ನಶೆಯಲ್ಲಿ ಮಹಡಿಯಿಂದ ಬಿದ್ದು ವ್ಯಕ್ತಿ ಸಾ*ವು – ಬಯಲಾಯ್ತು ಕೊ* ರಹಸ್ಯ

ಬೆಂಗಳೂರು: ನಶೆಯಲ್ಲಿ ಮೊದಲ ಮಹಡಿಯಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತ್ಯಕ್ರಿಯೆ ವೇಳೆ ಪೊಲೀಸರು ಎಂಟ್ರಿ ಕೊಟ್ಟ ಬಳಿಕ ಕೊಲೆಯ ರಹಸ್ಯ ಬಯಲಾಗಿದೆ.

ಮೃತನನ್ನು ಇನಾಯತ್ ಹಾಗೂ ಆರೋಪಿಯನ್ನು ಮಸೂರ್ ಅಹ್ಮದ್ ಎಂದು ಗುರುತಿಸಲಾಗಿದೆ. ಮೃತ ಇನಾಯತ್ ಮೆಕಾನಿಕ್ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.

ಕಳೆದ 11 ವರ್ಷಗಳಿಂದ ಬೆಂಗಳೂರಿನ ವಿವೇಕ ನಗರದ ಆಸ್ಟಿನ್ ಟೌನ್‌ನಲ್ಲಿ ತನ್ನ ಮಾವನ ಮನೆಯಲ್ಲಿ ಇನಾಯತ್ ವಾಸವಾಗಿದ್ದ. ಇತ್ತೀಚಿಗೆ ಕೌಟುಂಬಿಕ ಕಲಹದಿಂದಾಗಿ ಇನಾಯತ್‌ಗೆ ಡಿವೋರ್ಸ್ ಆಗಿತ್ತು. ಬಳಿಕ ಒಂಟಿಯಾಗಿ ವಾಸವಿದ್ದ. ಆದರೆ ಈಗೀಗ ಮಾವ ಮಸೂರ್ ಅಹ್ಮದ್ ಮನೆ ಖಾಲಿ ಮಾಡುವಂತೆ ಇನಾಯತ್‌ಗೆ ಕಿರುಕುಳ ನೀಡೋಕೆ ಶುರು ಮಾಡಿದ್ದ.

ಕಳೆದ ಭಾನುವಾರ ಮನೆಗೆ ಬಂದ ಇನಾಯತ್ ಮಾವ ಮಸೂರ್ ಅಹ್ಮದ್ ಇದೇ ವಿಚಾರಕ್ಕೆ ಗಲಾಟೆ ಮಾಡಿದ್ದಾರೆ. ಇಬ್ಬರು ಕೂಡ ಪರಸ್ಪರ ಜೋರು ಗಲಾಟೆ ಮಾಡ್ಕೊಂಡು, ಹೊಡೆದಾಡಿದ್ದಾರೆ. ಈ ಗಲಾಟೆಯಲ್ಲಿ ಇನಾಯತ್‌ಗೆ ಹಿಗ್ಗಾಮುಗ್ಗ ಥಳಿಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದ. ತಕ್ಷಣ ಅಲರ್ಟ್ ಆದ ಮಾವ ಮಸೂರ್ ಅಹ್ಮದ್ ಕುಟುಂಬಸ್ಥರಿಗೆ ಕಾಲ್ ಮಾಡಿ, ಇನಾಯತ್ ಕುಡಿದು ಫಸ್ಟ್ ಫ್ಲೋರ್‌ನಿಂದ ಬಿದ್ದು ಮೃತಪಟ್ಟಿದ್ದಾನೆ ಎಂದು ಹೇಳಿದ್ದ. ನಂತರ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲು ಕುಟುಂಬಸ್ಥರು ತೀರ್ಮಾನ ಮಾಡಿದರು.

ಮಸೀದಿಯಲ್ಲಿ ಪ್ರಾರ್ಥನೆ ಮಾಡಿ, ಇನ್ನೇನು ಮೃತದೇಹವನ್ನು ತೆಗೆದುಕೊಂಡು ಹೋಗಬೇಕು ಎನ್ನುವಾಗ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಪೋಸ್ಟ್ ಮಾರ್ಟಂ ರಿಪೋರ್ಟ್‌ನಲ್ಲಿ ಮೃತದೇಹದ ಹಲವು ಕಡೆಗಳಲ್ಲಿ ಗಾಯವಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಆರೋಪಿ ಮಸೂರ್ ಅಹ್ಮದ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಅನ್ನೋದು ಬೆಳಕಿಗೆ ಬಂದಿದೆ.

 

 

 

Related Posts

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ಖ್ಯಾತ ದಳಪತಿ ವಿಜಯ್ ಮುಚ್ಚುಮರೆ ಇಲ್ಲದೇ ನಟಿ ತ್ರಿಷಾ ಕೃಷ್ಣನ್ ಜೊತೆ ತಿರುಗಾಡುತ್ತಿದ್ದಾರೆ. ಅವರ ಈ ವರ್ತನೆಯಿಂದ ಅಭಿಮಾನಿಗಳಿಗೆ ಮುಜುಗರ ಆಗಿದೆ. ಆದರೆ ಕೆಲವು ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ತ್ರಿಷಾ ಜೊತೆಗಿನ ಒಟನಾಟದಿಂದ ತೊಂದರೆ ಆಗುವ…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!