ಕಾಂಗ್ರೆಸ್‌ಗೆ ಕರ್ನಾಟಕವೇ ಎಟಿಎಂ, ಇದೊಂದು ‘ಪಿಕ್‌ಪಾಕೆಟ್‌’ ಸರ್ಕಾರ: ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಚನೆ ಹಾಗೂ ರಾಜ್ಯ ಸರ್ಕಾರದ ಇತ್ತೀಚಿನ ನಿರ್ಧಾರಗಳನ್ನು ವಿರೋಧಿಸಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಹಾಲಿ ಆಡಳಿತವನ್ನು “ಪಿಕ್‌ಪಾಕೆಟ್ ಸರ್ಕಾರ” ಎಂದು ಖಂಡಿಸಿದ್ದಾರೆ. ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ನಗರದ ವ್ಯಾಪ್ತಿಯನ್ನು ಹಿಗ್ಗಿಸುತ್ತಿರುವುದರ ಹಿಂದೆ ನಗರದ ಅಭಿವೃದ್ಧಿಯ ಉದ್ದೇಶವಿಲ್ಲ, ಬದಲಿಗೆ ಭ್ರಷ್ಟಾಚಾರ ಮತ್ತು ಸುಲಿಗೆ ಮಾಡಲು ಹೊಸ ಮಾರ್ಗಗಳನ್ನು ಕಂಡುಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಹೊಸ ಸಾಫ್ಟ್‌ವೇರ್ ವ್ಯವಸ್ಥೆಗಳ ಹೆಸರಿನಲ್ಲಿ ಸರ್ಕಾರ ಸಾರ್ವಜನಿಕರ ಜೇಬಿಗೆ ಕೈಹಾಕುತ್ತಿದ್ದು, ವಿವಿಧ ನಾಗರಿಕ ಸೇವೆಗಳಿಗೆ ಬರೋಬ್ಬರಿ ₹10,000 ವರೆಗೆ ಭಾರಿ ಶುಲ್ಕ ವಿಧಿಸುತ್ತಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ. ‘ನಿಮ್ಮ ಆಸ್ತಿ, ನಿಮ್ಮ ಹಕ್ಕು’ ಮತ್ತು ಮನೆಬಾಗಿಲಿಗೆ ದಾಖಲೆ ತಲುಪಿಸುವ ಯೋಜನೆಗಳು ಕೇವಲ ಪ್ರಚಾರಕ್ಕಾಗಿ ಮಾಡುತ್ತಿರುವ ಸುಳ್ಳುಗಳು. ದೆಹಲಿಯ ಕಾಂಗ್ರೆಸ್ ವರಿಷ್ಠರಿಗೆ ಹಣ ರವಾನಿಸಲು ಕರ್ನಾಟಕವನ್ನು ‘ಎಟಿಎಂ’ ರೀತಿಯಲ್ಲಿ ಬಳಸಿಕೊಳ್ಳಲಾಗುತ್ತಿದೆ ಎಂದಿರುವ ಅವರು, ಜನಸಾಮಾನ್ಯರನ್ನು ಸುಲಿಗೆ ಮಾಡಲು ಈ ಸರ್ಕಾರಕ್ಕೆ ಕಿಂಚಿತ್ತೂ ಸಂಕೋಚವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ, ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯನ್ನು ವ್ಯಂಗ್ಯವಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಊರಿಗೊಂದು ಕ್ಯಾಬಿನೆಟ್ ಸಭೆ ಮಾಡುತ್ತಿದೆ ಎಂದು ಟೀಕಿಸಿದ್ದಾರೆ. ಸಚಿವ ಸಂಪುಟ ಸಭೆಗಳನ್ನು ನಡೆಸಲೆಂದೇ ಕೆಂಗಲ್ ಹನುಮಂತಯ್ಯನವರು ವಿಧಾನಸೌಧವನ್ನು ನಿರ್ಮಿಸಿದ್ದರು. ಆದರೆ ಈಗಿನ ಸರ್ಕಾರ ಜಿಲ್ಲೆಗಳಿಗೆ ದಂಡುದಂಡಾಗಿ ಹೋಗಿ ದುಂದುವೆಚ್ಚ ಮಾಡುತ್ತಾ ಪ್ರಚಾರದ ಸ್ಟಂಟ್‌ನಲ್ಲ ತೊಡಗಿದೆ. ವಿಧಾನಸೌಧವೇನು ‘ಟೂರಿಂಗ್ ಟಾಕೀಸಾ’ ಎಂದು ಪ್ರಶ್ನಿಸುವ ಮೂಲಕ ಸರ್ಕಾರದ ಕಾರ್ಯವೈಖರಿಯನ್ನು ತೀವ್ರವಾಗಿ ತೊಳೆಯೊಗೆದಿದ್ದಾರೆ.

Related Posts

ವಂದೇ ಮಾತರಂ ಪೂರ್ಣ ಗೀತೆ ವಿವಾದ: ಕಾಂಗ್ರೆಸ್ ವಿರುದ್ಧ ಹರಿಹಾಯ್ದ  ಜನಾರ್ದನ ರೆಡ್ಡಿ

ರಾಜ್ಯದಲ್ಲಿ ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ ಆಲಾಪನೆಗೆ ಸಂಬಂಧಿಸಿದಂತೆ ಹೊಸ ವಿವಾದ ಭುಗಿಲೆದ್ದಿದೆ. ಗೀತೆಯನ್ನು ಪೂರ್ಣವಾಗಿ ಹಾಡುವ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬ ಸಚಿವ ಶಿವರಾಜ ತಂಗಡಗಿ ಅವರ ಹೇಳಿಕೆಯನ್ನು ಶಾಸಕ ಜನಾರ್ದನ ರೆಡ್ಡಿ ತೀವ್ರವಾಗಿ ಖಂಡಿಸಿದ್ದಾರೆ. ಗಂಗಾವತಿಯಲ್ಲಿ…

lja5nqb73ba7bxod16

env6k3k

You Missed

ಕಾಂಗ್ರೆಸ್‌ಗೆ ಕರ್ನಾಟಕವೇ ಎಟಿಎಂ, ಇದೊಂದು ‘ಪಿಕ್‌ಪಾಕೆಟ್‌’ ಸರ್ಕಾರ: ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಕಾಂಗ್ರೆಸ್‌ಗೆ ಕರ್ನಾಟಕವೇ ಎಟಿಎಂ, ಇದೊಂದು ‘ಪಿಕ್‌ಪಾಕೆಟ್‌’ ಸರ್ಕಾರ: ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಅಕ್ಟೋಬರ್ 1 ರಿಂದ LPG ಹೊಸ ನಿಯಮ: ಆಧಾರ್ ಇ-ಕೆವೈಸಿ ಇಲ್ಲದಿದ್ದರೆ ಗ್ಯಾಸ್ ಸಿಲಿಂಡರ್ ಬಂದ್!

ಅಕ್ಟೋಬರ್ 1 ರಿಂದ LPG ಹೊಸ ನಿಯಮ: ಆಧಾರ್ ಇ-ಕೆವೈಸಿ ಇಲ್ಲದಿದ್ದರೆ ಗ್ಯಾಸ್ ಸಿಲಿಂಡರ್ ಬಂದ್!

ಚಿನ್ನದ ದರ ಸೆಪ್ಟೆಂಬರ್ 20: ಎರಡು ದಿನದಲ್ಲಿ 10 ಗ್ರಾಂ ಚಿನ್ನದ ಬೆಲೆ 2,750 ರೂ. ಏರಿಕೆ!

ಚಿನ್ನದ ದರ ಸೆಪ್ಟೆಂಬರ್ 20: ಎರಡು ದಿನದಲ್ಲಿ 10 ಗ್ರಾಂ ಚಿನ್ನದ ಬೆಲೆ 2,750 ರೂ. ಏರಿಕೆ!

ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಏಷ್ಯನ್ ಗೇಮ್ಸ್ 2026: ಬೆಳ್ಳಿ ಶೂಟಿಂಗ್‌ನೊಂದಿಗೆ ಭಾರತದ ಪದಕದ ಖಾತೆ ಓಪನ್!