ಪಾಕ್‌ ಆಟಗಾರನಿಗೆ ಬಿತ್ತು ದಂಡ – ಮಹಿಳೆ ಜೊತೆ ಅಸಭ್ಯ ವರ್ತನೆ

ಕೊಲಂಬೋ: ಟಿ20 ವಿಶ್ವಕಪ್‌ ಟೂರ್ನಿಯಾಡಲು ಶ್ರೀಲಂಕಾಗೆ ಬಂದಿದ್ದ ಪಾಕಿಸ್ತಾನದಆಟಗಾರನೊಬ್ಬ ಕ್ಯಾಂಡಿಯ ಹೋಟೆಲಿನ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆತಿಥೇಯ ಶ್ರೀಲಂಕಾ ವಿರುದ್ಧ ಪಾಕಿಸ್ತಾನದ ಕೊನೆಯ ಸೂಪರ್ 8 ಪಂದ್ಯಕ್ಕೂ ಮುನ್ನ ಈ ಘಟನೆ ನಡೆದಿದೆ. ಮಹಿಳಾ ಸಿಬ್ಬಂದಿ ಕೂಗುತ್ತಾ ಸಹಾಯಕ್ಕಾಗಿ ಕರೆ ಮಾಡಿದಾಗ ಹೋಟೆಲ್ ಸಿಬ್ಬಂದಿ ಆಕೆಯ ರಕ್ಷಣೆಗೆ ಬಂದು ಪಾಕಿಸ್ತಾನ ತಂಡದ ವ್ಯವಸ್ಥಾಪಕ ನವೈದ್ ಚೀಮಾ ಅವರಿಗೆ ವಿಷಯ ತಿಳಿಸಿದ್ದಾರೆ.

ಗೋಲ್ಡನ್ ಕ್ರೌನ್ ಹೋಟೆಲ್‌ನ ಆಡಳಿತ ಮಂಡಳಿ ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿ ಆತನ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿತು. ಆಟಗಾರನ ಪರವಾಗಿ ನವೈದ್ ಚೀಮಾ ಕ್ಷಮೆಯಾಚಿಸಿದರು. ಬಳಿಕ ಅನುಚಿತ ವರ್ತನೆ ತೋರಿದ ಆಟಗಾರನಿಗೆ ದಂಡ ವಿಧಿಸಲಾಗಿದೆ ಎಂದು ವರದಿಯಾಗಿದೆ.

 

ಶ್ರೀಲಂಕಾ ವಿರುದ್ಧ 5 ರನ್‌ಗಳಿಂದ ಪಂದ್ಯ ಗೆದ್ದಿದ್ದದ್ದರೂ ನೆಟ್‌ ರನ್‌ ರೇಟ್‌ ಕಡಿಮೆ ಇದ್ದ ಕಾರಣ ಪಾಕ್‌ ತಂಡ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ವಿಫಲವಾಯಿತು. ತಂಡ ಭಾನುವಾರ ಮತ್ತು ಸೋಮವಾರ ಪಾಕಿಸ್ತಾನಕ್ಕೆ ತೆರಳಿತ್ತು.

 

ಈ ಆಟಗಾರ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಶಿಸ್ತು ಸಮಿತಿಯ ಮುಂದೆ ಹಾಜರಾಗುವ ಸಾಧ್ಯತೆಯಿದೆ ಮತ್ತು ಅವರಿಗೆ ಹೆಚ್ಚಿನ ಶಿಕ್ಷೆ ವಿಧಿಸುವ ಸಾಧ್ಯತೆಯಿದೆ.

ಪಾಕಿಸ್ತಾನಿ ಆಟಗಾರರು ಪ್ರವಾಸದ ಸಮಯದಲ್ಲಿ ಅಸಭ್ಯ ವರ್ತನೆ ತೋರುವುದು ಹೊಸದೆನಲ್ಲ. ಇಂಗ್ಲೆಂಡ್ ಪ್ರವಾಸದಲ್ಲಿ ಹುಡುಗಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪಾಕಿಸ್ತಾನ ಶಾಹೀನ್ಸ್ ತಂಡದ ಯುವ ಬ್ಯಾಟರ್ ಹೈದರ್ ಅಲಿಯನ್ನು ಕಳೆದ ವರ್ಷ ಮ್ಯಾಂಚೆಸ್ಟರ್ ಪೊಲೀಸರು ಬಂಧಿಸಲಾಗಿತ್ತು. ಹೈದರ್‌ನನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು. ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಬಿಡುಗಡೆ ಮಾಡಲಾಗಿತ್ತು.

ಕೆಲವು ವರ್ಷಗಳ ಹಿಂದೆ ಮಲೇಷ್ಯಾ ಪ್ರವಾಸದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಪಾಕಿಸ್ತಾನ ತಂಡದ ಮಸಾಜ್ ಪಟು ಮಲಾಂಗ್ ಅಲಿ ಅವರ ಮೇಲೂ ದೂರು ದಾಖಲಾಗಿ ದಂಡ ವಿಧಿಸಲಾಗಿತ್ತು.

 

 

Related Posts

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ಖ್ಯಾತ ದಳಪತಿ ವಿಜಯ್ ಮುಚ್ಚುಮರೆ ಇಲ್ಲದೇ ನಟಿ ತ್ರಿಷಾ ಕೃಷ್ಣನ್ ಜೊತೆ ತಿರುಗಾಡುತ್ತಿದ್ದಾರೆ. ಅವರ ಈ ವರ್ತನೆಯಿಂದ ಅಭಿಮಾನಿಗಳಿಗೆ ಮುಜುಗರ ಆಗಿದೆ. ಆದರೆ ಕೆಲವು ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ತ್ರಿಷಾ ಜೊತೆಗಿನ ಒಟನಾಟದಿಂದ ತೊಂದರೆ ಆಗುವ…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!