ಮೈಸೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಸಂಘಟನೆಯಿಂದ ಅಹೋರಾತ್ರಿ ಧರಣಿ.

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾರ್ಗದರ್ಶಕರ ಕೊರತೆಯಿದ್ದು, ಹೊಸದಾಗಿ ಪಿಎಚ್.ಡಿ ಪ್ರವೇಶಾತಿ ಪಡೆ ಯುವ ವಿದ್ಯಾರ್ಥಿಗಳಿಗೆ ತೊಡಕಾಗಿದೆ ಎಂದು ಆರೋಪಿಸಿ ಮೈಸೂರು ವಿಶ್ವ ವಿದ್ಯಾನಿಲಯ ಸಂಶೋಧನಾ ವಿದ್ಯಾರ್ಥಿ ಗಳ ಸಂಘಟನೆಯ ವತಿಯಿಂದ ಕ್ರಾಪರ್ಡ್ ಹಾಲ್ ಮುಂಭಾಗ ಮಂಗಳವಾರದಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ.

ಪ್ರಾಧ್ಯಾಪಕರ ಕೊರತೆಯಿಂದ ಪಿಹೆಚ್.ಡಿ. ಕೆ-ಸೆಟ್. ನೀಟ್. ಜೆಆ‌ರ್.ಎ ಉತ್ತೀರ್ಣ ರಾದ ಅಭ್ಯರ್ಥಿಗಳಿಗೆ ವಿಶ್ವವಿದ್ಯಾನಿಲಯ ದಲ್ಲಿ ಪಿಹೆಚ್.ಡಿ ಮಾಡಲು ಅವಕಾಶ ಇಲ್ಲದಂತಾಗಿದೆ. ಆದ್ದರಿಂದ ಈಗಿರುವ ಕಾಯಂ ಪ್ರಾಧ್ಯಾಪಕರ ಬಳಿಯೇ . ಮಾರ್ಗದರ್ಶನ ಪಡೆಯಲು ಅವಕಾಶ ಕೊಡಬೇಕು. ಪಿಹೆಚ್.ಡಿ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಹೆಚ್ಚುವರಿ ಸೀಟುಗಳನ್ನು ನೀಡಿ ಸಂಶೋಧನೆ ಮಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸಂಶೋಧನಾ ಆಕಾಂಕ್ಷಿಗಳ ಬೇಡಿಕೆಗಳು:

ಪಿಹೆಚ್.ಡಿ ಮಾರ್ಗದರ್ಶನಕ್ಕೆ ಹೆಚ್ಚುವರಿ ದಾಖಲಾತಿ ಕೊಡಬೇಕು. ವಿಶ್ವವಿದ್ಯಾನಿಲಯ ದಲ್ಲಿ ಸಾಮಾಜಿಕ ವಿಜ್ಞಾನದಲ್ಲಿ ಪಿಹೆಚ್.ಡಿ ಮಾರ್ಗದರ್ಶಕರ ಕೊರತೆ ಇರುವುದರಿಂದ ಕೇಂದ್ರದ ಯುಜಿಸಿ ಮಾರ್ಗಸೂಚಿಯ ಪ್ರಕಾರ ಇತರೆ ವಿಶ್ವವಿದ್ಯಾನಿಲಯಗಳ ಸಾಮಾಜಿಕ ಅಧ್ಯಯನ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರುಗಳಿಗೆ ನೀಡಿರುವಂತೆ ಇಲ್ಲಿಯೂ ನೀಡಬೇಕು  ಎಂದು ಒತ್ತಾಯಿಸಿದ್ದಾರೆ.

ಇದರಿಂದ ವಿಶ್ವವಿದ್ಯಾನಿಲಯಕ್ಕೆ ಯಾವುದೇ ಆರ್ಥಿಕ ಹೊಣೆಗಾರಿಕೆ ಇರುವುದಿಲ್ಲ ಮತ್ತು ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಸಹ ಪ್ರಾಧ್ಯಾಪಕರಿಗೆ ಸಂಶೋಧನಾ ವಿದ್ಯಾರ್ಥಿ ಗಳಿಗೆ ಮಾರ್ಗದರ್ಶನ ನೀಡಲು ಅವಕಾಶ ನೀಡಬೇಕು. ಪ್ರಾಧ್ಯಾಪಕರಾಗಿದ್ದು ಮಾರ್ಗ ದರ್ಶನ ಪಡೆಯದೆ ಇರುವ ಪ್ರಾಧ್ಯಾಪಕ ರಿಗೆ ಮಾರ್ಗದರ್ಶನ ಮಾಡುವುದಕ್ಕೆ ಸಲಹೆ ನೀಡಬೇಕು ಎಂದು ಒತ್ತಾಯಿಸಿದರು.

ಧರಣಿಯಲ್ಲಿ ಮಾಜಿ ಮೇಯರ್ ಪುರುಷೋತ್ತಮ್, ಸಂಶೋಧನಾ ಸಂಘದ ಅಧ್ಯಕ್ಷ ಶಿವಶಂಕರ್, ವಿಶ್ವ ಪ್ರಸಾದ್, ಉಪಾಧ್ಯಕ್ಷ ಮರಳಿ ಮಹೇಶ್, ಹಿರಿಯ ಹೋರಾಟಗಾರರು ಚೋರ್ನಳ್ಳಿ ಶಿವಣ್ಣ, ಯುವ ಹೋರಾಟಗಾರ ಪ್ರದೀಪ್  ಮುಮ್ಮಾಡಿ  ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ  ದಲಿತ ಸಂಶೋಧಕ ಸಂಘ ಇನ್ನಿತರರು ಪಾಲ್ಗೊಂಡಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!