ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣಕ್ಕೆ ಶಾಸಕ ಜಿ.ಟಿ. ದೇವೇಗೌಡ ಭರವಸೆ.
ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ತಮ್ಮ ಅಮೋಘ ಗಾಯನದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಗಾನಕೋಗಿಲೆ ಎಸ್. ಜಾನಕಿ ಅವರ ಸ್ಮರಣಾರ್ಥ ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ಎಂದು ನಾಮಕರಣ ಮಾಡುವುದಾಗಿ ಸ್ಥಳೀಯ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಭರವಸೆ ನೀಡಿದ್ದಾರೆ.
ಎಸ್. ಜಾನಕಿ ಅವರ ಸಾಕು ಮಗ ಎಂದು ಗುರುತಿಸಿಕೊಂಡಿರುವ ಮೈಸೂರಿನ ನವೀನ್ ಅವರು ಈ ಕುರಿತು ಶಾಸಕರಿಗೆ ಮನವಿ ಸಲ್ಲಿಸಿದ್ದರು. ಮನವಿಗೆ ಸ್ಪಂದಿಸಿದ ಶಾಸಕ ಜಿ.ಟಿ. ದೇವೇಗೌಡ ಅವರು, ಜಾನಕಿ ಅವರ ಸ್ಮರಣೆಯನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.




