ಡ್ರೋನ್ಗಳನ್ನು ಹೊಡೆದುರುಳಿಸಲಾಗಿದೆ ಎಂದ ಪಾಕ್ ಸೇನೆ: ಭಾರತ ಹೇಳಿದ್ದೇನು?

ಲಾಹೋರ್ : ಪಾಕಿಸ್ತಾನದ ವಾಯುಪ್ರದೇಶ ಉಲ್ಲಂಘಿಸಿದ ಭಾರತದ 12 ಡ್ರೋನ್ಗಳನ್ನು ಪಾಕಿಸ್ತಾನ ಹೊಡೆದುರುಳಿಸಿದೆ ಎಂದು ಪಾಕಿಸ್ತಾನ ಸೇನೆ ಗುರುವಾರ ತಿಳಿಸಿರುವುದಾಗಿ ‘ರಾಯಿಟರ್ಸ್’ ಸುದ್ದಿ ಸಂಸ್ಥೆ ವರದಿ ಮಾಡಿದೆ. ಭಾರತೀಯ ಸೇನೆಯ ಆಪರೇಷನ್ ಸಿಂದೂರ್ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ ಹೆಚ್ಚಿದ್ದು ಕಾಶ್ಮೀರ ಗಡಿಯಲ್ಲಿ ಸುಮಾರು 15 ನಾಗರಿಕರನ್ನು ಪಾಕಿಸ್ತಾನ ಸೇನೆ ಗುಂಡಿನ ದಾಳಿ ಮೂಲಕ ಹತ್ಯೆ ಮಾಡಿದೆ. ಇದರ ಬೆನ್ನಲ್ಲೇ, ಗುರುವಾರ ಬೆಳಗ್ಗೆ ಲಾಹೋರ್ನಲ್ಲಿ ಸ್ಫೋಟ ಸಂಭವಿಸಿತ್ತು. ಅದಾದ ನಂತರ ಕರಾಚಿಯಲ್ಲೂ ಸ್ಫೋಟ ಸಂಭವಿಸಿದೆ ಎಂದು ಕೆಲವು ಮೂಲಗಳು ತಿಳಿಸಿವೆ.


ಭಾರತವು ಇಸ್ರೇಲಿ ಹರೋಪ್ ಡ್ರೋನ್ಗಳನ್ನು ಕರಾಚಿ ಮತ್ತು ಲಾಹೋರ್ನ ಸೇರಿದಂತೆ ಹಲವು ಸ್ಥಳಗಳಿಗೆ ಕಳುಹಿಸಿದೆ. ಅವುಗಳನ್ನು ಹೊಡೆದುರುಳಿಸಿದ್ದೇವೆ. ಅವುಗಳ ಅವಶೇಷಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪಾಕಿಸ್ತಾನದ ಮಿಲಿಟರಿ ವಕ್ತಾರ ಅಹ್ಮದ್ ಷರೀಫ್ ಚೌಧರಿ ತಿಳಿಸಿರುವುದಾಗಿ ‘ರಾಯಿಟರ್ಸ್’ ವರದಿ ತಿಳಿಸಿದೆ.

ಭಾರತ ಹೇಳಿದ್ಧೇನು?
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆಸಿರುವ ಸಿಂದೂರ್ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಹಾಗೆಂದು, ನಮ್ಮ ಮೇಲೆ ದಾಳಿ ನಡೆಸಿದರೆ ಸುಮ್ಮನಿರುವ ಮಾತೇ ಇಲ್ಲ ಎಂದು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸರ್ವಪಕ್ಷ ಸಭೆಯಲ್ಲಿ ಹೇಳಿದ್ದಾರೆ. ಆಪರೇಷನ್ ಸಿಂದೂರ್ನಲ್ಲಿ ಪಾಕಿಸ್ತಾನದಲ್ಲಿ ಆಶ್ರಯ ಪಡೆದಿರುವ 100 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಲಾಹೋರ್, ಕರಾಚಿಯಲ್ಲಿ ಸ್ಫೋಟ
ಗುರವಾರ ಬೆಳಗ್ಗೆ ಲಾಹೋರ್ನಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈಗ ಪಾಕಿಸ್ತಾನದ ಆರ್ಥಿಕ ರಾಜಧಾನಿ ಎಂದು ಪರಿಗಣಿಸಲಾಗಿರುವ ಕರಾಚಿಯಲ್ಲಿ ಕೂಡ ಸ್ಫೋಟ ಸಂಭವಿಸಿದ ಬಗ್ಗೆ ವರದಿಯಾಗಿವೆ. ಕರಾಚಿಯಲ್ಲಿ ಸಂಭವಿಸಿದ ಸ್ಫೋಟವು ಪಾಕಿಸ್ತಾನದಾದ್ಯಂತ ಭೀತಿಯನ್ನು ಸೃಷ್ಟಿಸಿದೆ. ಸ್ಫೋಟದ ನಂತರ ಇಡೀ ಪ್ರದೇಶವನ್ನು ಸೀಲ್ ಮಾಡಲಾಗಿದೆ ಎಂದು ವರದಿಯಾಗಿದೆ.

ಪಾಕಿಸ್ತಾನಿ ಮಾಧ್ಯಮಗಳ ಪ್ರಕಾರ, ಕರಾಚಿಯಲ್ಲಿ ಡ್ರೋನ್ ಸ್ಫೋಟ ಸಂಭವಿಸಿದ್ದು, ಆ ನಂತರ ಇಡೀ ಪ್ರದೇಶದಲ್ಲಿ ಭೀತಿಯ ವಾತಾವರಣವಿದೆ. ಸೇನೆಯು ಆ ಪ್ರದೇಶವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಪಾಕಿಸ್ತಾನದ ಎಲ್ಲಾ ಪರಮಾಣು ಬಾಂಬ್ಗಳು ಕರಾಚಿಯಲ್ಲಿ ಸಂಗ್ರಹಿಸಲ್ಪಟ್ಟಿವೆ ಎಂಬುದು ಗಮನಾರ್ಹ.ಕರಾಚಿಯಲ್ಲಿ ಡ್ರೋನ್ ಸ್ಫೋಟ ಸಂಭವಿಸಿರುವುದು ಪಾಕಿಸ್ತಾನದ ಭದ್ರತಾ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕರಾಚಿ ಸ್ಫೋಟವನ್ನು ಭದ್ರತಾ ವ್ಯವಸ್ಥೆಯ ಪ್ರಮುಖ ಉಲ್ಲಂಘನೆ ಎಂದು ಬಣ್ಣಿಸಲಾಗುತ್ತಿದೆ. ಲಾಹೋರ್ನ ನೌಕಾ ನೆಲೆ ಮತ್ತು ಕರಾಚಿಯ ಸೇನಾ ನೆಲೆಯ ಬಳಿ ಸ್ಫೋಟಗಳು ಸಂಭವಿಸಿವೆ ಎಂದು ವರದಿಗಳು ತಿಳಿಸಿವೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!