ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರು.

ಶಿವಮೊಗ್ಗ : ಆಗುಂಬೆ ಠಾಣಾ ವ್ಯಾಪ್ತಿಯ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರಾಗಿದ್ದು ಬಳಿಕ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಬಿ.ಜಿ ಕೃಷ್ಣಮೂರ್ತಿಯನ್ನ ಪೊಲೀಸರು ನಿನ್ನೆ ರಾತ್ರಿ ಕೇರಳದಿಂದ ಶಿವಮೊಗ್ಗಕ್ಕೆ ಕರೆ ತಂದಿದ್ದರು. ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನಂತರ ವಿಚಾರಣೆ ಮುಗಿಸಿ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಶಿವಮೊಗ್ಗ ಜೈಲಿಗೆ ರವಾನಿಸಲಾಗಿದೆ.
2021 ರ ನವೆಂಬರ್ ನಲ್ಲಿ ನಕ್ಸಲ್ ಕೃಷ್ಣಮೂರ್ತಿಯನ್ನ ಕೇರಳ ಪೊಲೀಸರಿಂದ ಬಂಧಿಸಿದ್ದರು. ನಂತರ ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ನ ಜೈಲಿನಲ್ಲಿ ಕೃಷ್ಣಮೂರ್ತಿ ಬಂಧಿಯಾಗಿದ್ದು, ಇಂದು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಕೋರ್ಟ್ ಜೂನ್ 16ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ. ಬಿ.ಜಿ ಕೃಷ್ಣಮೂರ್ತಿ ನಕ್ಸಲ್ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿಕೊಂಡಿದ್ದು, ಆಗುಂಬೆಯಲ್ಲಿ ಚೆಕ್ ಪೋಸ್ಟ್ ಸುಟ್ಟಿದ್ದ ಪ್ರಕರಣ ಹಾಗೂ ದರೋಡೆ ಪ್ರಕರಣ ಸೇರಿದಂತೆ ಬಸ್ ಸುಟ್ಟಿದ್ದ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.
ಶಿವಮೊಗ್ಗದಲ್ಲಿ ಬಿ. ಜಿ ಕೃಷ್ಣಮೂರ್ತಿ ಪರ ವಕೀಲ ಶ್ರೀಪಾಲ್ ಮಾತನಾಡಿ, ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಪ್ರಕರಣಗಳ ವಿಚಾರಣೆ ಇತ್ತು. ವಿಚಾರಣೆ ಹಿನ್ನಲೆ ನಿನ್ನೆ ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೇಲೆ ಪೊಲೀಸರು ಶಿವಮೊಗ್ಗ ಕರೆತಂದಿದ್ದರು. ವಿಚಾರಣೆಯನ್ನ ಜೂನ್ 16ಕ್ಕೆ ಮುಂದೂಡಲಾಗಿದೆ. ಕೆಲವೊಂದು ಪುಸ್ತಕ ತೆಗೆದುಕೊಂಡು ಹೋಗಲು ಅನುಮತಿ ಕೇಳಿದ್ದಾರೆ. ಪುಸ್ತಕ ತೆಗೆದುಕೊಂಡು ಹೋಗಲು ಶಿವಮೊಗ್ಗ ನ್ಯಾಯಾಧೀಶರು ಅನುಮತಿ ನೀಡಿದ್ದಾರೆ. ಕಾನೂನಿಗೆ ಸಂಬಂಧಿಸಿದ ಹಾಗೂ ಡಾ. ಬಿ. ಆರ್ ಅಂಬೇಡ್ಕರ್ ಕುರಿತ ಪುಸ್ತಕ ಸೇರಿ ಕಾದಂಬರಿ ಪುಸ್ತಕ ತೆಗೆದುಕೊಂಡು ಹೋಗಲು ಅನುಮತಿ ಸಿಕ್ಕಿದೆ. ಮುಂದಿನ ವಿಚಾರಣೆಗೆ ವಿಸಿ ಮೂಲಕ ಭಾಗವಹಿಸಲು ನ್ಯಾಯಾಲಯ ಅನುಮೋದಿಸಿದೆ ಎಂದು ತಿಳಿಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!