ಚನ್ನಪಟ್ಟಣಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಅದರಲ್ಲೂ ತೀವ್ರ ಕುತೂಹಲ ಮೂಡಿಸಿದ್ದ ಎನ್​ಡಿಎ ಅಭ್ಯರ್ಥಿ ಕೊನೆಗೂ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಅಳೆದು ತೂಗಿ ಕೊನೆ ಕ್ಷಣದಲ್ಲಿ ನಿಖಿಲ್​ ಕುಮಾರಸ್ವಾಮಿ ಅವರಿಗೆ ಮಣೆಹಾಕಲಾಗಿದೆ.

ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿಂದು ನಡೆದ ಜೆಡಿಎಸ್​​-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್​ ಹೆಸರು ಘೋಷಣೆ ಮಾಡಲಾಯಿತು. ಸ್ವತಃ ಯಡಿಯೂರಪ್ಪ ಅವರೇ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನಿಖಿಲ್ ಸ್ಪರ್ಧೆಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಬಳಿಕ ಯಡಿಯೂರಪ್ಪ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಮನ್ವಯ ಸಭೆ ನಡೆಸಿ ನಂತರ ನಿಖಿಲ್​ ಕುಮಾರಸ್ವಾಮಿ ಎನ್​ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು. ಇದೀಗ ಚನ್ನಪಟ್ಟಣ ಎನ್​ಡಿಎ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ.

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?