ಮುಡಾ ಪ್ರಕರಣ: ಸಿಬಿಐ ತನಿಖೆಗೆ ವಹಿಸಲು ಮನವಿ.

ಮೈಸೂರು : (ಬಿಎಲ್ ಯು)-ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮನವಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಆದರೆ ಸಮನ್ಸ್ ಪಡೆ ಯಲು ಅಪಾಯಿಂಟ್‌ಮೆಂಟ್ ತೆಗೆದು ಕೊಂಡು ಬನ್ನಿ ಎಂದು ಸಿದ್ದರಾಮಯ್ಯ ಅವರ ಮನೆಯ ಭದ್ರತೆಗೆ ನಿಯೋ ಜಿಸಿರುವ ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಈ ಸಂಬಂಧ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿ ನೇತೃತ್ವದ ವಿಭಾಗೀಯ ಪೀಠದಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಜುಲೈ 10 ರಂದು ನಡೆದ ವಿಚಾರಣೆ ವೇಳೆ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಬಗ್ಗೆ ಖದ್ದು ಹಾಜರಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಬೇಕು. ಇಲ್ಲವೇ ನಿಮ್ಮ ವಕೀಲ ರಿಂದ ಅಭಿಪ್ರಾಯ ತಿಳಿಸಿ ಎಂದು ಹೈಕೋರ್ಟ್ ಪಾರ್ವತಿ ಅವರಿಗೆ ಸಮನ್ಸ್ ನೀಡಿದೆ.

ಈ ಸಂಬಂಧ ಇಂದು ನಮ್ಮ ವಕೀಲರ
ಮೂಲಕ ಸಮನ್ಸ್ ಜಾರಿ ಮಾಡಲು ಬೆಂಗಳೂರಿನ ವಿಜಯನಗರದ ಸಿದ್ದರಾಮಯ್ಯ ಅವರ ಮನೆಗೆ ಹೋಗಿದ್ದೆವು. ಆದರೆ ಪಾರ್ವತಿ ಅವರು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ವಾಸವಾಗಿದ್ದಾರೆ. ಅಲ್ಲಿಗೆ ಹೋಗಿ ಎಂದು ಸಲಹೆ ನೀಡಿದರು ಎಂದು ಸ್ನೇಹಮಯಿ ಕೃಷ್ಣ ಹೇಳಿದರು.

ತರುವಾಯ ಕಾವೇರಿ ನಿವಾಸಕ್ಕೆ ಹೋದಾಗ ಪಾರ್ವತಿ ಅವರು ಮನೆಯಲ್ಲಿ ಇಲ್ಲ ಎಂದು ಭದ್ರತೆಗೆ ನಿಯೋಜನೆ ಗೊಂಡಿದ್ದ ಪೊಲೀಸ್ ಇನ್ಸ್ ಪೆಕ್ಟರ್ ತಿಳಿಸಿ ದರು. ಇದು ಕೋರ್ಟ್ ಸಮನ್ಸ್ ಆಗಿರುವ ಕಾರಣ ಅವರನ್ನು ಖದ್ದು ಭೇಟಿ ಮಾಡಿ ನೀಡಬೇಕು ಎಂದು ತಿಳಿಸಿದ್ದೆವು. ಪಾರ್ವತಿ ಅವರನ್ನು ಭೇಟಿ ಮಾಡಬೇಕೆಂದರೆ ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳ ಬೇಕು ಎಂದು ಇನ್ಸ್‌ಪೆಕ್ಟರ್ ಹೇಳಿದರು.

ಎಂತಹ ಪ್ರಭಾವಿಯಾದರೂ ಕೋರ್ಟ್ ಸಮನ್ಸ್ ನೀಡಲು ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳುವ ನಿಯಮ ಇಲ್ಲ. ಆದ ಕಾರಣ ಸೆಪ್ಟೆಂಬರ್ 4 ರಂದು ನಡೆಯುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಗಳ ನೇತೃತ್ವದ ವಿಭಾಗೀಯ ಪೀಠಕ್ಕೆ ಈ ವಿಚಾರವನ್ನು ಅಫಿಡವಿಟ್ ಮೂಲಕ ತಿಳಿಸು ತ್ತೇವೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!