ಧರ್ಮಸ್ಥಳದ ತಿಮರೋಡಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಿರುವ ಪೊಲೀಸರು

.ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ರ ಕಲಂ 163 ರಡಿ ಪ್ರಾಧಿಕಾರವನ್ನು ಚಲಾಯಿಸಿ ಆ. 21, ಮಧ್ಯಾಹ್ನ 1 ಗಂಟೆಯಿಂದ ಆ. 22 ಮಧ್ಯಾಹ್ನ 1 ಗಂಟೆಯವರೆಗೆ ಬ್ರಹ್ಮಾವರ ಪೊಲೀಸ್ ಠಾಣೆ ಸರಹದ್ದಿನ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಇದೆ.
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಜಿರೆಯಲ್ಲಿ ಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದು ತರಲಾಗಿದೆ. ಠಾಣೆಯ ಸುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

ಸೂಕ್ತ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ಇವರ ವರದಿಯನ್ನು ಆಧರಿಸಿ ಮುಂಜಾಗೃತ ಕ್ರಮವಾಗಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.‌ ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ರ ಕಲಂ 163 ರಡಿ ಮ ಅಧಿಕಾರವನ್ನು ಚಲಾಯಿಸಿ ಆದೇಶಿಸಿದ್ದಾರೆ.

ಧರ್ಮಸ್ಥಳದ ತಿಮರೋಡಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಿರುವ ಪೊಲೀಸರು ಬಿಗುಬಂದೋಬಸ್ತ್‌ನಲ್ಲಿ ಮಧ್ಯಾಹ್ನ 1.20 ಕ್ಕೆ ಪೊಲೀಸರು ಠಾಣೆಗೆ ಕರೆದು ತಂದಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಗೆ ಆಗಮಿಸಿದ ವಕೀಲರ ತಂಡವು ಭದ್ರತಾ ಜಾಮೀನಿನ ಮೇಲೆ ತಿಮರೋಡಿ ಬಿಡುಗಡೆಗೆ ಕ್ರಮಕ್ಕೆ ಸಿದ್ಧತೆ ನಡೆಸಿದೆ. ತಿಮ್ಮರೊಡಿ ಜತೆ ಗಿರೀಶ್ ಮಟ್ಟಣ್ಣನವರ್ ಆಗಮಿಸಿದ್ದು, ಠಾಣೆಗೆ ಆಗಮಿಸುವ ಮುನ್ನವೇ ಮಹೇಶ್ ಶೆಟ್ಟಿ ಪರ ವಕೀಲರು ಠಾಣೆಯಲ್ಲಿದ್ದರು. ತಿಮರೋಡಿಯನ್ನು ಠಾಣೆಯಲ್ಲಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ‌.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!