ಕೆ.ಎಲ್‌.ರಾಹುಲ್‌ ಸ್ಫೋಟಕ ಬ್ಯಾಟಿಂಗ್‌ ; ಡೆಲ್ಲಿಗೆ 6 ವಿಕೆಟ್‌ಗಳ ಜಯ : ತವರಲ್ಲಿ ಮತ್ತೆ ಸೋತ ಆರ್‌ಸಿಬಿ

ಕೆ.ಎಲ್‌.ರಾಹುಲ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಆರ್‌ಸಿಬಿ ವಿರುದ್ಧ ಡೆಲ್ಲಿ 6 ವಿಕೆಟ್‌ಗಳ ಜಯ ಸಾಧಿಸಿತು. ಆ ಮೂಲಕ ತವರಲ್ಲಿ ಆರ್‌ಸಿಬಿಗೆ ಮತ್ತೊಂದು ಸೋಲಿನ ಕಹಿ ಅನುಭವವಾಯಿತು.ಇಂಡಿಯನ್ ಪ್ರೀಮಿಯರ್ ಲೀಗ್ 18ನೇ ಆವೃತ್ತಿಯ 24ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆ 6 ವಿಕೆಟ್‌ಗಳ ರೋಚಕ ಜಯ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರ್‌ಸಿಬಿ 7 ವಿಕೆಟ್ ಕಳೆದುಕೊಂಡು 163 ರನ್ ಗಳಿಸಿತ್ತು. ಡೆಲ್ಲಿ ಕ್ಯಾಪಿಟಲ್ಸ್ ತಂಡ 17.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 169 ರನ್ ಬಾರಿಸಿ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ನಾಯಕ ರಜತ್ ಪಾಟೀದಾರ್ 1 ರನ್ ಗಳಿಸಿ ಔಟಾದರು. ಫಿಲ್ ಸಾಲ್ಟ್ 37, ಕೊಹ್ಲಿ 22, ಪಡಿಕ್ಕಲ್ 25 ರನ್ ಗಳಿಸಿ ತಂಡದ ಸ್ಕೋರ್ ಅನ್ನು 163ರ ಆಚೆಗೆ ಕೊಂಡೊಯ್ದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಕೆಎಲ್ ರಾಹುಲ್ 93 ಮತ್ತು ಟ್ರಿಸ್ಟಾನ್ ಸ್ಟಬ್ಸ್ 38, ಅಕ್ಷರ್ ಪಟೇಲ್ 15 ರನ್ ಗಳಿಸಿದರು. ಬೌಲಿಂಗ್‌ನಲ್ಲಿ ವಿಪ್ರಜ್ ನಿಗಮ್ 2 ವಿಕೆಟ್ ಮತ್ತು ಕುಲದೀಪ್ ಯಾದವ್ 2 ವಿಕೆಟ್ ಪಡೆದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!