ಬಳ್ಳಾರಿಯಲ್ಲಿ ಮನಿ ಡಬ್ಲಿಂಗ್ ,ಕೋಟ್ಯಂತರ ರೂ. ವಂಚನೆ!

ವೆಂಕಟೇಶ ಎಂಬಾತ ಚಿಟ್ ಫಂಡ್ ವ್ಯವಹಾರದ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರಿಂದ ಹಣ ಸಂಗ್ರಹಿಸಿ ಪರಾರಿಯಾಗಿದ್ದಾನೆ. 800ಕ್ಕೂ ಹೆಚ್ಚು ಜನರು ಮೋಸ ಹೋಗಿದ್ದು, 200ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ವಂಚಕನನ್ನು ಬಂಧಿಸಿ ಹಣ ಮರಳಿಸುವಂತೆ ಸಂತ್ರಸ್ತರು ಆಗ್ರಹಿಸಿದ್ದಾರೆ.
ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಳಿಗೆ ವಂಚನೆ ಕೋಟ್ಯಂತರ ರೂ. ಸಹಿತ ಆರೋಪಿ ಪರಾರಿ

ಭಾರೀ ಚೀಟಿ ವಂಚನೆ ಪ್ರಕರಣವೊಂದರಲ್ಲಿ ಬಳ್ಳಾರಿಯ ನೂರಾರು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ವಿಚಾರ ಬೆಳಕಿಗೆ ಬಂದಿದೆ. ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂದು ನಂಬಿಸಿ ಜನರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವ್ಯಕ್ತಿಯೊಬ್ಬ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿಯ ದೇವಿನಗರ ನಿವಾಸಿ ವೆಂಕಟೇಶ ಎಂಬಾತ ಚೀಟಿ ವ್ಯವಹಾರದ ಹೆಸರಿನಲ್ಲಿ ಸುಮಾರು 800ಕ್ಕೂ ಹೆಚ್ಚು ಜನರಿಂದ ಹಣ ಸಂಗ್ರಹಿಸಿದ್ದಾನೆ ಎನ್ನಲಾಗಿದೆ. ಒಬ್ಬರಿಂದ 10 ಸಾವಿರ ರೂಪಾಯಿಯಿಂದ ಹಿಡಿದು 1 ಕೋಟಿ ರೂಪಾಯಿ ವರೆಗೆ ಹಣ ಪಡೆದುಕೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಆತ ಸಂಗ್ರಹಿಸಿದ ಒಟ್ಟು ಮೊತ್ತ ನೂರಾರು ಕೋಟಿಗಳಿಗೆ ತಲುಪಿರಬಹುದೆಂದು ಅಂದಾಜಿಸಲಾಗಿದೆ.


ಹಣ ಕಳೆದುಕೊಂಡವರಲ್ಲಿ ಟೀ ಅಂಗಡಿ ನಡೆಸುವವರು, ಬೀದಿ ವ್ಯಾಪಾರಿಗಳು, ತರಕಾರಿ ಮಾರಾಟಗಾರರು ಸೇರಿದಂತೆ ಬಡ ಹಾಗೂ ಮಧ್ಯಮ ವರ್ಗದ ಜನರು ಹೆಚ್ಚಿದ್ದಾರೆ. ಮಕ್ಕಳ ಶಿಕ್ಷಣ, ಮಗಳ ಮದುವೆ, ಮನೆ ನಿರ್ಮಾಣ, ಹೋಟೆಲ್ ಆರಂಭಿಸುವ ಕನಸು ಸೇರಿದಂತೆ ವಿವಿಧ ಉದ್ದೇಶಗಳಿಗೆ ವರ್ಷಗಳ ಕಾಲ ದುಡಿದು ಕೂಡಿಸಿದ ಹಣವನ್ನು ಚೀಟಿ ರೂಪದಲ್ಲಿ ಹೂಡಿಕೆ ಮಾಡಿದ್ದರು. ಕಟ್ಟಿದ ಹಣಕ್ಕೆ ಹೆಚ್ಚಿನ ಬಡ್ಡಿ ಸಿಗುತ್ತದೆ ಎಂಬ ಭರವಸೆಯ ಮಾತುಗಳಿಗೆ ಮೋಸಹೋಗಿದ್ದಾರೆ.

200ಕ್ಕೂ ಹೆಚ್ಚು ಜನರಿಂದ ಪೊಲೀಸ್ ದೂರು


ಕೋಟ್ಯಂತರ ರೂಪಾಯಿ ಸಂಗ್ರಹಿಸಿದ ಬಳಿಕ ವೆಂಕಟೇಶ ಕಳೆದ ತಿಂಗಳು ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಇದುವರೆಗೆ ಆತನ ಸುಳಿವು ಪತ್ತೆಯಾಗಿಲ್ಲ. ಬಳ್ಳಾರಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ 200ಕ್ಕೂ ಹೆಚ್ಚು ಜನರು ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಶೀಘ್ರ ಬಂಧಿಸಿ ನಮ್ಮ ಹಣ ವಾಪಸ್ ಕೊಡಿಸುವಂತೆ ವಂಚನೆಗೊಳಗಾದವರು ಪೊಲೀಸರನ್ನು ಆಗ್ರಹಿಸುತ್ತಿದ್ದಾರೆ.

ಈ ಪ್ರಕರಣ ಸಂಬಂಧ ಸ್ಥಳೀಯ ಶಾಸಕ ಭರತ್ ರೆಡ್ಡಿ ಕೂಡ ಪೊಲೀಸರೊಂದಿಗೆ ಮಾತನಾಡಿ, ಆರೋಪಿಯನ್ನು ಪತ್ತೆಹಚ್ಚಿ ಅಮಾಯಕರ ಹಣ ಮರಳಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ವಿಪರ್ಯಾಸವೆಂದರೆ, ವೆಂಕಟೇಶ ಕಾಣೆಯಾಗಿದ್ದಾನೆ ಎಂದು ಆತನ ಕುಟುಂಬಸ್ಥರು ಮಿಸ್ಸಿಂಗ್ ದೂರು ದಾಖಲಿಸಿರುವ ಮಾಹಿತಿ ಕೂಡ ಲಭ್ಯವಾಗಿದೆ. ಇದರಿಂದ ಪ್ರಕರಣ ಮತ್ತಷ್ಟು ಕುತೂಹಲ ಕೆರಳಿಸಿದೆ.

ಉಂಡ ಮನೆಗೇ ಕನ್ನ ಹಾಕಿದ BSNL ಅಧಿಕಾರಿಗಳು 70 ಲಕ್ಷ ಮೌಲ್ಯದ ಕಾಪರ್ ಕೇಬಲ್ ಕಳವು, ಒಟ್ಟಿನಲ್ಲಿ ಹೆಚ್ಚು ಲಾಭದ ಆಸೆಗೆ ಬಿದ್ದು ದುಡಿದ ಹಣವನ್ನು ಹೂಡಿಕೆ ಮಾಡಿದ ನೂರಾರು ಕುಟುಂಬಗಳು ಇದೀಗ ಬೀದಿಗೆ ಬಂದಂತಾಗಿದ್ದು, ಕಂಗಾಲಾಗಿವೆ. ವಂಚಕನನ್ನು ಶೀಘ್ರ ಪತ್ತೆಹಚ್ಚಿ ಜನರ ಹಣ ಮರಳಿಸುವಲ್ಲಿ ಪೊಲೀಸರು ಯಶಸ್ವಿಯಾಗುತ್ತಾರೆಯೇ ಎಂಬುದು ಕಾದು ನೋಡಬೇಕಾಗಿದೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!