ಮದ್ಯ ಸೇವಿಸಲು ಹಣನೀಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯನ್ನೇ ಚಾಕುವಿನಿಂದ ಇರಿದು ಕೊಂದಿದ್ದ ಮಗನಿಗೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಶನಿವಾರ ತೀರ್ಪು ನೀಡಿದೆ.
ಜಿಲ್ಲೆಯ ಮೊಳಕಾಲ್ಕೂರು ತಾಲೂ ಕಿನ ಕೊಪ್ಪ ಗ್ರಾಮದ ನಿವಾಸಿ ಸಿ. ಶಿವಾರೆಡ್ಡಿ ಶಿಕ್ಷೆಗೊಳಗಾದವ. 2023ರ ನವೆಂಬರ್ 25ರಂದು ಅಂಜಿನಮ್ಮ ಮನೆಯ ಮುಂದಿನ ಕಟ್ಟೆಯ ಮೇಲೆ ಕುಳಿತ್ತಿದ್ದಾಗ, ಅಲ್ಲಿಗೆ ಬಂದ ಶಿವಾರೆಡ್ಡಿ ಮದ್ಯ
ಸೇವಿಸಲು ಹಣ ನೀಡುವಂತೆ ಪೀಡಿಸಿದ್ದಾನೆ. ಹಣ ನೀಡಲು ನಿರಾಕರಿಸಿದಾಗ ಆಕ್ರೋಶಗೊಂಡ ಆತ ಚಾಕುವಿನಿಂದ * ಅಂಜಿನಮ್ಮ ಅವರ ಬಲಪಕ್ಕೆಗೆ ಬಲವಾಗಿ ಇರಿದು ಕೊಂದಿದ್ದನು.
ವಿಚಾರಣೆ ನಡೆಸಿದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೀರಣ್ಣ ಸೋಮಶೇಖರ ಅವರು ಆರೋಪ ಸಾಬೀತಾದ ಹಿನ್ನೆಲೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಶಂಶೀರ್ ಅಲಿಖಾನ್ ವಾದ ಮಂಡಿಸಿದ್ದರು.




