ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಜಿಲ್ಲೆಯಲ್ಲಿ 1,666 ಸರಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂದು ಆರೋಪಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ನಗರದ ಪುರಭವನದ ಆವರಣದಲ್ಲಿ ಪ್ರತಿಭಟನಾ ಸಮಾವೇಶ ನಡೆಯಿತು.ಎಐಡಿಎಸ್‌ಒ ರಾಜ್ಯ ಉಪಾಧ್ಯಕ್ಷೆ ಚಂದ್ರಕಲಾ ಮಾತನಾಡಿ, ‘ಈ ಹಿಂದೆ ಬಿಜೆಪಿ ಸರಕಾರ ವಿಲೀನದ ಹೆಸರಿನಲ್ಲಿ 13,800 ಸರಕಾರಿ ಶಾಲೆಗಳನ್ನು ಮುಚ್ಚಲು ಹೊರಟಿತ್ತು. ಪ್ರಸ್ತುತ ಕಾಂಗ್ರೆಸ್ ಸರಕಾರ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿ 40,000 ಸರಕಾರಿ ಶಾಲೆಗಳನ್ನು ಮುಚ್ಚಲು ಮುಂದಾ ಗಿದೆ”
“ರಾಜ್ಯ ಸರಕಾರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕಿನಿಂದ 2500 ಕೋಟಿ ರೂ. ಸಾಲ ಮಾಡಿ ತೆರೆಯು ತ್ತಿದೆ. ಖಾಸಗಿ ಬ್ಯಾಂಕಿನಿಂದ ಸಾಲ ಪಡೆದು ಸರಕಾರಿ ಶಾಲೆಗಳನ್ನು ನಡೆಸು ವಂತಹ ಕೆಟ್ಟ ಪರಿಸ್ಥಿತಿಗೆ ಸರಕಾರ ಬಂದಿ ದೆಯೇ? ನಾವು ಕಟ್ಟುತ್ತಿರುವ ತೆರಿಗೆ ಸಾಲದೇ? ಎಂದು ಪ್ರಶ್ನಿಸಿದರು.
ನಿವೃತ್ತ ಪ್ರಾಧ್ಯಾಪಕ ಪ್ರೊ.ಕಾಳಚನ್ನೇಗೌಡ ಮಾತನಾಡಿ,” ಈಗಾಗಲೇ ರಾಜ್ಯದಲ್ಲಿ 62 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇವೆ. 7,000ಕ್ಕೂ ಹೆಚ್ಚು ಏಕೋಪಾಧ್ಯಾಯ ಶಾಲೆಗಳಿವೆ. 23 ಸಾವಿರಕ್ಕೂ ಹೆಚ್ಚು ಸರಕಾರಿ ಶಾಲೆ ಕಟ್ಟಡಗಳು ದುರಸ್ತಿಯಲ್ಲಿವೆ” ಎಂದು ಆರೋಪಿ ಸಿದರು.ಅಲ್ಲದೇ
ಕರ್ನಾಟಕ ರಾಜ್ಯ ರೈತ ಸಂಘದ ಮರಂಕಯ್ಯ ಮಾತನಾಡಿ, ‘ನಮ್ಮ ಊರಿನಲ್ಲಿ ನಾವು ಓದಬೇಕಾದರೆ ಶಾಲೆಯೇ ಇರಲಿಲ್ಲ. ಹೋರಾಟ ಮಾಡಿದ್ದರಿಂದ ಶಾಲೆ ಪ್ರಾರಂಭವಾಯಿತು. ಇದೀಗ ಈ ಶಾಲೆಯನ್ನೇ ಮುಚ್ಚುತ್ತಿರುವುದು ವ್ಯಕ್ತಪಡಿಸಿದರು. ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು
ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳನ್ನು ಉಳಿಸಲು ಮುಂದಿನ ದಿನಗಳಲ್ಲಿ ಬಲಿಷ್ಠ ಮಟದ ಸಮಿತಿ ರಚನೆ
ಹೋರಾಟ ರೂಪಿಸಲು ಮೈಸೂರು ಜಿಲ್ಲಾ ಮಟ್ಟದ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯನ್ನು ರಚಿಸಲಾಯಿತು. ಸಮಿತಿ ಸಲಹೆಗಾರರಾಗಿ ಕರ್ನಾಟಕ ರಾಜ್ಯ ರೈತ ಸಂಘಟನೆಯ ಹೊಸಕೋಟೆ ಬಸವರಾಜ್, ಸಾಮಾಜಿಕ ಹೋರಾಟಗಾರ ಉಗ್ರ ನರಸಿಂಹೇಗೌಡ, ನಿವೃತ್ತ ಪ್ರಾಧ್ಯಾಪಕ ಪ್ರೊ .ಕಾಳಚನ್ನೆಗೌಡ, ಲತಾ ಮೈಸೂರು, ರೈತ ಮುಖಂಡರಾದ ಪಿ.ಮರಂಕಯ್ಯ, ವಿದ್ಯಾಶಂಕರ್ ಹಾಗೂ ಪ್ರೇಮ್ ರಾಜ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಇಮ್ಮಾವು ಹುಂಡಿಯ ರಾಜಣ್ಣ, ಕಾರ್ಯದರ್ಶಿಯಾಗಿ ಎಐಡಿಎಸ್‌ಒ ಜಿಲ್ಲಾಧ್ಯಕ್ಷೆ ಚಂದ್ರಕಲಾ, ಉಪಾಧ್ಯಕ್ಷರಾಗಿ ಚೋರನಹಳ್ಳಿ ಶಿವಣ್ಣ, ಹೆಜ್ಜಿಗೆ ಪ್ರಕಾಶ್ ಸೇರಿದಂತೆ 16 ಮಂದಿ ಹಾಗೂ ನಾನಾ ಹಳ್ಳಿಗಳಿಂದ 60ಕ್ಕೂ ಹೆಚ್ಚು ಮಂದಿಯನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.




