ಬೋನಿನ ಬಾಗಿಲು ತೆರೆದು ಚಿರತೆ ಕೆರಳಿಸಿದ ಅಧಿಕಾರಿಗಳು !

ಚಿಕ್ಕಮಗಳೂರು: ಬೋನಿನಲ್ಲಿ ಸೆರೆಯಾದ ಚಿರತೆಯನ್ನು ಹತ್ತಿರದಿಂದ ನೋಡಲು ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಬಾಗಿಲನ್ನು ತೆಗೆದು ಅದನ್ನು ಕೆರಳಿಸಿದ ಘಟನೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಯ ಈ ನಡೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ನಾರಾಯಣಪುರ ಗ್ರಾಮದಲ್ಲಿ ಹಲವು ದಿನಗಳಿಂದ ಚಿರತೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಭಯ ಹುಟ್ಟಿಸಿತ್ತು. ಜನ ಹೊಲ, ಹದ್ದೆ-ತೋಟಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದರು. ಮಕ್ಕಳು ಕೂಡ ಶಾಲೆಗೆ ಹೋಗಲು ಭಯಪಡುತ್ತಿದ್ದರು. ಹಾಗಾಗಿ ಅರಣ್ಯ ಇಲಾಖೆಯವರು ಗ್ರಾಮದ ಶಿವಯ್ಯ ಎಂಬವರ ಮನೆ ಬಳಿ ಬೋನನ್ನು ಇಟ್ಟಿದ್ದರು. ಶುಕ್ರವಾರ (ಆ.15) ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಚಿರತೆ ಬೋನಿಗೆ ಬಿದ್ದಿತ್ತು.

ಇಂದು (ಆ.16) ಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಯಾಗಿದ್ದ ಬೋನಿನ ಬಾಗಿಲನ್ನ ಅರ್ಧ ತೆಗೆದು ಅದನ್ನು ಕೆರಳಿಸಿದ್ದಾರೆ. ಚಿರತೆ ಭಯವಾಗಿ ದಾಳಿಗೆ ಯತ್ನಿಸಿದಾಗ ತಕ್ಷಣ ಬಾಗಿಲು ಹಾಕಿದ್ದಾರೆ. ಅಧಿಕಾರಿಗಳ ಈ ವರ್ತನೆಯ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಅಪಾಯಕಾರಿ ಪ್ರಾಣಿಯ ಜೊತೆ ಈ ರೀತಿ ವರ್ತಿಸುವುದು ಸರಿಯಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!