ಕನಕದಾಸರು ಕುಲದ ಅವಮಾನವನ್ನು ಅನುಭವಿಸಿ ಬಳಿಕ ಅಳಿಸಿದರು: ಕೆ.ವಿ.ಪಿ

ದಾವಣಗೆರೆ : ಹಿಂದುಳಿದ ವರ್ಗಗಳ ಮಕ್ಕಳು ಮತ್ತು ಕನಕನ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕಿದೆ. ಕೀಳರಿಮೆ ಮೆಟ್ಟಿ ಮೇಲೇಳುವುದಕ್ಕೆ ದಾಸಶ್ರೇಷ್ಠ ಕನಕದಾಸರ ಬಂಡಾಯದ ಮಾದರಿ ನಮ್ಮ ಅಂಗೈಯಲ್ಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.


ಕನಕ ನೌಕರರ ಬಳಗ ಮತ್ತು ಜಿಲ್ಲಾ ಕುರುಬರ ವಿದ್ಯಾವರ್ದಕ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು. “ಇತಿಹಾಸ ಅರಿಯದವರು ಭವಿಷ್ಯ ರೂಪಿಸಲಾರರು” ಎನ್ನುವ ಮಾತಿದೆ. ಇವತ್ತು ನಮ್ಮ ಸಮುದಾಯದ ನಾನು ಮತ್ತು ಈ ಮಕ್ಕಳು ಪ್ರತಿಭಾವಂತರಾಗಿ ಇಲ್ಲಿ ಗೌರವಿಸಲ್ಪಡುತ್ತಿದ್ದೇವೆ ಎಂದರೆ ಇದಕ್ಕೆ ನಮ್ಮ ಹಿರಿಯರು ಮತ್ತು ಹಿಂದಿನವರು ನಡೆಸಿದ ಹೋರಾಟಗಳು ಕಾರಣ.

ಅಕ್ಷರ ಕಲಿತರೆ ಕಿವಿಗೆ ಕಾದ ಸೀಸ ಸುರಿಯುವ ಶಿಕ್ಷೆ ವಿಧಿಸುತ್ತಿದ್ದ ಕಾಲದಿಂದ ನಮ್ಮದೇ ಆದ ವಿದ್ಯಾವರ್ದಕ ಸಂಘ ಕಟ್ಟಿಕೊಂಡು SSLC ಯಿಂದ MBBS ವರೆಗೂ ಸಾವಿರಾರು ಪ್ರತಿಭಾವಂತರನ್ನು ಪುರಸ್ಕರಿಸುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಈ ಸಾಧನೆಯ ಹಿಂದೆ ಇರುವ ಪ್ರತೀ ಹೆಜ್ಜೆ ಗುರುತುಗಳನ್ನೂ ನಾವು ಅರಿತುಕೊಳ್ಳಬೇಕಿದೆ ಎಂದರು.

ದಾಸಶ್ರೇಷ್ಠ ಕನಕದಾಸರು ಅಂದರೆ ನಮಗೆಲ್ಲಾ ಭಕ್ತಿ ಬರುತ್ತದೆ. ಆದರೆ ಕನಕದಾಸರ ಬದುಕಿನ ಸಂದೇಶ ಕೇವಲ ಅವರನ್ನು ಭಕ್ತಿಯಿಂದ ಪೂಜಿಸುವುದಾಗಿರಲಿಲ್ಲ. ಎಳೆಯ ವಯಸ್ಸಿನಿಂದಲೂ ಕನಕರ ಬಗ್ಗೆ ಮಾತನಾಡುವಾಗ ಕನಕರ ಹೋರಾಟವನ್ನು ತಿಳಿಯುವುದರ ಬದಲಾಗಿ ಕನಕನ ಕಿಂಡಿಯ ಬಗ್ಗೆ ತಿಳಿಯುವುದರಲ್ಲಿ ನಮಗೆ ಹೆಚ್ಚು ಉತ್ಸಾಹ ಮೂಡಿಸಿರುವುದರ ಹಿಂದೆಯೂ ಒಂದು ಸಾಂಸ್ಕೃತಿಕ ರಾಜಕಾರಣ ಇದೆಯಲ್ಲವೇ ಎಂದು ಪ್ರಶ್ನಿಸಿದರು.
ದೇವರು ಸಂಸ್ಕೃತದಲ್ಲಿ ಮಾಡುವ ಭಕ್ತಿ, ಪ್ರಾರ್ಥನೆಯನ್ನು ಮಾತ್ರ ಸ್ವೀಕರಿಸುತ್ತಾನೆ ಎನ್ನುವ “ಅಹಂ” ಜಾರಿಯಲ್ಲಿದ್ದ ಸಂದರ್ಭದಲ್ಲಿ ಕನಕದಾಸರು ತಾಯಿ ಭಾಷೆಯಲ್ಲಿ ವಚನಗಳನ್ನು, ಕೀರ್ತನೆಗಳನ್ನು ರಚಿಸಿ ಕೃಷ್ಣನನ್ನು ತನ್ನ ಕಡೆಗೆ ತಿರುಗಿಸಿಕೊಂಡರು ಎನ್ನುವುದು ಕೇವಲ ಕತೆಯಲ್ಲ. ಕೀಳರಿಮೆ ಮತ್ತು ಕುಲದ ಅವಮಾನವನ್ನು ಮೆಟ್ಟಿನಿಂತ ಹೋರಾಟ ಮತ್ತು ಬಂಡಾಯ ಎನ್ನುವುದನ್ನು ನಾವು ಮರೆಯಬಾರದು.

 

ಕನಕದಾಸರು ಸಮಾಜದ ನೋವನ್ನು ಹಾಡಾಗಿ ಹಾಡಿದರು ಎಂದು ನಾನು ಹಿಂದೊಮ್ಮೆ ಹೇಳಿದ್ದೆ. “ಕುಲ ಕುಲವೆಂದು ಬಡಿದಾಡದಿರಿ…” ಎಂದು ಕನಕರು ಹಾಡುವ ಮೊದಲು ಕುಲದ ಅವಮಾನವನ್ನು ಅನುಭವಿಸಿದ್ದರು. ಈ ಅವಮಾನವನ್ನು ಅಳಿಸಲು ಬದುಕಿನುದ್ದಕ್ಕೂ ಶ್ರಮಿಸಿದ ಬಂಡಾಯಗಾರರು. ಆದರೆ, ಕನಕರ ಹೋರಾಟದ ಪರಂಪರೆಯನ್ನೇ ನಾಶಮಾಡುವ ಹುನ್ನಾರದ ಭಾಗವಾಗಿ ಅವರನ್ನು ಕೇವಲ ಭಕ್ತಿಗೆ ಸೀಮಿತಗೊಳಿಸುತ್ತಿದ್ದಾರೆ. ಇದು ನಮ್ಮ ಇವತ್ತಿನ ಮತ್ತು ಮುಂದಿನ ಪೀಳಿಗೆಯಲ್ಲಿ ಹೋರಾಟವನ್ನು ಮರೆಸುವ ತಂತ್ರವೇ ಆಗಿದೆ. ಹೀಗಾಗಿ ಭಕ್ತಿಯ ಜೊತೆಗೆ ಕನಕರ ಬಂಡಾಯವನ್ನು ನಾವು ಅರಿಯೋಣ. ನಾವು ಪೋಷಕರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಬದುಕಿನ ಮೌಲ್ಯಗಳನ್ನು ಕೊಡಬೇಕು. ಆಗ ಸಮಾಜ ಮೌಲ್ಯಯುತವಾಗುತ್ತದೆ ಎಂದರು.

ಇವತ್ತಿನ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಿಂದುಳಿದ ಸಮುದಾಯಗಳ ಮಕ್ಕಳಲ್ಲಿನ ಕೀಳರಿಮೆ ಅಳಿಸಿ ಆತ್ಮವಿಶ್ವಾಸ ಎನ್ನುವ “ರಕ್ತದಾನ” ಮಾಡಿದಂತೆ ಎಂದು ಭಾವಿಸುತ್ತೇನೆ. ಆತ್ಮವಿಶ್ವಾಸದ ರಕ್ತದಾನದಿಂದ ಇಡೀ ನಮ್ಮ ಸಮಾಜ ಬಲಿಷ್ಠಗೊಳ್ಳುತ್ತದೆ ಎನ್ನುವ ಭರವಸೆ ವ್ಯಕ್ತಪಡಿಸುತ್ತಾ ನನ್ನ ಮಾತುಗಳನ್ನು ಮುಗಿದುತ್ತೇನೆ. ಇವತ್ತು ಎಲ್ಲಾ ಮಕ್ಕಳೂ ವಿದ್ಯಾವಂತರೇ. ಆದರೆ ಹೃದಯವಂತರಾಗುವ ಅಗತ್ಯವಿದೆ. ವೃದ್ಧಾಶ್ರಮಗಳಿಲ್ಲದ ಮಾನವೀಯ ಮತ್ತು ಜವಾಬ್ದಾರಿಯುತ ಸಮಾಜ ನಿರ್ಮಾಣ ನಮ್ಮ ಆದ್ಯತೆಯಾಗಲಿ ಎಂದು ಕರೆ ನೀಡಿದರು.

ಕಾಗಿನೆಲೆ ಮಹಾಸಂಸ್ಥಾನ, ಕನಕ ಗುರುಪೀಠದ ಪೂಜ್ಯರಾದ ಜಗದ್ಗುರು ಶ್ರೀ ಡಾ.ನಿರಂಜನಾನಂದಪುರಿ ಮಹಾ ಗುರುಗಳು ದಿವ್ಯ ಸಾನಿದ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ, ಸಂಸದರಾದ ಪ್ರಭಾ ಮಲ್ಲಿಕಾರ್ಜುನ್, ಕೊಪ್ಪಳ ವಿವಿ ಕುಲಪತಿಗಳಾದ ಡಾ.ಬಿ.ಕೆ.ರವಿ, ಬಾಲ ಭವನ ಅಧ್ಯಕ್ಷರಾದ ಬಿ.ಆರ್. ನಾಯ್ಡು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!