ಉದ್ಯೋಗ ಮೇಳಗಳ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ- ಸಿಎಂ ಸಿದ್ದರಾಮಯ್ಯ.

ಕಲಬುರ್ಗಿ : ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.

ಜಾತಿ ಸಾಮಾಜಿಕ ಸಮೀಕ್ಷೆ : ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ
ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು. ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ತಿಳಿಸಿದರು.

ದಾವಣಗೆರೆ ಮಹಿಳೆಗೆ ಥಳಿತ ಪ್ರಕರಣ: ಕಾನೂನು ಉಲ್ಲಂಘಿಸಿದರೆ ಬಲಿ ಹಾಕುತ್ತೇವೆ
ದಾವಣಗೆರೆಯಲ್ಲಿ ಅನೈತಿಕ ಸಂಬಂಧ ಆರೋಪಿಸಿ ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಯಾರೇ ತಪ್ಪು ಮಾಡಿದರೂ ಕೂಡ, ಕಾನೂನು ಉಲ್ಲಂಘಿಸಿದರೆ ಯಾರು ಎಷ್ಟೇ ಪ್ರಬಲವಾಗಿದ್ದರೂ, ಬಲಿ ಹಾಕುತ್ತೇವೆ ಎಂದು ಎಚ್ಚರಿಸಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಬಿಜೆಪಿಯದ್ದು ದ್ವೇಷದ ರಾಜಕಾರಣ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಚಾರ್ಜ್ ಶೀಟ್ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ರಾಜಕೀಯ ಉದ್ದೇಶದಿಂದ ಇದನ್ನು ಮಾಡುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿನ್ನೆ ಮೊನ್ನೆ ಪ್ರಾರಂಭವಾಗಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಮುಟ್ಟುಗೋಲು ಹಾಕುವುದು, ಚಾರ್ಚ್ ಶೀಟ್ ಹಾಕುವುದು ರಾಜಕೀಯ ದ್ವೇಷದಿಂದ ಮಾಡುತ್ತಿದ್ದಾರೆ ಎಂದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!