ಪ್ರೇಯಸಿಯನ್ನ ಅಜ್ಜನ ಮನೆಗೆ ಕರೆದೊಯ್ದು ಪ್ರಿಯಕರ: ಪ್ರೇಮಿಗಳು ಆತ್ಮಹ* !

ಪ್ರೀತಿಗೆ ಪೋಷಕರ ವಿರೋಧ, ಮದುವೆಗೆ ನಿರಾಕರಣೆ ಅಥವಾ ಪ್ರೇಮ ವೈಫಲ್ಯದಿಂದಾಗಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಕರ್ನಾಟಕದಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿವೆ. ಜೋಡಿಗಳು ಲವ್ ಮಾಡಿ ಬಳಿಕ ಒಂದಿಲ್ಲೊದು ಕಾರಣಕ್ಕೆ ಸಾಯುವ ನಿರ್ಧಾರ ಕೈಗೊಳ್ಳುತ್ತವೆ, ಅದರಂತೆ ಚಾಮರಾಜನಗರದಲ್ಲಿ ಮದುವೆಗೆ ಪೋಷಕರ ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದು ಪ್ರೇಮಿಗಳು ದುಡುಕಿನ ನಿರ್ಧಾರ ಕೈಗೊಂಡು ಸಾವಿನ ಮನೆ ಸೇರಿದ್ದಾರೆ.

ತಮ್ಮ ಮದುವೆಗೆ ಪೋಷಕರ ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ನದಿಯಾ(19), ನಾಗೇಂದ್ರ(21) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ಮನೆಬಿಟ್ಟು ಹೋಗಿತ್ತು. ಹೀಗಾಗಿ ಇತ್ತ ಯುವತಿ ಕಡೆಯವರು ಮಿಸ್ಸಿಂಗ್ ದೂರು ನೀಡಿದ್ದಾರೆ. ಇದರಿದ ಹೆದರಿ ಪ್ರೇಮಿಗಳು ಜತೆಯಲ್ಲೇ ಸಾಯುಲು ನಿರ್ಧರಿಸಿ ನೇಣಿಗೆ ಶರಣಾಗಿದ್ದಾರೆ.

ನಾಗೇಂದ್ರ ಹಾಗೂ ಪಾಲಾರ್ ಗ್ರಾಮದ ನದಿಯಾ ಪರಸ್ಪರ ಪ್ರೀತಿಸುತ್ತಿದ್ದರು. ಹೀಗಾಗಿ 3 ದಿನದ ಹಿಂದೆ ನಾಗೇಂದ್ರ, ನದಿಯಾಳನ್ನು ಕರೆದುಕೊಂಡು ತನ್ನ ಅಜ್ಜನ ಊರು ಪೊನ್ನಾಚಿಗೆ ಕರೆದುಕೊಂಡು ಹೋಗಿದ್ದ. ಇತ್ತ ನದಿಯಾ ಕುಟುಂಬಸ್ಥರು ಆತಂಕಗೊಂಡಿದ್ದು, ಎಲ್ಲೆಡೆ ಹುಡುಕಾರಿದ್ದಾರೆ. ಆದರೂ ಪತ್ತೆಯಾಗಿಲ್ಲ. ಕೊನೆಗೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಶ್ ದಾಖಲಿಸಿದ್ದರು.

ಕೇಸ್ ದಾಖಲಾದ ವಿಚಾರ ನಾಗೇಂದ್ರ ಹಾಗೂ ನದಿಯಾಗೆ ಗೊತ್ತಾಗಿ ಹೆದರಿಕೊಂಡಿದ್ದು, ಒಂದು ವೇಳೆ ಪೊಲೀಸರ ಕೈಗೆ ಸಿಕ್ಕರೆ ಹೇಗೆ ? ಮುಂದೇನು ಎಂದು ಭಯಗೊಡು ಸಾಯುವ ನಿರ್ಧಾರಕ್ಕೆ ಬಂದಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಇಬ್ಬರು ಒಟ್ಟಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮಲೆ ಮಹದೇಶ್ವರಬೆಟ್ಟ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಸದ್ಯ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಶವಗಳ ಸ್ಥಳಾಂತರ ಮಾಡಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!