ಗರ್ಭಿಣಿಯಾದ ಪ್ರೇಯಸಿ, ಮದುವೆ ವಿಚಾರಕ್ಕೆ ತನ್ನ ಪ್ರಿಯಕರನಿಂದಲೇ ಕೊಲೆ

ಆರೋಪಿ ಚೇತನ್ ಬಂಧಿಸಿದಾಗ, ಆತನಿಗೆ ಕ್ಯಾನ್ಸರ್ ಇರೋದು ಬೆಳಕಿಗೆ
ಕೋಟೆ ನಾಡು ಚಿತ್ರದುರ್ಗದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರನ್ನು ಕೊಲೆಗೈದು ಸುಟ್ಟು ಹಾಕಲಾಗಿದೆ. ನಿನ್ನೆ ಸಂಜೆ ವಿದ್ಯಾರ್ಥಿನಿಯ ಶವ ನಗರದ ಹೊರವಲಯದಲ್ಲಿ ಪತ್ತೆಯಾಗಿತ್ತು. ಪ್ರಾರಂಭದಲ್ಲಿ ಶವದ ಗುರುತು ಕೂಡ ಪತ್ತೆಯಾಗಿರಲಿಲ್ಲ. ಬಳಿಕ ಕೊಲೆಯಾದ ವಿದ್ಯಾರ್ಥಿನಿಯನ್ನು ವರ್ಷಿತಾ ಎಂದು ಗುರುತಿಸಲಾಗಿದೆ. ಈ ವರ್ಷಿತಾ ಚಿತ್ರದುರ್ಗ ನಗರದಲ್ಲಿ ದ್ವಿತೀಯ ಬಿಎ ಓದುತ್ತಿದ್ದಳು. ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ವಾಸ ಇದ್ದಳು. ನಿನ್ನೆ ಸಂಜೆ ಹಾಸ್ಟೆಲ್ ವಾರ್ಡನ್​ಗೆ ರಜೆ ಚೀಟಿ ಕೊಟ್ಟು ಊರಿಗೆ ಹೋಗುತ್ತೇನೆಂದು ಹೇಳಿ ಹೊರಟಿದ್ದಳು. ಆದರೇ, ವರ್ಷಿತಾ ತನ್ನ ಊರಿಗೆ ಹೋಗಿಲ್ಲ. ರಾತ್ರಿ 11ರ ವೇಳೆಗೆ ವರ್ಷಿತಾ ಕೊಲೆಯಾಗಿರುವ ವಿಷಯ ಹಾಸ್ಟೆಲ್ ವಾರ್ಡನ್​​​ಗೆ ಗೊತ್ತಾಗಿದೆ.

 

ಪ್ರೀತಿ ವಿಚಾರಕ್ಕೆ ವರ್ಷಿತಾ- ಚೇತನ್ ನಡುವೆ ಗಲಾಟೆ ನಡೆದಿದೆ. ಗಲಾಟೆಯ ವೇಳೆ ಚೇತನ್, ವರ್ಷಿತಾಗೆ ಹೊಡೆದು ಕೊಂದಿದ್ದಾನೆ, ಬಳಿಕ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ್ದಾನೆ. ಚಿತ್ರದುರ್ಗದ ಸಿಪಿಐ ಮುದ್ದುರಾಜ್, ಡಿವೈಎಸ್ಪಿ ದಿನಕರ್ ನೇತೃತ್ವದಲ್ಲಿ ತನಿಖೆಯನ್ನು ನಡೆಸಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.

ಯುವತಿಯನ್ನು ಗರ್ಭಿಣಿಯಾಗಿಸಿ ಮದುವೆ ಆಗಲು ನಿರಾಕರಣೆ

ಚಿತ್ರದುರ್ಗ ವಿದ್ಯಾರ್ಥಿನಿ ಕೊಲೆ ಕೇಸ್​ಗೆ ಸ್ಟಫೋಕ ತಿರುವು ಸಿಕ್ಕಿದೆ. ಪೊಲೀಸರ ಮುಂದೆ ಕೊಲೆ ರಹಸ್ಯ ಆರೋಪಿ ಚೇತನ್ ಬಾಯ್ಬಿಟ್ಟಿದ್ದಾನೆ. ಯುವತಿಯನ್ನ ಗರ್ಭಿಣಿ ಮಾಡಿ ಮೋಸ ಮಾಡಲು ಆರೋಪಿ ಮುಂದಾಗಿದ್ದ. ನಿನ್ನಿಂದ ಗರ್ಭಿಣಿ ಆಗಿದ್ದೇನೆ, ಈಗ ಮದುವೆ ಆಗು ಎಂದು ಯುವತಿ ಪಟ್ಟು ಹಿಡಿದಿದ್ದಳು. ಮದುವೆ ಆಗಲು ಆರೋಪಿ ನಿರಾಕರಿಸಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ನಿನಗೆ ಬೇರೋಬ್ಬನ ಜೊತೆ ಸಂಬಂಧ ಇದೆ ಎಂದು ಆರೋಪಿ ಚೇತನ್, ಹಲ್ಲೆ ಮಾಡಿ, ಕೊಲೆಗೈದಿದ್ದಾನೆ. ಬಳಿಕ ಪೆಟ್ರೋಲ್ ಹಾಕಿ ಶವವನ್ನು ಸುಟ್ಟಿದ್ದಾನೆ.

ಚೇತನ್ ಬಂಧನದ ಬಳಿಕ ಆರೋಪಿಗೆ ಕ್ಯಾನ್ಸರ್ ರೋಗ ಇರೋದು ಬೆಳಕಿಗೆ ಬಂದಿದೆ. ಇದೇ ಪ್ರಕರಣದಲ್ಲಿ ಒಂದೇ ಸಿಮ್ ಕಾರ್ಡ್​​ಗೆ 16 ಮೊಬೈಲ್ ಬಳಕೆ ಮಾಡಿ ಯುವತಿ ವರ್ಷಿತಾ ಮಾತನಾಡಿರುವುದು ಬೆಳಕಿಗೆ ಬಂದಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಕೊಲೆ, ಸಾಕ್ಷ್ಯ ನಾಶ ಕೇಸ್ ದಾಖಲಾಗಿದೆ.

ಚಿತ್ರದುರ್ಗ ನಗರದ ಅಂಬೇಡ್ಕರ್ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಗೃಹ ಸಚಿವ ಡಾ.ಜಿ ಪರಮೇಶ್ವರ ಫೋಟೋ ಹಿಡಿದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಸ್ಪತ್ರೆಯ ಮುಂಭಾಗ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕೊಲೆಯಾದ ಯುವತಿ ಕುಟುಂಬಸ್ಥರ ಮಧ್ಯೆ ವಾಗ್ವಾದ ನಡೆದಿದೆ.

ಹೋರಾಟಕ್ಕೆ ದಲಿತಪರ ಸಂಘಟನೆಗಳು ಸೇರಿ ಹಲವು ಸಂಘಟನೆಗಳು ಸಾಥ್ ಕೊಟ್ಟಿವೆ. ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪೊಲೀಸರ ಹರಸಾಹಸ ಪಟ್ಟರು. ಅವಳು ನನ್ನ ತಂಗಿ ಇದ್ದಂತೆ, ಆರೋಪಿನ ಕೂಡಲೇ ಬಂಧನ ಮಾಡ್ತೀವಿ ಎಂದು ಯುವತಿಯ ಕುಟುಂಬಸ್ಥರಿಗೆ DYSP ದಿನಕರ್ ಭರವಸೆ ನೀಡಿದ್ದರು.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!