ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17 ಮಂದಿ ವಿಚಾರಣಾಧೀನ ಖೈದಿಗಳಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು 24ನೇ ಎಸಿಎಂಎಂ ನ್ಯಾಯಾಲಯ ಒಪ್ಪಿಗೆ ನೀಡಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿರುವ ಫೋಟೊ ವೈರಲ್ ಆಗಿತ್ತು. ಇದರ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿ ಸಾಕಷ್ಟು ಟೀಕೆಗಳು ವ್ಯಕ್ತವಾದವು. ತಕ್ಷಣ ಎಚ್ಚೆತ್ತ ಸರ್ಕಾರ 9 ಮಂದಿ ಜೈಲು ಸಿಬ್ಬಂದಿಯನ್ನ ಅಮಾನತುಗೊಳಿಸಿತ್ತು.ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ಕರ್ನಾಟಕ ಗೃಹ ಇಲಾಖೆ ಹಾಗೂ ಪೊಲೀಸರು ನ್ಯಾಯಾಲಯದ ಆದೇಶ ಪಡೆದು, ಇಂದು ರಾಜ್ಯದ ವಿವಿಧ ಜೈಲುಗಳಿಗೆ ಆರೋಪಿಗಳ್ನು ಸ್ಥಳಾಂತರ ಮಾಡಿದ್ದಾರೆ.




