ಮೈಸೂರು ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ.

ಮೈಸೂರು: ಕಾರಣಾಂತರಗಳಿಂದ ಪದವಿ ಅಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ ಮೈಸೂರು ವಿಶ್ವವಿದ್ಯಾಲಯ ಮತ್ತೊಂದು ಅವಕಾಶ ನೀಡಿದೆ. ಹೌದು, ಕೆಲ ವಿದ್ಯಾರ್ಥಿಗಳು ಬೇರೆ ಬೇರೆ ಕಾರಣಗಳಿಂದಾಗಿ ಪರೀಕ್ಷೆಗೆ ಹಾಜರಾಗದೆ ಪದವಿ ಪೂರ್ಣಗೊಳಿಸಲು ಸಾಧ್ಯವಾಗಿರುವುದಿಲ್ಲ. ಇದರಿಂದ ಪದವಿ ಪಡೆಯಬೇಕೆಂಬ ಅವರ ಕನಸು ನನಸಾಗದೆ ಉಳಿದಿದೆ. ಇಂತಹ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅವರೆಲ್ಲರಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಲು ಮೈಸೂರು ವಿವಿ ನಿರ್ಧರಿಸಿದೆ.

ಯಾರಿಗೆಲ್ಲ ಅವಕಾಶ

“2004-05ನೇ ಸಾಲಿನಿಂದ 2018-19ನೇ ಅವಧಿಯ ಪಠ್ಯಕ್ರಮದಲ್ಲಿ ಮೂರು ವರ್ಷದ ಪದವಿ ಅವಧಿಯನ್ನು ಮುಗಿಸಿದ್ದರೂ ನಾನಾ ಕಾರಣದಿಂದ ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಸಿ.ಎ., ಬಿ.ಬಿ.ಎ/ಬಿ.ಬಿ.ಎಂ, ಬಿ.ಎಸ್.ಡಬ್ಯೂ ಸೇರಿದಂತೆ ವಿವಿಧ ಪದವಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡಿ ಅನುತ್ತೀರ್ಣರಾಗಿರುವ ಮೈಸೂರು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳು ಹಾಗೂ ಸಂಯೋಜನೆ ಪಡೆದಿರುವ ಸರ್ಕಾರಿ, ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ತಮ್ಮ ಮೂರು ವರ್ಷದ ಪದವಿಯ ಆರು ಸೆಮಿಸ್ಟರ್ಗಳ ಪೈಕಿ ಯಾವುದೇ ಸೆಮಿಸ್ಟರ್ಸ್ ಯಾವುದೇ ವಿಷಯದಲ್ಲಿ ಅನುತ್ತೀರ್ಣರಾಗಿದ್ದರೂ, ಆಯಾ ವಿಷಯಗಳ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದಾಗಿದೆ” ಎಂದು ವಿವಿ ಕಲಸಚಿವರು ಪ್ರಕಟಣೆ ಹೊರಡಿಸಿದ್ದಾರೆ.
“ಈ ಬಗ್ಗೆ ವಿಶ್ವವಿದ್ಯಾನಿಯವು ಶೀರ್ಘದಲ್ಲೇ ಸುತ್ತೋಲೆ ಹೊರಡಿಸಲಿದ್ದು, ಪರೀಕ್ಷೆ ಬರೆಯಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು ಈ ಹಿಂದೆ ತಾವು ವ್ಯಾಸಂಗ ಮಾಡಿರುವ ಕಾಲೇಜಿನಲ್ಲಿ ಪರೀಕ್ಷಾ ಶುಲ್ಕ ಪಾವತಿಸಬೇಕಾಗುತ್ತದೆ. ಮೈಸೂರು ನಗರವನ್ನು ಕೇಂದ್ರವಾಗಿಸಿಕೊಂಡು ನಾಲ್ಕು ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರದ ಪರೀಕ್ಷಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ”.

“ಈ ಅವಕಾಶದಿಂದ ವಂಚಿತರಾಗದಂತೆ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಲು ಈಗಾಗಲೇ ನಾಲ್ಕು ಜಿಲ್ಲೆಯ (ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ) ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೆ ತಿಳಿಸಲಾಗಿದೆ. ಆಯಾ ಕಾಲೇಜುಗಳಲ್ಲಿ ಪ್ರವೇಶ ಪಡೆದು ಪದವಿ ಪೂರ್ಣಗೊಳಿಸದೆ ಇರುವ ವಿದ್ಯಾರ್ಥಿಗಳ ಮಾಹಿತಿಯನ್ನು (ಹೆಸರು, ರಿ.ನಂ, ವಿಷಯ, ತರಗತಿ, ಪದವಿ ಪೂರ್ಣಗೊಳಿಸಿದ ಅವಧಿ ಇತ್ಯಾದಿ) ಸಂಗ್ರಹಿಸಿ ಮೈಸೂರು ವಿಶ್ವವಿದ್ಯಾಲಯಕ್ಕೆ ನೀಡಲು ಸೂಚಿಸಲಾಗಿದೆ”.
“ಜಿಲ್ಲೆಗೊಂದು ವಿಶ್ವವಿದ್ಯಾಲಯವಾಗಿರುವುದರಿಂದ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳು ಎಲ್ಲಿ ಪರೀಕ್ಷೆ ತೆಗೆದುಕೊಳ್ಳಬೇಕು ಎಂಬ ಗೊಂದಲ ಬಹುತೇಕ ವಿದ್ಯಾರ್ಥಿಗಳಲ್ಲಿದೆ. ಕೆಲವರು ಪದವಿ ಪೂರ್ಣಗೊಳ್ಳದ ಕಾರಣ ಕಾಲೇಜುಗಳ ಸಂಪರ್ಕದಿಂದ ದೂರ ಉಳಿದಿರುತ್ತಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿರುವ ಸಮಸ್ಯೆಗಳನ್ನು ಪದವಿ ಕಾಲೇಜುಗಳ ಪ್ರಾಂಶುಪಾಲರು, ಅಧ್ಯಾಪಕರು ಹೆಚ್ಚಿನ ಆಸಕ್ತಿ ವಹಿಸಿ ಎಲ್ಲರಿಗೂ ತಿಳಿಯುವಂತೆ ಮಾಹಿತಿಯನ್ನು ನೀಡಬೇಕಾಗಿರುತ್ತದೆ. ಈ ಪರೀಕ್ಷೆಗಳನ್ನು ಮಾನಸಗಂಗೋತ್ರಿಯ ಮೌಲ್ಯಭವನದಲ್ಲಿ ಜೂನ್/ಜುಲೈ ತಿಂಗಳಿನಲ್ಲಿ ನಡೆಸಲು ತೀರ್ಮಾನಿಸಲಾಗಿರುತ್ತದೆ”.

“ಒಂದು ಬಾರಿ ಮಾತ್ರ ಅವಕಾಶ ನೀಡಲಾಗಿದೆ. ವಿಶೇಷವಾಗಿ ಕೈಗೊಂಡಿರುವ ಈ ಪರೀಕ್ಷಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸುವ ಹಾಗೂ ವಿದ್ಯಾರ್ಥಿಗಳು ಇದರಿಂದಾಗುವ ಉತ್ತಮ ಅವಕಾಶವನ್ನು ಪಡೆದುಕೊಳ್ಳುವ ಸಂಬಂಧ, ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗವು ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಜಿ.ಹೆಚ್.ಮಹದೇವ ಸ್ವಾಮಿ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅವರ ಮೊಬೈಲ್ ಸಂಖ್ಯೆ: 9035235245 ಹಾಗೂ ಕಚೇರಿ ಸಂಖ್ಯೆ: 0821-2419273 ಯನ್ನು ಸಂಪರ್ಕಿಸಬಹುದು” ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರು ಹೆಚ್ಚಿದ್ದು, ಅಗತ್ಯ…

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಪ್ರಕಟಿಸಿದೆ. ಈ ಮೂಲಕ ಅನುಜ್‌ ಅಗ್ನಿಹೋತ್ರಿಗೆ ದೇಶಕ್ಕೆ ಫಸ್ಟ್ ರ‍್ಯಾಂಕ್ ಪಡೆದುಕೊಂಡಿದ್ದಾರೆ. 2025ರ ಆಗಸ್ಟ್ ತಿಂಗಳಲ್ಲಿ ನಾಗರಿಕ ಸೇವೆಗಳ ಪರೀಕ್ಷೆಗಳು ನಡೆದಿದ್ದವು. ಇದೀಗ…

You Missed

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!