ಮೈಸೂರು : ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ಗೆ ೨೦೨೬-೨೯ರ ಅವಧಿಯ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಹುದ್ದೆಗಳಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರಿನ ಏರ್‌ಲೈನ್ಸ್ ಹೋಟೆಲ್ ಸಭಾಂಗಣದಲ್ಲಿ ಜ.೨೨ರಂದು ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ಲಾಗೈಡ್ ಮಾಸ ಪತ್ರಿಕೆಯ ಸಂಪಾದಕರಾದ ಹೆಚ್.ಎನ್.ವೆಂಕಟೇಶ್ ಅವರು ಕಾರ್ಯನಿರ್ವಹಿಸಿದ್ದು, ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ ಎಲ್ಲಾ ಸ್ಥಾಮನಗಳಿಗೆ ಸಲ್ಲಿಸಿದ್ದ ನಾಮಪತ್ರಗಳನ್ನು ಪರಿಶೀಲಿಸಿ, ಎಲ್ಲಾ ಸ್ಥಾನಗಳಿಗೂ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಿಸಿದರು.

ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ಪ್ರಗತಿಗೋಪಾಲಕೃಷ್ಣ, ಉಪಾಧ್ಯಕ್ಷರಾಗಿ ಕೆ.ಹೆಚ್.ಚಂದ್ರು, ಪ್ರದಾನ ಕಾರ್ಯದರ್ಶಿಯಾಗಿ ಲಕ್ಷ್ಮೀನಾರಾಯಣ್ ಯಾದವ್ ಹಾಗೂ ಖಜಾಂಚಿಯಾಗಿ ಉದಯಶಂಕರ್ ಅವರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿ, ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಸದಸ್ಯರಾದ ಅನುರಾಗ ಬಸವರಾಜು, ಗವಿಮಠ ರವಿ, ಎಸ್.ಆರ್.ಮಧುಸೂಧನ್, ನಾಗೇಶ್ ಪಾಣಪತ್ತಲೆ, ಎ.ನಂದನ್ ಉಪಸ್ಥಿತರಿದ್ದರು. ಫೋಟೋ ಕ್ಯಾಪ್ಷನ್ ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ನ ನೂತನ ಪಧಾಧಿಕಾರಿಗಳಿಗೆ ಚುನಾವಣಾಧಿಕಾರಿ ಲಾಗೈಡ್ ಮಾಸ ಪತ್ರಿಕೆಯ ಸಂಪಾಕರಾದ ಹೆಚ್.ಎನ್.ವೆಂಕಟೇಶ್ ಪ್ರಮಾಣ ಪತ್ರ ವಿತರಿಸಿದರು.




