ಮಕ್ಕಳೊಂದಿಗೆ ಮೋದಿ ರಕ್ಷಾಬಂಧನ ಸಂಭ್ರಮ : ಪ್ರಧಾನಿಗೆ ರಾಖಿ ಕಟ್ಟಿದ ಶಾಲಾ ಮಕ್ಕಳು, ಸೋದರಿಯರು .

ಇವತ್ತು ರಕ್ಷಾಬಂಧನ ಹಬ್ಬದ ಸಂಭ್ರಮ. ಎಲ್ಲ ಸೋದರಿಯರು ತಮ್ಮ ಸೋದರರಿಗೆ ರಾಖಿ ಕಟ್ಟುತ್ತಿದ್ದಾರೆ. ಪ್ರಧಾನಿ ಮೋದಿಗೆ ದೆಹಲಿಯಲ್ಲಿ ಶಾಲಾ ಮಕ್ಕಳು ರಾಖಿ ಕಟ್ಟಿದ್ದಾರೆ. ಜೊತೆಗೆ ಪ್ರಜಾಪಿತ ಬ್ರಹ್ಮ ಕುಮಾರಿ ಸಂಘಟನೆಯ ಸೋದರಿಯರು ಪ್ರಧಾನಿ ಮೋದಿಗೆ ರಾಖಿ ಕಟ್ಟಿದ್ದರು

ದೇಶದೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತಿದೆ. ಸೋದರಿಯರು ತಮ್ಮ ಸೋದರರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಹಬ್ಬವನ್ನು ಆಚರಿಸುತ್ತಿದ್ದಾರೆ. ಸೋದರಿಯರು ಸಂಕಷ್ಟದಲ್ಲಿದ್ದಾಗ, ಸೋದರರು ಬಂದು ರಕ್ಷಿಸುತ್ತಾರೆ. ಈ ಪ್ರೀತಿಯ, ಸೋದರತ್ವ, ಭಾಂಧವ್ಯದ ಸಂಕೇತವಾಗಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತಿದೆ. ಹಳ್ಳಿಯಿಂದ ದಿಲ್ಲಿಯವರೆಗೂ ಎಲ್ಲೆಲ್ಲೂ ಇಂದು ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಪ್ರಧಾನಿ ನಿವಾಸದಿಂದ ಹಿಡಿದು ಹಳ್ಳಿಯ ಬಡವರ ಮನೆಯವರೆಗೂ ಎಲ್ಲೆಲ್ಲೂ ರಕ್ಷಾ ಬಂಧನ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಪ್ರಧಾನಿ ನಿವಾಸಕ್ಕೆ ದೆಹಲಿಯ ಶಾಲಾ ಮಕ್ಕಳು ಭೇಟಿ ನೀಡಿ ಪ್ರಧಾನಿ ಮೋದಿಗೆ ಸೋದರತ್ವದ ಸಂಕೇತವಾದ ರಾಖಿಯನ್ನು ಕಟ್ಟಿದ್ದರು. ಪ್ರಧಾನಿ ಮೋದಿ ಖುಷಿಯಿಂದ ಶಾಲಾ ಮಕ್ಕಳ ಜೊತೆ ಬೆರೆತು, ಮಾತನಾಡಿ ರಾಖಿ ಕಟ್ಟಿಸಿಕೊಂಡರು. ಮಕ್ಕಳಿಗೆ ಚಾಕಲೇಟ್ ಸೇರಿದಂತೆ ಗಿಫ್ಟ್ ನೀಡಿದ್ದರು. ಪ್ರಧಾನಿ ನಿವಾಸದ ರಕ್ಷಾ ಬಂಧನ ಹಬ್ಬದ ಪೋಟೋಗಳ ಝಲಕ್ ಇಲ್ಲಿದೆ ನೋಡಿ.

 

 

 

ಓರ್ವ ಬಾಲಕಿಯ ಮೋದಿಗೆ ರಾಖಿ ಕಟ್ಟಿದ ಬಳಿಕ ಮೋದಿ ಜೊತೆಗೆ ಆಟವಾಡಿದ್ದರು. ಪ್ರಜಾಪಿತ ಬ್ರಹ್ಮಕುಮಾರಿ ಸಂಘಟನೆಯ ಸೋದರಿಯರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಕ್ಷಾ ಬಂಧನ ಹಬ್ಬದ ಪ್ರಯುಕ್ತ ಮೋದಿ ಅವರಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದರು. ರಕ್ಷಾ ಬಂಧನದ ವೇಳೆ ಪ್ರತಿ ವರ್ಷವೂ ಮೋದಿ ಸೋದರಿಯರಿಂದ ರಾಖಿ ಕಟ್ಟಿಸಿಕೊಳ್ಳುತ್ತಾರೆ. ಇಂದು ಆ ಸಂಪ್ರದಾಯವನ್ನು ಮುಂದುವರಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಕೈ ತುಂಬ ಇಂದು ರಾಖಿಗಳು ತುಂಬಿದ್ದವು. ಬಣ್ಣ ಬಣ್ಣದ ರಾಖಿಗಳನ್ನು ಶಾಲಾ ಮಕ್ಕಳು, ಪ್ರಜಾಪಿತ ಬ್ರಹ್ಮಕುಮಾರಿ ಸೋದರಿಯರು ಕಟ್ಟಿದ್ದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!