ಅ.31ಕ್ಕೆ ಒಟಿಟಿಗೆ ‘ಕಾಂತಾರ ಚಾಪ್ಟರ್ 1’ ಸಿನಿಮಾ ಲಗ್ಗೆ ; ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದ್ದರೂ ಒಟಿಟಿಗೆ ಬರುತ್ತಿರುವುದೇಕೆ?

‘ಕಾಂತಾರ ಚಾಪ್ಟರ್ 1’: ಚಿತ್ರ ಥಿಯೇಟರ್‌ಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದರ ನಡುವೆಯೂ ಕೇವಲ ಒಂದು ತಿಂಗಳಲ್ಲಿ ಅಕ್ಟೋಬರ್ 31ಕ್ಕೆ ಅಮೆಜಾನ್ ಪ್ರೈಮ್ ಒಟಿಟಿಗೆ ಸಿನಿಮಾ ಲಗ್ಗೆ ಇಡಲಿದೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಚಿತ್ರವನ್ನು ಬೇಗನೆ ಒಟಿಟಿಗೆ ತರಲು ಕಾರಣ ಏನು? ಆ ಬಗ್ಗೆ ಇಲ್ಲಿದೆ ವಿವರ.

‘ಕಾಂತಾರ: ಚಾಪ್ಟರ್ 1’ (Kantara) ಸಿನಿಮಾ ಕೇವಲ ಒಂದು ತಿಂಗಳಿಗೆ ಒಟಿಟಿಗೆ ಕಾಲಿಡಲು ರೆಡಿ ಆಗಿದೆ. ಹೌದು, ಅಕ್ಟೋಬರ್ 2ರಂದು ಥಿಯೇಟರ್​ನಲ್ಲಿ ರಿಲೀಸ್ ಆದ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಚಿತ್ರ ಅಕ್ಟೋಬರ್ 31ಕ್ಕೆ ಒಟಿಟಿಗೆ ಕಾಲಿಡುತ್ತಿದೆ. ಈ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ. ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವ ಮಧ್ಯೆಯೂ ಈ ನಿರ್ಧಾರ ಏಕೆ ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ. ಈ ಪ್ರಶ್ನೆಗೆ ಉತ್ತರ ಹುಡುಕುವ ಪ್ರಯತ್ನ ನಡೆದಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರದ ಭಾರತದ ಕಲೆಕ್ಷನ್ 592 ಕೋಟಿ ರೂಪಾಯಿ. ಅಕ್ಟೋಬರ್ 27ರಂದು (ನಾಲ್ಕನೇ ಸೋಮವಾರ) ಸಿನಿಮಾ 3.25 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಂದರೆ, ವಾರದ ದಿನವೂ ಸಿನಿಮಾ ಉತ್ತಮವಾಗಿಯೇ ಗಳಿಕೆ ಮಾಡುತ್ತಿದೆ. ಮುಂಬರೋ ವೀಕೆಂಡ್​ನಲ್ಲಿ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇತ್ತು. ಆದಾಗ್ಯೂ ಸಿನಿಮಾನ ಒಟಿಟಿಗೆ ತರುವ ನಿರ್ಧಾರ ಮಾಡಲಾಗಿದೆ. ಇದಕ್ಕೆ ಅಸಲಿ ಕಾರಣ ಏನು ಎಂಬುದು ರಿವೀಲ್ ಆಗಿದೆ.

‘ಕಾಂತಾರ’ ಚಿತ್ರವನ್ನು ಅಮೇಜಾನ್ ಪ್ರೈಮ್ ವಿಡಿಯೋ ಖರೀದಿ ಮಾಡಿತ್ತು. ಅದೇ ರೀತಿ ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ಇದೇ ಒಟಿಟಿ ಸಂಸ್ಥೆ ಖರೀದಿಸಿದೆ. ಅಕ್ಟೋಬರ್ 31ರಂದು ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಈ ಚಿತ್ರ ಬಿಡುಗಡೆ ಕಾಣಲಿದೆ. ಕೇವಲ ಒಂದು ತಿಂಗಳಿಗೆ ಒಟಿಟಿಗೆ ಬರಲು ಕಾರಣ ಪ್ರೈಮ್ ವಿಡಿಯೋ ಹಾಗೂ ಹೊಂಬಾಳೆ ಮಧ್ಯೆ ಆದ ಒಪ್ಪಂದ.

ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಈ ಕಾರಣದಿಂದಲೇ ಅಮೇಜಾನ್ ಪ್ರೈಮ್ ವಿಡಿಯೋದವರು 125 ಕೋಟಿ ರೂಪಾಯಿ ನೀಡಿ ಸಿನಿಮಾನ ಖರೀದಿ ಮಾಡಿದೆ ಎನ್ನಲಾಗಿದೆ. ಇಷ್ಟು ದೊಡ್ಡ ಮೊತ್ತ ನೀಡಿದ್ದರಿಂದ ಒಂದೇ ತಿಂಗಳಿಗೆ ಚಿತ್ರವನ್ನು ಒಟಿಟಿಗೆ ತರಲು ಒಪ್ಪಿಗೆ ನೀಡಬೇಕು ಎಂಬ ಷರತ್ತು ಇತ್ತು. ಈ ಷರತ್ತಿಗೆ ಹೊಂಬಾಳೆ ಒಪ್ಪಿಗೆ ಸೂಚಿಸಿತ್ತು ಎನ್ನಲಾಗಿದೆ. ಹೀಗಾಗಿಯೇ ಒಂದೇ ತಿಂಗಳಿಗೆ ಸಿನಿಮಾ ಒಟಿಟಿಗೆ ಬರುತ್ತಿದೆ. ಈಗಾಗಲೇ ಚಿತ್ರ ಥಿಯೇಟರ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ. ಅಂದುಕೊಂಡತೆ ಸಿನಿಮಾ ಒಟಿಟಿಯಲ್ಲಿ ಬಂದಿದ್ದಕ್ಕೆ ಅವರ ಕಡೆಯಿಂದಲೂ ದೊಡ್ಡ ಮೊತ್ತದ ಹಣ ಸಿಗಲಿದೆ.

‘ಕಾಂತಾರ’ ಸಿನಿಮಾ ಮಾಡುವಾಗ ಅಷ್ಟು ಒಳ್ಳೆಯ ರೆಸ್ಪಾನ್ಸ್ ಪಡೆಯುತ್ತದೆ ಎಂಬ ಕಲ್ಪನೆ ತಂಡದವರಿಗೂ ಇರಲಿಲ್ಲ. ಹೀಗಾಗಿ ಅಮೇಜಾನ್ ಜೊತೆ ಒಪ್ಪಂದ ಮಾಡಿಕೊಂಡು, ಬೇಗನೆ ಸಿನಿಮಾನ ಒಟಿಟಿಗೆ ತರಲು ಒಪ್ಪಂದ ಆಗಿತ್ತು. ನಂತರ ಸಿನಿಮಾಗೆ ಸಿಕ್ಕ ರೆಸ್ಪಾನ್ಸ್ ನೋಡಿ ಪರಭಾಷೆಯಲ್ಲೂ ಬಿಡುಗಡೆ ಮಾಡಲಾಯಿತು. ಹೀಗಾಗಿ, ಒಟಿಟಿ ರಿಲೀಸ್ ದಿನಾಂಕವನ್ನು ಪ್ರೈಮ್ ವಿಡಿಯೋ ಮುಂದಕ್ಕೆ ಹಾಕಿತ್ತು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!