ಕಳಚಿತು ಮಾಸ್ಕ ಮ್ಯಾನ್ ಮುಖವಾಡ ! ಎಫ್‌ಎಸ್‌ಎಲ್‌ನಲ್ಲಿ ಬುರುಡೆ ರಹಸ್ಯ ಬಯಲು…

ಬೆಂಗಳೂರು: ಚೆನ್ನಯ್ಯ ತಂದುಕೊಟ್ಟ ಬುರುಡೆ ಎಲ್ಲಿಯದ್ದು ಎನ್ನುವುದೇ ಈಗ ದೊಡ್ಡ ಪ್ರಶ್ನೆ.

ಹೌದು. ಧರ್ಮಸ್ಥಳದಲ್ಲಿ ಸಾವಿರಾರು ಮೃತದೇಹಗಳನ್ನು ನಾನು ಹೂತಿದ್ದೇನೆ ಎಂದು ಬುರುಡೆ ಬಿಟ್ಟಿದ್ದ ಚೆನ್ನಯ್ಯ ತನ್ನ ಎಲ್ಲಾ ಆರೋಪಗಳಿಗೆ ಸಾಕ್ಷ್ಯ ಒದಗಿಸಿದ್ದು ಯಾವುದು ಎಂದರೆ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದ ಬುರುಡೆ.

ಈ ಬುರುಡೆಯನ್ನು ಇಟ್ಟುಕೊಂಡು ನ್ಯಾಯಾಲಯದಿಂದ ಸಾಕ್ಷಿ ಸಂರಕ್ಷಣಾ ಕಾಯ್ದೆಯಡಿ ಭದ್ರತೆ ಪಡೆದುಕೊಂಡಿದ್ದ. ಹೀಗಾಗಿ ಎಸ್‌ಐಟಿ (SIT) ಸಹ ಆತ ಹೇಳಿದಂತೆ ಕೇಳುತ್ತಿತ್ತು.

ಆತ ಹೇಳಿದ್ದ 17 ಜಾಗಗಳಲ್ಲಿ ಗುಂಡಿ ತೋಡಿದ ಬಳಿಕ ಮೂಲ ಬುರುಡೆಯ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಆತ ಒಂದೊಂದು ಜಾಗದ ಹೆಸರನ್ನು ಹೇಳಿದ್ದಾನೆ. ಒಮ್ಮೆ ಬೋಳಿಯಾರ್‌ ಮತ್ತೊಮ್ಮೆ ಕಲ್ಲೇರಿ ಇನ್ನೊಮ್ಮೆ ಇನ್ಯಾವುದೋ ಜಾಗವನ್ನು ಹೇಳಿದ್ದಾನೆ.

ಈ ಮಧ್ಯೆ ಬುರುಡೆಯಲ್ಲಿದ್ದ ಮಣ್ಣು ಧರ್ಮಸ್ಥಳ ಪರಿಸರದ್ದೇ ಅಲ್ಲ ಎನ್ನುವುದು ವಿಧಿವಿಜ್ಞಾನ ಪ್ರಾಯೋಗಾಲಯದಲ್ಲಿ ದೃಢಪಟ್ಟಿತ್ತು. ಇದು ಪಕ್ಕಾ ಆಗುತ್ತಿದ್ದಂತೆ ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಆತ ಬೇರೆ ಜಾಗದಿಂದ ಈ ಬುರುಡೆ ತಂದಿದ್ದೇನೆ. ಬೇರೆಯವರು ಹೇಳಿದಂತೆ ನಾನು ಈ ಪ್ರಕರಣಕ್ಕೆ ಬಂದಿದ್ದೇನೆ ಎಂದು ಬಾಯಿಬಿಟ್ಟಿದ್ದ.

ಚೆನ್ನಯ್ಯ ಈ ಮಾತನ್ನು ಹೇಳುವುದು ಸುಳ್ಳು ಎನ್ನುವುದು ತಿಳಿಯುತ್ತಿದ್ದಂತೆ ಪೊಲೀಸರು ಬಂಧಿಸಿದ್ದಾರೆ.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್