ಆಗಸ್ಟ್ 24 ರಂದು ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾನೆ. ವಿಚಾರಣೆ ವೇಳೆ ತನಿಖಾಧಿಕಾರಿಗಳು ಸಮೀರ್ ವಾಯ್ಸ್ ಸ್ಯಾಂಪಲ್ ಕೂಡ ಪಡೆದುಕೊಂಡಿದ್ದಾರೆ.
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಮಯೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅಪರಾಧ ಕೃತ್ಯಗಳ ಆರೋಪದ ಕುರಿತು ಸಮೀರ್ ತನ್ನ ಯೂಟ್ಯೂಬ್ ಚಾನೆಲ್ ಮೂಲಕ AI ಫೋಟೋ ಬಳಸಿಕೊಂಡು ವಿಡಿಯೋ ಮಾಡಿದ್ದನು. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ನೋಟಿಸ್ ನೀಡಿದ್ದರು. ಆ ಹಿನ್ನೆಲೆಯಲ್ಲಿ ಇಂದು ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾನೆ. ವಿಚಾರಣೆ ವೇಳೆ ತನಿಖಾಧಿಕಾರಿಗಳು ಸಮೀರ್ ವಾಯ್ಸ್ ಸ್ಯಾಂಪಲ್ ಕೂಡ ಪಡೆದುಕೊಂಡಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ವಿಚಾರಣೆ ಮುಂದುವರಿದ್ದು, ಪೊಲೀಸರು ಸಮೀರ್‌ನ ವಾಯ್ಸ್ ಸ್ಯಾಂಪಲ್ ಪಡೆದುಕೊಂಡಿದ್ದಾರೆ. ಆತನ ವಿಡಿಯೋದ ಸ್ಕ್ರಿಪ್ಟ್ ಕೊಟ್ಟು ಮತ್ತೆ ವಾಯ್ಸ್ ಓವರ್ ಕೊಡಲು ಹೇಳಿದ್ದಾರೆ. ಸ್ಕ್ರಿಪ್ಟ್ ನೀಡಿ ವಾಯ್ಸ್ ರೆಕಾರ್ಡ್ ಮಾಡುತ್ತಿದ್ದಾರೆ. ಒಂದೇ ಸ್ಕ್ರಿಪ್ಟ್ ಅನ್ನು ಮೂರು ಭಾರೀ ಓದಿಸಿ ಸ್ಯಾಂಪಲ್ ಪಡೆದುಕೊಳ್ಳುತ್ತಿದ್ದಾರೆ.
ಒಂದು ಭಾರೀ ಸ್ಕ್ರಿಪ್ಟ್ ಕಂಪ್ಲೀಟ್ ಆಗಿ ಓದಿ ಮುಗಿಸಲು ಒಂದು ಗಂಟೆ ಸಮಯ ಬೇಕಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬಳಿಕ ಸಮೀರ್‌ನ ವಾಯ್ಸ್ ಸ್ಯಾಂಪಲ್ ಅನ್ನು ಪೊಲೀಸರು ಎಫ್ಎಸ್ಎಲ್‌ಗೆ ಕಳಿಹಿಸಲಿದ್ದಾರೆ. ಆತನ ವಿಡಿಯೋ ಮತ್ತು ಆತನ ವಾಯ್ಸ್‌ಗೂ ತಾಳೆ ಹಾಕಲು ಎಫ್ಎಸ್ಎಲ್‌ಗೆ ರವಾನೆ ಮಾಡಲಿದ್ದಾರೆ.




