ODI ಫಾರ್ಮ್ಯಾಟ್ ಗೆ ನಿವೃತ್ತಿ ಘೋಷಿಸಿದ ಸ್ಟೀವ್ ಸ್ಮಿತ್.

ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ದೊಡ್ಡ ಹೆಸರು ಮಾಡಿರುವ ಸ್ಟೀವ್ ಸ್ಮಿತ್ ಇದೀಗ ಓ.ಡಿ.ಐ ಫಾರ್ಮಾಟ್ ಗೆ ಗುಡ್ ಬಾಯ್ ಹೇಳಿದ್ದಾರೆ. ಚಾಂಪಿಯನ್ ಟ್ರೋಫಿ 2025ರ ನಾಯಕತ್ವವನ್ನು ವಹಿಸಿದ್ದ ಸ್ಟೀವ್ ಸ್ಮಿತ್ ,ಸೆಮಿ ಫೈನಲ್ಸ್ ನಲ್ಲಿ ಭಾರತದ ವಿರುದ್ಧ ಸೋಲನ್ನು ಕಂಡ ನಂತರ ಓ.ಡಿ.ಐ ನಲ್ಲಿ ತಮ್ಮ ವಿಧಾಯವನ್ನು ಘೋಷಿಸಿದ್ದಾರೆ.  ಆಸ್ಟ್ರೇಲಿಯಾ ಪರ ಸ್ಟೀವ್ ಸ್ಮಿತ್ ಈವರೆಗೆ 169 ಏಕದಿನ ಪಂದ್ಯಗಳನ್ನಾಡಿದ್ದಾರೆ. 153 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ ಅವರು 12 ಶತಕ ಹಾಗೂ 35 ಅರ್ಧಶತಕಗಳೊಂದಿಗೆ ಒಟ್ಟು 5727 ರನ್ ಕಲೆಹಾಕಿದ್ದಾರೆ. ಅಲ್ಲದೆ 2015 ಮತ್ತು 2023ರಲ್ಲಿ ಏಕದಿನ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ಭಾಗವಾಗಿದ್ದರು.
ಚಾಂಪಿಯನ್ಸ್ ಟ್ರೋಫಿ 2025 ರ ಸೆಮಿಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಹಂಗಾಮಿ ನಾಯಕರಾಗಿ ಕಾಣಿಸಿಕೊಂಡಿದ್ದ ಸ್ಮಿತ್ ಟೀಮ್ ಇಂಡಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ 73 ರನ್ ಬಾರಿಸಿ ಮಿಂಚಿದ್ದರು. ಇದಾಗ್ಯೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಿರಲಿಲ್ಲ. ಈ ಸೋಲಿನ ಬೆನ್ನಲ್ಲೇ 35 ವರ್ಷದ ಸ್ಮಿತ್ ಏಕದಿನ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿ 2025 ರ ಆರಂಭಕ್ಕೂ ಮುನ್ನ ಸ್ಟೀವ್ ಸ್ಮಿತ್ ಕೇವಲ ಬ್ಯಾಟರ್ ಆಗಿ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಗಾಯದ ಕಾರಣ ಟೂರ್ನಿಯಿಂದ ಹಿಂದೆ ಸರಿದ ಹಿನ್ನಲೆ ಸ್ಮಿತ್ ಅವರಿಗೆ ನಾಯಕತ್ವ ನೀಡಲಾಗಿತ್ತು. ಅದರಂತೆ ಸೆಮಿಫೈನಲ್ವರೆಗೆ ಯಶಸ್ವಿಯಾಗಿ ತಂಡವನ್ನು ಮುನ್ನಡೆಸಿದ್ದ ಸ್ಮಿತ್ ಇದೀಗ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಅದೂ ಸಹ ಚಾಂಪಿಯನ್ ಟ್ರೋಫಿ ಸೆಮಿ ಫೈನಲ್ಸ್ ಸೋತ ನಂತರ ಎಂಬುದು ಅಚ್ಚರಿಯಾಗಿದೆ.
ಇನ್ನು ಸ್ಮಿತ್ ಅವರನ್ನು ಕಳೆದ ಟಿ20 ವಿಶ್ವಕಪ್ ವೇಳೆ ಆಯ್ಕೆಗೆ ಪರಿಗಣಿಸಲಾಗಿಲ್ಲ. ಇದಾಗ್ಯೂ ಅವರು ಟಿ20 ಮತ್ತು ಟೆಸ್ಟ್ ತಂಡಗಳಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಅದರಂತೆ ಮುಂಬರುವ ದಿನಗಳಲ್ಲಿ ಸ್ಮಿತ್ ಆಸ್ಟ್ರೇಲಿಯಾ ಟೆಸ್ಟ್ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಇನ್ನು ಅವರ ನಿವೃತ್ತಿ ಬಗ್ಗೆ ಮಾತನಾಡಿರುವ ಸ್ಟೀವ್ ಸ್ಮಿತ್, ಇದೊಂದು ಅದ್ಭುತ ಪ್ರಯಾಣವಾಗಿತ್ತು. ನಾನು ಪ್ರತಿ ನಿಮಿಷವನ್ನು ಆನಂದಿಸಿದ್ದೇನೆ. ಅಲ್ಲಿ ಹಲವು ಅದ್ಭುತ ಕ್ಷಣಗಳು ಮತ್ತು ಅದ್ಭುತ ನೆನಪುಗಳಿವೆ. ಎರಡು ವಿಶ್ವಕಪ್ ಗೆಲ್ಲುವುದು ಒಂದು ದೊಡ್ಡ ಸಾಧನೆ. ಈ ಪಯಣದಲ್ಲಿ ತಂಡದ ಅನೇಕ ಉತ್ತಮ ಸದಸ್ಯರು ಜೊತೆಗಿದ್ದರು. 2027 ರ ಏಕದಿನ ವಿಶ್ವಕಪ್ಗೆ ತಯಾರಿ ನಡೆಸಲು ಈಗ ಉತ್ತಮ ಅವಕಾಶ. ಆದ್ದರಿಂದ ಇದು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ಹೀಗಾಗಿ ನಿವೃತ್ತಿ ನಿರ್ಧಾರ ತೆಗೆದುಕೊಂಡಿರುವುದಾಗಿ ಸ್ಟೀವನ್ ಪೀಟರ್ ಡೆವೆರೆಕ್ಸ್ ಸ್ಮಿತ್ (ಸ್ಟೀವ್ ಸ್ಮಿತ್) ತಿಳಿಸಿದ್ದಾರೆ.ಕ್ರಿಕೆಟ್ ಲೋಕದಲ್ಲಿ ಮಿಂಚಿದ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ನಿವೃತ್ತಿ ಘೋಷಣೆಯಿಂದಾಗಿ, ಕ್ರಿಕೆಟ್ ಅಭಿಮಾನಿಗಳು ತುಸು ಬೇಸರವನ್ನು ವ್ಯಕ್ತಪಡಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!