ರಾಜ್ಯದ 36 ಸಾವಿರ ದೇಗುಲಗಳಲ್ಲಿ ಪ್ಲಾಸ್ಟಿಕ್ ಬ್ಯಾನ್ !

ಬೆಂಗಳೂರು, ಆ.17– ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಒಟ್ಟು 36 ಸಾವಿರ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡಲು ಅಭಿಯಾನವನ್ನು ಪ್ರಾರಂಭಿಸಲಾಗಿದೆ. ರಾಜ್ಯದ ಎಲ್ಲ ದೇವಾಲಯ ಇನ್ನು ಮುಂದೆ ಪ್ರಸಾದ ವಿತರಣೆಗೆ ಅಥವಾ ಯಾವುದೇ ಉದ್ದೇಶಕ್ಕಾಗಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವಂತಿಲ್ಲ. ಆ.15 ರಿಂದಲೇ ಪ್ಲಾಸ್ಟಿಕ್ ನಿಷೇಧವನ್ನು ಜಾರಿಗೆ ತರಲಾಗಿದ್ದು, ಆ. 17 ರಂದು ಅಧಿಕೃತವಾಗಿ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ನೇತೃತ್ವದಲ್ಲಿ, ಬಸವನಗುಡಿಯ ದೊಡ್ಡಗಣಪತಿ ದೇವಾ ಲಯದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ರವಿ ಸುಬ್ರಮಣ್ಯ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ದೇವಾಲಯಗಳು ಕೇವಲ ಧಾರ್ಮಿಕ ಕೇಂದ್ರಗಳಲ್ಲ, ಅವುಗಳು ಪರಿಸರ ಸ್ವಚ್ಛತೆಯ ಸಂಕೇತವೂ ಆಗಬೇಕು. ಈ ಅಭಿಯಾನದ ಮೂಲಕ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಪರಿಸರ ಸ್ನೇಹಿ ವಾತಾವರಣ ನಿರ್ಮಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು. ಈ ಕ್ರಮವು ಪರಿಸರ ಸಂರಕ್ಷಣೆಗೆ ದೊಡ್ಡ ಮಟ್ಟದಲ್ಲಿ ಸಹಾಯಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ರಾಜ್ಯದ 36,000 ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಬೌಲ್, ಪ್ಲಾಸ್ಟಿಕ್ ತಟ್ಟೆ ಮತ್ತು ಪ್ಲಾಸ್ಟಿಕ್ ಬ್ಯಾಗ್‌ಗಳಂತಹ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಇನ್ಮುಂದೆ ಪ್ರಸಾದವನ್ನು ಪ್ಲಾಸ್ಟಿಕ್ ತಟ್ಟೆ ಅಥವಾ ಲೋಟದಲ್ಲಿ ನೀಡುವಂತಿಲ್ಲ. ದೇವಾಲಯಗಳು ಪರ್ಯಾಯ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕಿದೆ.

‘ಪರಿಸರ ಉಳಿಸಿ, ಪರಿಸರ ಬೆಳೆಸಿ’ ಎಂಬ ಧೈಯ ವಾಕ್ಯದೊಂದಿಗೆ ಈ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಲ್ಲಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಪ್ರಯತ್ನಿಸಲಾಗುವುದು.

ಒಂದು ವೇಳೆ, ಯಾವುದೇ ದೇವಾಲಯದಲ್ಲಿ ಈ ನಿಯಮವನ್ನು ಉಲ್ಲಂಘಿಸಿ ಪ್ಲಾಸ್ಟಿಕ್ ವಸ್ತುಗಳು ಕಂಡುಬಂದರೆ, ಆಯಾ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು
ಸೂಚನೆ ನೀಡಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!