ಡ್ರಗ್ ವಿಚಾರದಲ್ಲಿ ಪೋಷಕರೇ ಮಕ್ಕಳ ಮೇಲೆ ಪೊಲೀಸರಿಗೆ ದೂರು!

ಮಂಗಳೂರು : ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರೇ ಪೊಲೀಸರಿಗೆ ದೂರು ನೀಡಿದ ಅಚ್ಚರಿಯ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಆದರೆ, ಇದರ ಪರಿಣಾಮ ಮಾತ್ರ ಒಳಿತೇ ಆಗಿದೆ. ನೂರಾರು ವಿದ್ಯಾರ್ಥಿಗಳಿಗೆ, ಮಕ್ಕಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲವೇ ಪೊಲೀಸ್ ಬಲೆಗೆ ಬಿದ್ದಿದೆ.

ಪೋಷಕರ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಮಂಗಳೂರು ಸೆನ್ ಕ್ರೈಮ್ ಠಾಣೆ ಪೊಲೀಸರು ಡ್ರಗ್ಸ್ ಜಾಲವೊಂದನ್ನು ಬಯಲಿಗಳೆದಿದ್ದಾರೆ.
ಪೋಷಕರ ದೂರು ಆಧರಿಸಿ ಮಂಗಳೂರಿನ ಪಡುಶೆಡ್ಡೆ ಗ್ರಾಮದ ಹಾಲಾಡಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, 200ಕ್ಕೂ ಹೆಚ್ಚು ವಿದ್ಯಾರ್ಥಿ, ಉದ್ಯೋಗಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಗಳೂರಿನ ತುಷಾರ್ (21), ಧನ್ವಿ ಶೆಟ್ಟಿ (20), ಸಾಗರ್ ಕರ್ಕೇರಾ (19), ವಿಕಾಸ್ ಥಾಪ (23), ವಿಘ್ನೇಶ್ ಕಾಮತ್ (24) ಬಂಧಿತರು. ಆರೋಪಿಗಳು ಮಾದಕ ವಸ್ತುಗಳನ್ನು ಮಾರಾಟ ಮಾಡಲು ತಯಾರಿ ನಡೆಸುತ್ತಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಒಟ್ಟು 5.20 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ತುಷಾರ್ (21)

ಧನ್ವಿ ಶೆಟ್ಟಿ (20)

ಸಾಗರ್ ಕರ್ಕೇರಾ (19)

ವಿಕಾಸ್ ಥಾಪ (23)

ವಿಘ್ನೇಶ್ ಕಾಮತ್ (24)

ಆರೋಪಿಗಳು ಗಾಂಜಾವನ್ನು ಚಿಕ್ಕ ಚಿಕ್ಕ ಪ್ಯಾಕೆಟ್ ಮಾಡಿ ಮಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಪ್ಯಾಕೆಟ್ಗೆ 1000 ರೂ.ನಂತೆ ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳಿಗೆ ಗಾಂಜಾ ಪೂರೈಕೆಯಾಗಿದ್ದು ಎಲ್ಲಿಂದ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಎರಡು ದಿನಗಳ ಹಿಂದೆ ಇಬ್ಬರು ಪೋಷಕರು ಬಂದು ತಮ್ಮ ಮಕ್ಕಳು ಡ್ರಗ್ಸ್ ಅಡಿಕ್ಟ್ ಆಗಿರುವ ಬಗ್ಗೆ ಹೇಳಿಕೊಂಡಿದ್ದು, ದೂರು ನೀಡಿದ್ದರು. ದೂರಿನ ಬಗ್ಗೆ ಕೂಲಂಕಷ ತನಿಖೆಗೆ ತಂಡ ರಚಿಸಿದ್ದೆವು. ಅದರಂತೆ, ಕಾರ್ಯಾಚರಣೆ ನಡೆಸಿ ಡ್ರಗ್ಸ್ ಪೂರೈಕೆ ಜಾಲದ ಐವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.ಸದ್ಯ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಇನ್ನು ಮುಂದೆ ಅವರು ಡ್ರಗ್ಸ್ ಪೂರೈಕೆ ಮಾಡಲು ಆಗದು. ಒಬ್ಬರು ಪೋಷಕರು ಬಂದು ದೂರು ಕೊಟ್ಟಿದದರಿಂದ 200 ಜನರಿಗೆ ಡ್ರಗ್ಸ್ ಪೂರೈಕೆಯಾಗುತ್ತಿದ್ದುದನ್ನು ತಡೆಯವುದು ಸಾಧ್ಯವಾಗಿದೆ. ಅದೇ ರೀತಿ ಹತ್ತು ಜನ ಬಂದು ದೂರು ಕೊಟ್ರೆ 2 ಸಾವಿರ ಜನರಿಗೆ ಗಾಂಜಾ ಪೂರೈಕೆ ಮಾಡದಂತೆ ಪೊಲೀಸರು ಕ್ರಮ ಕೈಗೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಸಾರ್ವಜನಿಕರು ಖಚಿತ ಮಾಹಿತಿ ಕೊಟ್ಟರೆ ಮಂಗಳೂರಿನಲ್ಲಿ ಎಲ್ಲಿಯೂ ಸಹ ಡ್ರಗ್ಸ್ ಸಿಗದಂತೆ ಮಾಡಬಹುದು. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಯಾರೇ ಡ್ರಗ್ಸ್ ಅಡಿಕ್ಟ್ ಆಗಿದದರ ಅವರನ್ನು ಸಂತ್ರಸ್ತರು ಎಂದು ಪರಿಗಣಿಸುತ್ತೇವೆ. ಅವರಿಗೆ ಪೂರೈಕೆ ಮಾಡುತ್ತಿದ್ದವರನ್ನು ಬಂಧಿಸಿ ಜೈಲಿಗೆ ಕಳುಹಿಸುತ್ತೇವೆ ಎಂದು ಪೊಲೀಸ್ ಆಯುಕ್ತರು ಭರವಸೆ ನೀಡಿದ್ದಾರೆ.

Related Posts

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ