ಮೈತ್ರಿ ಪಕ್ಷದ ವಿರೋಧಿಯನ್ನು ಜೆಡಿಎಸ್​​​ಗೆ ಸೇರಿಸಿಕೊಂಡ ಕುಮಾರಣ್ಣ!

 

ಭಾರೀ ವಿರೋಧದ ನಡುವೆಯೂ ಸ್ವಾಭಿಮಾನ ಜನತಾ ಪಕ್ಷದ ಮುಖಂಡ ಇದೀಗ ಮಿತ್ರ ಪಕ್ಷ ಜೆಡಿಎಸ್ ಸರ್ಪಡೆಯಾಗಿದ್ದಾರೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡಿದ್ದ ನಾಯಕ ಇದೀಗ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಇದ್ದರೂ ಸಹ ಬಂಡಾಯ ನಾಯಕ, ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.

ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯದಿಂದ ಸ್ಪರ್ಧಿಸಿ ಸೋತಿದ್ದ ಹೂಡಿ ವಿಜಯ್ ಕುಮಾರ್ ಇಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಿಂದ ಬಂಡಾಯವೆದ್ದು ಮಾಲೂರು ಸ್ವಾಭಿಮಾನಿ‌ ಜನತಾ ಪಕ್ಷದಿಂದ ನಿಂತು ಸೋತಿದ್ದ ವಿಜಯ್ ಕುಮಾರ್ ಬೆಂಗಳೂರಿನ ಜೆಪಿ ಭವನದಲ್ಲಿಂದು ಕೇಂದ್ರ‌ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​​ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಎಚ್​​ಡಿ ದೇವೇಗೌಡ, ನಿಖಿಲ್​ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.

ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಂಡ ಬಳಿಕ ಮಾತನಾಡಿದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ನಾನು ವಿಜಯ್ ಕುಮಾರ್ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೆನೆ. ಮುಂದೆ ಒಂದು ದಿನ ಪಕ್ಷ ಸೇರುವ ಸಮಯ ಬರುತ್ತೆ ಎಂದು ಹೇಳಿದ್ದೆ. ದುಡಿಕೆ ರಾಜಕೀಯ ಜೀವನವನ್ನ ಹಾಳು ಮಾಡಬಾರದು.ಒಳ್ಳೆಯ ಉದ್ದೇಶಕ್ಕೆ ನಾವು ಕೈ ಜೋಡಿಸೊದ್ದೇವೆ. ಮಾಲೂರು ಅಭಿವೃದ್ಧಿಗೆ ಹೊಸ ಚೈತನ್ಯ ತುಂಬಬೇಕು. ವಿಧಾನಸಭಾ ಚುನಾವಣೆ ಇನ್ನೂ ದೂರ ಇದೆ. ಅದಕ್ಕೂ ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಇದೆ. ಅದು ಕಾರ್ಯಕರ್ತರ ಚುನಾವಣೆಯಾಗಿದೆ. ಮಾಲೂರು ಕ್ಷೇತ್ರದ ಕೆಲವರು ಕಾರಣಾಂತರದಿಂದ ಪಕ್ಷವನ್ನ ಬಿಟ್ಟು ಹೋಗಿದ್ರು. ಇವತ್ತು ಎಲ್ಲರು ಮತ್ತೆ ಪಕ್ಷ ಸೇರಿದ್ದಾರೆ. ಎಲ್ಲರಿಗೂ ಸ್ವಾಗತ ಕೋರುತ್ತೇನೆ ಎಂದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೆತ್ರದ ಬಿಜೆಪಿ ಟಿಕೆಟ್​ ಹೂಡಿ ವಿಜಯ್ ಕುಮಾರ್ ಅವರ ಬದಲಿಗೆ ಕೆ.ಎಸ್. ಮಂಜುನಾಥ್ ಗೌಡ ಅವರಿಗೆ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡು ಹೂಡಿ ವಿಜಯ್ ಕುಮಾರ್ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇದರಿಂದ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಗೌಡ ಅವರ ಸೋಲಿಸುವಲ್ಲಿ ಯಶಸ್ವಿಯಾಗಿದ್ದರು. ಯಾಕಂದ್ರೆ, ಕಾಂಗ್ರೆಸ್​​​ನ ನಂಜೇಗೌಡ ಅವರು ಕೇವಲ 250 ಮತಗಳಿಂದ ಮಾತ್ರ ಗೆದ್ದಿದ್ದರು. ಒಂದು ವೇಳೆ ಹೂಡಿ ವಿಜಯ್ ಕುಮಾರ್ ಬಂಡಾಯವಾಗಿ ಸ್ಪರ್ಧೆ ಮಾಡದಿದ್ದರೆ ಬಿಜೆಪಿ ಗೆಲ್ಲುತ್ತಿತ್ತು.

ಹೂಡಿ ವಿಜಯ್​​ ಕುಮಾರ್​​ ಜೆಡಿಎಸ್​​ ಸೇರ್ಪಡೆಗೆ ಸ್ಥಳೀಯ ಬಿಜೆಪಿ ನಾಯಕರು, ಮಂಜುನಾಥ್ ಗೌಡ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಜುನಾಥ್ ಗೌಡ ಆಕ್ರೋಶ ವ್ಯಕ್ತಪಡಿಸಿ, ಜೆಡಿಎಸ್ ವರಿಷ್ಠರು ಮೈತ್ರಿ ಧರ್ಮವನ್ನು ಮುರಿಯುತ್ತಿದ್ದಾರೆ ಆರೋಪಿಸಿದ್ದಾರೆ. ಹೀಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿಯ ನಡುವೆ ಇದು ಬಿರುಕು ಉಂಟುಮಾಡಿದೆ ಎಂಬ ಆತಂಕ ವ್ಯಕ್ತವಾಗಿದೆ.ಮಿತ್ರ ಪಕ್ಷ ಬಿಜೆಪಿ​ ವಿರೋಧದ ನಡುವೆಯೂ ಹೂಡಿ ವಿಜಯ್ ಕುಮಾರ್ ಅವರನ್ನು ಜೆಡಿಎಸ್​​​ಗೆ ಸೇರಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಕೋಲಾರ ಜಿಲ್ಲೆಯಲ್ಲಿ ಮಿತ್ರ ಪಕ್ಷಗಳ ನಡುವೆ ಸಂಬಂಧ ಹೇಗಿರುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!