ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ : ಸಿದ್ದರಾಮಯ್ಯ

ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ. ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕಾನೂನು ತಜ್ಞರು ಮತ್ತು ಸಮುದಾಯದ ನಾಯಕರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ.

ಒಳಮೀಸಲಾತಿಯನ್ನು ದಲಿತ ಸಮುದಾಯ ಒಮ್ಮತದಿಂದ ಒಪ್ಪಿಕೊಂಡು ಅನುಷ್ಠಾನಕ್ಕೆ ಬೆಂಬಲ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಸಚಿವರಾದ ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್ ಮತ್ತು ಮಾಜಿ ಸಚಿವ ಹೆಚ್.ಆಂಜನೇಯ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಲ್. ಹನುಮಂತಯ್ಯ ಮತ್ತು ದಲಿತ ಶಾಸಕರು ಹಾಗೂ ಮುಖಂಡರ ನಿಯೋಗ ಇಂದು ನನ್ನನ್ನು ಭೇಟಿಯಾಗಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ ನಡೆಸಿದರು. ಒಳಮೀಸಲಾತಿ ಜಾರಿ ವಿಚಾರದಲ್ಲಿ ನನ್ನ ಬದ್ಧತೆಯನ್ನು ಅವರಿಗೆ ತಿಳಿಸಿದೆ.

ನಾನು, ನಮ್ಮ ಪಕ್ಷ ಮತ್ತು ನಮ್ಮ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಪರವಾದ ಖಚಿತ ಮತ್ತು ದೃಢ ನಿಲುವು ಇದೆ. ಇದರಲ್ಲಿ ಗೊಂದಲ ಇಲ್ಲವೇ ಇಲ್ಲ. ಮೀಸಲಾತಿಯ ಸೌಲಭ್ಯದ ನ್ಯಾಯಯುತ ಹಂಚಿಕೆಗೆ ಒಳಮೀಸಲಾತಿ ಅಗತ್ಯ ಎನ್ನುವುದು ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಅರಿವಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಕೂಡಾ ಇದೇ ಅಭಿಪ್ರಾಯವನ್ನು ಹೊಂದಿದೆ. ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಕೆನೆಪದರದ ವಿಚಾರ ಪ್ರಸ್ತಾವವಾಗಿರುವುದು ಕೆಲವರಲ್ಲಿ ಗೊಂದಲ ಉಂಟು ಮಾಡಿದೆ. ನ್ಯಾಯಾಲಯದ ತೀರ್ಪಿನ ವಿಶ್ಲೇಷಣೆಗೆ ನಾನು ಹೋಗುವುದಿಲ್ಲ. ನಾನು ಅರ್ಥಮಾಡಿಕೊಂಡಂತೆ ಒಳ ಮೀಸಲಾತಿ ಜಾರಿಗೊಳಿಸಲು ಕೆನೆಪದರದ ವಿಚಾರ ಅಡ್ಡಿಯಾಗಲಾರದು. ಕೆನೆಪದರದ ಬಗ್ಗೆ ಇಡೀ ದಲಿತ ಸಮುದಾಯದ ನಿಲುವೇ ನನ್ನ ನಿಲುವೂ ಆಗಿದೆ.

ಭಾರತೀಯ ಜನತಾ ಪಕ್ಷದ ಕೆಲವು ನಾಯಕರು ಅನಗತ್ಯವಾಗಿ ಊಹಾಪೋಹಗಳ ಮೂಲಕ ಒಳಮೀಸಲಾತಿ ವಿಷಯವನ್ನು ಮುಂದಿಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ದಲಿತರನ್ನು ಎತ್ತಿಕಟ್ಟುವ ಕುಟಿಲ ಪ್ರಯತ್ನ ನಡೆಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ವಿರೋಧಿಗಳಾದ ಈ ಬಿಜೆಪಿ ನಾಯಕರ ಈ ಕುಟಿಲತನವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ದಲಿತ ಸಮುದಾಯಕ್ಕೆ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ