ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ
ಲೋಕಸಭೆಯ ಸ್ಪೀಕರ್ ಆಗಿ ಎನ್ಡಿಎ ಅಭ್ಯರ್ಥಿ ಒಂ ಬಿರ್ಲಾ ಆಯ್ಕೆಯಾಗಿದ್ದಾರೆ. ಧ್ವನಿ ಮತದ ಮೂಲಕ ಹೊಸ ಸ್ವೀಕರ್ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಓಮ್ ಬಿರ್ಲಾ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಕೆ. ಸುರೇಶ್ ಸ್ಪರ್ಧಿಸಿದ್ದರು.
ನೂತನ ಸ್ಪೀಕರ್ ಆಗಿ ಆಯ್ಕೆಯಾದ ಒಮ್ ಬಿರ್ಲಾಗೆ ಪ್ರಧಾನಿ ಮೋದಿ ಸೇರಿದಂತೆ ಎನ್ಡಿಎ ಒಕ್ಕೂಟ ನಾಯಕರು ಶುಭ ಕೋರಿದ್ದಾರೆ. ಪ್ರಧಾನಿ ಮೋದಿ 2ನೇ ಅವಧಿಯಲ್ಲಿ ಲೋಕಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ ಓಂ ಬಿರ್ಲಾ ಇದೀಗ ಸತತ 2ನೇ ಬಾರಿಗೆ ಲೋಕಸಭಾ ಸ್ವೀಕರ್ ಆಗಿ ಆಯ್ಕೆಯಾಗಿದ್ದಾರೆ.





