
ಪ್ರಾಧ್ಯಾಪಕರ ಕೊರತೆಯಿಂದ ಪಿಹೆಚ್.ಡಿ. ಕೆ-ಸೆಟ್. ನೀಟ್. ಜೆಆರ್.ಎ ಉತ್ತೀರ್ಣ ರಾದ ಅಭ್ಯರ್ಥಿಗಳಿಗೆ ವಿಶ್ವವಿದ್ಯಾನಿಲಯ ದಲ್ಲಿ ಪಿಹೆಚ್.ಡಿ ಮಾಡಲು ಅವಕಾಶ ಇಲ್ಲದಂತಾಗಿದೆ. ಆದ್ದರಿಂದ ಈಗಿರುವ ಕಾಯಂ ಪ್ರಾಧ್ಯಾಪಕರ ಬಳಿಯೇ . ಮಾರ್ಗದರ್ಶನ ಪಡೆಯಲು ಅವಕಾಶ ಕೊಡಬೇಕು. ಪಿಹೆಚ್.ಡಿ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಹೆಚ್ಚುವರಿ ಸೀಟುಗಳನ್ನು ನೀಡಿ ಸಂಶೋಧನೆ ಮಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಸಂಶೋಧನಾ ಆಕಾಂಕ್ಷಿಗಳ ಬೇಡಿಕೆಗಳು:
ಪಿಹೆಚ್.ಡಿ ಮಾರ್ಗದರ್ಶನಕ್ಕೆ ಹೆಚ್ಚುವರಿ ದಾಖಲಾತಿ ಕೊಡಬೇಕು. ವಿಶ್ವವಿದ್ಯಾನಿಲಯ ದಲ್ಲಿ ಸಾಮಾಜಿಕ ವಿಜ್ಞಾನದಲ್ಲಿ ಪಿಹೆಚ್.ಡಿ ಮಾರ್ಗದರ್ಶಕರ ಕೊರತೆ ಇರುವುದರಿಂದ ಕೇಂದ್ರದ ಯುಜಿಸಿ ಮಾರ್ಗಸೂಚಿಯ ಪ್ರಕಾರ ಇತರೆ ವಿಶ್ವವಿದ್ಯಾನಿಲಯಗಳ ಸಾಮಾಜಿಕ ಅಧ್ಯಯನ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರುಗಳಿಗೆ ನೀಡಿರುವಂತೆ ಇಲ್ಲಿಯೂ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇದರಿಂದ ವಿಶ್ವವಿದ್ಯಾನಿಲಯಕ್ಕೆ ಯಾವುದೇ ಆರ್ಥಿಕ ಹೊಣೆಗಾರಿಕೆ ಇರುವುದಿಲ್ಲ ಮತ್ತು ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಸಹ ಪ್ರಾಧ್ಯಾಪಕರಿಗೆ ಸಂಶೋಧನಾ ವಿದ್ಯಾರ್ಥಿ ಗಳಿಗೆ ಮಾರ್ಗದರ್ಶನ ನೀಡಲು ಅವಕಾಶ ನೀಡಬೇಕು. ಪ್ರಾಧ್ಯಾಪಕರಾಗಿದ್ದು ಮಾರ್ಗ ದರ್ಶನ ಪಡೆಯದೆ ಇರುವ ಪ್ರಾಧ್ಯಾಪಕ ರಿಗೆ ಮಾರ್ಗದರ್ಶನ ಮಾಡುವುದಕ್ಕೆ ಸಲಹೆ ನೀಡಬೇಕು ಎಂದು ಒತ್ತಾಯಿಸಿದರು.
ಧರಣಿಯಲ್ಲಿ ಮಾಜಿ ಮೇಯರ್ ಪುರುಷೋತ್ತಮ್, ಸಂಶೋಧನಾ ಸಂಘದ ಅಧ್ಯಕ್ಷ ಶಿವಶಂಕರ್, ವಿಶ್ವ ಪ್ರಸಾದ್, ಉಪಾಧ್ಯಕ್ಷ ಮರಳಿ ಮಹೇಶ್, ಹಿರಿಯ ಹೋರಾಟಗಾರರು ಚೋರ್ನಳ್ಳಿ ಶಿವಣ್ಣ, ಯುವ ಹೋರಾಟಗಾರ ಪ್ರದೀಪ್ ಮುಮ್ಮಾಡಿ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ದಲಿತ ಸಂಶೋಧಕ ಸಂಘ ಇನ್ನಿತರರು ಪಾಲ್ಗೊಂಡಿದ್ದರು.





