ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 94 ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಗೆ ಪೋಷಕರು ವಿವಾಹ ಮಾಡಲು ಯತ್ನಿಸಿದ ವಿದ್ಯಮಾನ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಹಗರಿಬೊಮ್ಮನಹಳ್ಳಿ ತಹಶೀಲ್ದಾರ್, ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿದ್ದಾರೆ.ಉನ್ನತ ಶಿಕ್ಷಣದ ಕನಸು ಕಂಡಿದ್ದಳು. ಆದರೆ, ಪೋಷಕರು ಮದುವೆ ಮಾಡಿಸಲು ಮುಂದಾಗಿದ್ದರು.
ಹುಡುಗನೊಬ್ಬನನ್ನು ನೋಡಿ ಒಂದು ತಿಂಗಳ ಒಳಗೆ ಮದುವೆ ಮಾಡಿಸಲು ಪೊಲೀಸರು ಮುಂದಾಗಿದ್ದರು. ಆದರೆ, ದಿಟ್ಟತನ ತೋರಿದ ಬಾಲಕಿ ‘ಮಕ್ಕಳ ಸಹಾಯವಾಣಿ’ಗೆ ಕರೆ ಮಾಡಿ ಮಾಹಿತಿ ನೀಡಿದ್ದಾಳೆ. ತಕ್ಷಣವೇ ಎಚ್ಚೆತ್ತ ಅಧಿಕಾರಿಗಳು ಆಕೆಯ ಮನೆಗೆ ತೆರಳಿ ಪೋಷಕರಿಗೆ ಬುದ್ಧಿವಾದ ಹೇಳಿದ್ದಾರೆ. ಬಾಲಕಿಯನ್ನು ರಕ್ಷಿಸಿ ಆಕೆಗೆ ಕಾಲೇಜೊಂದರಲ್ಲಿ ವಸತಿನಿಯಲಯದ ವ್ಯವಸ್ಥೆ ಮಾಡಿದ್ದಾರೆ.
ಬಾಲ್ಯ ವಿವಾಹ ಪ್ರಕರಣಗಳ ಜಿಲ್ಲಾವಾರು ವಿಂಗಡಣೆಯಲ್ಲಿ ಶಿವಮೊಗ್ಗ, ಬೆಳಗಾವಿ ಮತ್ತು ಚಿತ್ರದುರ್ಗ ಮೊದಲ ಮೂರು ಸ್ಥಾನಗಳಲ್ಲಿವೆ. ಮೈಸೂರು ಮತ್ತು ಮಂಡ್ಯ ಕ್ರಮವಾಗಿ ಐದು ಮತ್ತು ಆರನೇ ಸ್ಥಾನಗಳಲ್ಲಿವೆ. ಈ ವರ್ಷ, ಏಪ್ರಿಲ್ ಮತ್ತು ಜೂನ್ 2025 ರ ನಡುವೆ, ರಾಜ್ಯದಲ್ಲಿ 211 ಪ್ರಕರಣಗಳು ವರದಿಯಾಗಿವೆ.
ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಇಲಾಖೆ ಕೈಗೊಂಡಿರುವ ಕ್ರಮಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವೆ ಹೆಬ್ಬಾಳ್ಕರ್, ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಿರಿಯ ಪೊಲೀಸ್ ಮತ್ತು ಜಿಲ್ಲಾ ಆಡಳಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.





