
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ದೇವಾಲಯಗಳು ಕೇವಲ ಧಾರ್ಮಿಕ ಕೇಂದ್ರಗಳಲ್ಲ, ಅವುಗಳು ಪರಿಸರ ಸ್ವಚ್ಛತೆಯ ಸಂಕೇತವೂ ಆಗಬೇಕು. ಈ ಅಭಿಯಾನದ ಮೂಲಕ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪರಿಸರ ಸ್ನೇಹಿ ವಾತಾವರಣ ನಿರ್ಮಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು. ಈ ಕ್ರಮವು ಪರಿಸರ ಸಂರಕ್ಷಣೆಗೆ ದೊಡ್ಡ ಮಟ್ಟದಲ್ಲಿ ಸಹಾಯಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ರಾಜ್ಯದ 36,000 ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಬೌಲ್, ಪ್ಲಾಸ್ಟಿಕ್ ತಟ್ಟೆ ಮತ್ತು ಪ್ಲಾಸ್ಟಿಕ್ ಬ್ಯಾಗ್‌ಗಳಂತಹ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಇನ್ಮುಂದೆ ಪ್ರಸಾದವನ್ನು ಪ್ಲಾಸ್ಟಿಕ್ ತಟ್ಟೆ ಅಥವಾ ಲೋಟದಲ್ಲಿ ನೀಡುವಂತಿಲ್ಲ. ದೇವಾಲಯಗಳು ಪರ್ಯಾಯ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕಿದೆ.
‘ಪರಿಸರ ಉಳಿಸಿ, ಪರಿಸರ ಬೆಳೆಸಿ’ ಎಂಬ ಧೈಯ ವಾಕ್ಯದೊಂದಿಗೆ ಈ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಲ್ಲಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಪ್ರಯತ್ನಿಸಲಾಗುವುದು.
ಒಂದು ವೇಳೆ, ಯಾವುದೇ ದೇವಾಲಯದಲ್ಲಿ ಈ ನಿಯಮವನ್ನು ಉಲ್ಲಂಘಿಸಿ ಪ್ಲಾಸ್ಟಿಕ್ ವಸ್ತುಗಳು ಕಂಡುಬಂದರೆ, ಆಯಾ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು
ಸೂಚನೆ ನೀಡಲಾಗಿದೆ.





