ಕಾಶ್ಮೀರದ ಪಹಲ್ಗಾಮ್ ಉಗ್ರರ ದಾ*, ಮಾಹಿತಿ ಕೊರತೆ – ಸಿಎಂ ಸಿದ್ದರಾಮಯ್ಯ.

ಬೆಂಗಳೂರು : ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮಾಧ್ಯಮದವರೊಂದಿಗೆ ಮಾತನಾಡಿ ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು.

ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.
ದೇಶದ ಜನರಿಗೆ ಕೇಂದ್ರ ಭದ್ರತೆ ಒದಗಿಸಬೇಕುಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ, ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪಹಲ್ಗಾಮಿನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!