿದ್ದು, ರಾಜ್ಯ ಸರ್ಕಾರದಿಂದಲೇ ವಿಶೇಷ ಯೋಜನೆ ರೂಪಿಸಲಾಗಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಪ್ರಸ್ತಾಪದಂತೆ, ಪ್ರಾಯೋಗಿಕವಾಗಿ ಮೊದಲ ಹಂತದಲ್ಲಿ ಧಾರವಾಡ ಜಿಲ್ಲೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ವರುಣದಲ್ಲಿ ಶಾಲೆ ಆರಂಭವಾಗಲಿದೆ. ನಂತರ ಹಂತ ಹಂತವಾಗಿ ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು.

ಮೈಸೂರು ಜಿಲ್ಲೆಯಲ್ಲಿ ಶಾಲೆ ನಿರ್ಮಾಣಕ್ಕಾಗಿ ಕಾರ್ಮಿಕ ಇಲಾಖೆ ಈಗಾಗಲೇ 20 ಎಕರೆ ಜಾಗ ಒದಗಿಸಲು ಜಿಲ್ಲಾಡಳಿತಕ್ಕೆ ಪತ್ರ ಬರೆದಿದೆ. ಜಾಗ ಅಂತಿಮವಾದ ತಕ್ಷಣ ಕಟ್ಟಡ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ.
ಏಕೆ ಈ ಶಾಲೆ?
ಕಟ್ಟಡ ಕಾರ್ಮಿಕರು ಉದ್ಯೋಗಕ್ಕಾಗಿ ಆಗಾಗ ಸ್ಥಳಾಂತರಗೊಳ್ಳುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡೆತಡೆ ಉಂಟಾಗುತ್ತಿದೆ. ಹಲವಾರು ಮಕ್ಕಳು ಶಾಲೆ ಬಿಡಿ ಕಟ್ಟಡ ಕಾರ್ಮಿಕರ ಕೆಲಸದಲ್ಲಿ ತೊಡಗುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರವಾಗಿ 1ರಿಂದ 10ನೇ ತರಗತಿಯವರೆಗೆ ಉಚಿತ ಶಿಕ್ಷಣ ಹಾಗೂ ವಸತಿ ಸೌಲಭ್ಯವಿರುವ ಅಂತಾರಾಷ್ಟ್ರೀಯ ವಸತಿ ಶಾಲೆ ಪ್ರಾರಂಭವಾಗುತ್ತಿದೆ.

ಇಲ್ಲಿ ಸಾವಿರಕ್ಕೂ ಹೆಚ್ಚು ಮಕ್ಕಳು ಶಿಕ್ಷಣ ಪಡೆಯುವ ಅವಕಾಶ ದೊರಕಲಿದೆ
.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!